ಜಾತಿ ನಿಂದನೆ ಆರೋಪ: ಪ್ರತಿಭಟನೆ
Team Udayavani, Sep 30, 2020, 1:03 PM IST
ಕನಕಪುರ: ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಕ್ಕೆ ಕಾರ್ಖಾನೆ ಸೂಪರ್‌ವೈಸರ್ ಮತ್ತು ಆತನ ಸಮುದಾಯವನ್ನು ಅವಮಾನಿಸಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ಕಾರ್ಖಾನೆಯ ಜನರಲ್ ಮ್ಯಾನೇಜರ್ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಚಕಲ್‌ದೊಡ್ಡಿ ರುದ್ರೇಶ್, ಹಾರೋ ಹಳ್ಳಿ ಕೈಗಾರಿಕಾ ಪ್ರದೇಶದ ಪ್ರೋಜ್‌ಪ್ರೋ ಎಂಬ ಕಾರ್ಖಾನೆಯಲ್ಲಿ ನಮ್ಮ ಸಮುದಾಯದ ಶ್ರೀನಿವಾಸ ಮೂರ್ತಿ ಕಳೆದ 12 ವರ್ಷಗಳಿಂದ ಕಾರ್ಖಾನೆ ಮೇಲ್ವಿಚಾರಕನಾಗಿ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಕೊಂಡು ಪ್ರಮಾಣಿಕವಾಗಿಕಾರ್ಯನಿರ್ವಹಿಸುತ್ತಿದ್ದ. ಆದರೆ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯ ವಿಚಾರವಾಗಿ ಕಾರ್ಖಾನೆಯ ಜನರಲ್ ಮ್ಯಾನೇಜರ್ ಚಿದಾನಂದ್ ಹಿರೇಮಠ್ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿ ನೀನು ದಲಿತ ಕುಟುಂಬದವನ್ನು ಎಂದು ನಮ್ಮ ಸಮುದಾಯವನ್ನು ನಿಂದನೆ ಮಾಡಿ, ಕೆಲಸಕ್ಕೆ ಬರಬಾರದು ಎಂದು ಆದೇಶ ನೀಡಿದ್ದಾರೆ ಎಂದು ದೂರಿದರು.
ಹಾರೋಹಳ್ಳಿ ವೃತ್ತ ನೀರಿಕ್ಷಕ ಸತಿಶ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ನಭೆಯಲ್ಲಿ ಕಾರ್ಖಾನೆ ಜನರಲ್ ಮ್ಯಾನೇಜರ್ ಚಿದಾನಂದ್ ಹಿರೇಮs…, ಶ್ರೀನಿವಾಸ್ ಮೂರ್ತಿಯನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಆಗುವುದಿಲ್ಲ ಎಂದಿದ್ದು, ಶ್ರೀನಿವಾಸ್ ಮೂರ್ತಿಯನ್ನು ಮತ್ತೆಕೆಲಸಕ್ಕೆ ನೇಮಕ ಮಾಡಿಕೊಳ್ಳುವವರೆಗೂ ನಮ್ಮ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಕಾರ್ಖಾನೆ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆ ಒಕ್ಕೂಟದ ಡಾ.ಜಿ.ಗೋವಿಂದಯ್ಯ,ಕೋಟೆಕುಮಾರ್ ,ಪ್ರಕಾಶ್, ಬನಶಂಕರಿ ನಾಗು, ಕಲಾºಳು ಲಕ್ಷ್ಮಣ್, ಯಡುವನಹಳ್ಳಿ ಚಂದ್ರು, ಶ್ಯಾಮ್,ಕಾಳರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.