ಗಾರ್ಮೆಂಟ್ಸ್ ಉದ್ಯಮದಲ್ಲಿ ಉದ್ಯೋಗಾವಕಾಶ
Team Udayavani, Aug 25, 2019, 1:33 PM IST
ಬಿಡದಿಯ ಜನಮುಖೀ ಕೌಶಲಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ್ ಭಾಗವಹಿಸಿದ್ದರು.
ರಾಮನಗರ: ಗಾರ್ಮೆಂಟ್ಸ್ ಉದ್ಯಮದಲ್ಲಿ ಉದ್ಯೋಗವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಯರು ಹೊಲಿಗೆ ತರಬೇತಿ ಪಡೆದು ಆರ್ಥಿಕವಾಗಿ ಸ್ವಾವಲಂಭಿಗಳಾಗಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್ ಅಭಿಪ್ರಾಯಪಟ್ಟರು.
ತಾಲೂಕಿನ ಬಿಡದಿಯ ಜನಮುಖೀ ಕೌಶಲಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಸೀವಿಂಗ್ ಮಷೀನ್ ಆಪರೇಟರ್ (ಎಸ್‌ಎಂಒ) ತರಬೇತಿ ಪಡೆದ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಸ್ತುತ ಗಾರ್ಮೆಂಟ್ಸ್ ಉದ್ಯಮ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಉದ್ಯಮ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ. ಆದರೂ ಮತ್ತಷ್ಟು ಉದ್ಯೋಗಾವಕಾಶಗಳು ಈ ಕ್ಷೇತ್ರದಲ್ಲಿ ಲಭ್ಯವಿದೆ. ಹೊಲಿಗೆ ತರಬೇತಿ ಪಡೆಯುವ ಮಹಿಳೆಯರು ಗಾರ್ಮೆಂಟ್ಸ್‌ನಲ್ಲಿ ಉದ್ಯೋಗ ಪಡೆಯಬಹುದು ಅಥವಾ ಸ್ವಯಂ ಉದ್ಯೋಗಿಗಳಾಗಲು ಅವಕಾಶ ಇದೆ ಎಂದರು.
ಉದ್ಯೋಗಕ್ಕೆ ಅಭ್ಯರ್ಥಿಗಳ ನೇಮಕ: ಜನಮುಖೀ ಕೌಶಲಾಭಿವೃದ್ಧಿ ಕೇಂದ್ರದಲ್ಲಿ 45 ದಿನಗಳ ಕಾಲಾವಧಿಯ ಎಸ್.ಎಂ.ಒ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಪ್ರಸಿದ್ಧ ಗಾರ್ಮೆಂಟ್ಸ್ ಕಂಪನಿಗಳಾದ ಅರವಿಂದ್ ಮತ್ತು ಮಧುರಾ ಮುಂತಾದ ಗಾರ್ಮೆಂಟ್ಸ್‌ಗಳಲ್ಲಿ ಉದ್ಯೋಗವಕಾಶ ಒದಗಿಸಿಕೊಡಲಾಗುವುದು. ಈಗಾಗಲೇ ಕೆಲ ಅಭ್ಯರ್ಥಿಗಳು ಉದ್ಯೋಗಗಳಿಗೆ ನೇಮಕಗೊಂಡಿದ್ದಾರೆ. ಸೀವಿಂಗ್ ಮಷೀನ್ ಆಪರೇಟರ್ ತರಬೇತಿಯನ್ನು ಕಡಿಮೆ ವಿದ್ಯಾರ್ಹ ತೆ ಹೊಂದಿದವರೂ ಸಹ ಪಡೆಯಬಹುದು ಎಂದರು.
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶ್ರಮ: ಕಾರ್ಯಕ್ರಮ ಉದ್ಘಾಟಿಸಿದ ಪುರಸಭೆ ಸದಸ್ಯ ಕುಮಾರ್ ಮಾತನಾಡಿ, ಜನಮುಖೀ ಕೌಶಲಾಭಿವೃದ್ಧಿ ಕೇಂದ್ರ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶ್ರಮಿಸುತ್ತಿದೆ. ತರಬೇತಿ ಪಡೆದ ಅರ್ಹ ಫಲಾನುಭಗಳಿಗೆ ಪುರಸಭೆ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತ ಹೊಲಿಗೆ ಯಂತ್ರ ನೀಡಲು ಪ್ರಯತ್ನಿಸುತ್ತೇವೆ ಎಂದರು. ಜನಮುಖೀ ಟ್ರಸ್ಟ್ ಕಾರ್ಯದರ್ಶಿ ಕುಂಬಾಪುರ ಬಾಬು, ತರಬೇತುದಾರರಾದ ನಳಿನಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.