Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
Team Udayavani, Nov 27, 2024, 10:56 AM IST
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯ ಸಂಘಬಸವನದೊಡ್ಡಿ ಗ್ರಾಮದ ಬಳಿ ಮಂಗಳ ವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ ಮೂರು ಮಂದಿ ಸಾವಿಗೀಡಾಗಿದ್ದಾರೆ.
ಲಿಯಾಖತ್(50), ಆಸ್ಮಾ(38)ನೂರ್ , ಅಹ್ಮದ್(48)ಮೃತರು. ಇವರು ಬೆಂಗಳೂರಿನ ಶಿವಾಜಿನಗರ ನಿವಾಸಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ, ಮೂರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಶಿವಾಜಿ ನಗರ ನಿವಾಸಿಯಾಗಿರುವ ಲಿಯಾಖತ್ ಮತ್ತು ಆಸ್ಮಾ ದಂಪತಿಗಳು ಮೈಸೂರಿನ ತಮ್ಮ ಮಗಳ ಮನೆಗೆ ಸ್ನೇಹಿತ ನೂರ್ ಅಹ್ಮದ್‌ನ ಕಾರಿನಲ್ಲಿ ಹೊರಟಿದ್ದಾರೆ. ನೂರ್ ಅಹ್ಮದ್ ಕಾರು ಚಾಲನೆ ಮಾಡುತ್ತಿ ದ್ದರು. ಸಂಘಬಸವನದೊಡ್ಡಿ ಸಮೀಪ 10 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರ ಪೊಲೀಸರು ಆಗಮಿಸಿ ಕಾರಿನಲ್ಲಿದ್ದ ಮೃತ ಶವಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.