ಕೇಂದ್ರ ಬಜೆಟ್‌: ನಿರೀಕ್ಷೆಗಳು ಹುಸಿ


Team Udayavani, Feb 2, 2021, 7:37 PM IST

Central Budget

ರಾಮನಗರ: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸೋಮವಾರ ಮಂಡಿಸಿದ ಬಜೆಟ್‌-2021 ಜಿಲ್ಲೆಯ ಜನರ ಎಲ್ಲ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಆದರೆ, ರೇಷ್ಮೆ ಆಮದು ಶುಲ್ಕವನ್ನು ಶೇ.10 ರಿಂದ 15ಕ್ಕೆ ಏರಿಸಿರುವುದನ್ನು ರೇಷ್ಮೆ ಕೃಷಿಕರು ಮತ್ತು ರೀಲರ್‌ಗಳು ಸ್ವಾಗತಿಸಿದ್ದಾರೆ. ಉಳಿದಂತೆ ಮೇಕೆ ದಾಟು ಯೋಜನೆಗೆ ಗ್ರೀನ್‌ ಸಿಗ್ನಲ್‌ ನೀಡಿ ಅನುದಾನವನ್ನು ಮೀಸಲಿಡುವ ಭರವಸೆ ಹುಸಿಯಾಗಿದೆ.

ಕೇಂದ್ರ ಸರ್ಕಾರದ ಬಜೆಟ್‌ ಬಗ್ಗೆ ಹೆಚ್ಚೇನು ನಿರೀಕ್ಷೆಗಳನ್ನು ಸಾಮಾನ್ಯವಾಗಿ ಇಟ್ಟು ಕೊಳ್ಳುವುದಿಲ್ಲ. ಆದರೆ, ಕೋವಿಡ್‌-19 ಹಿನ್ನೆಲೆ ನಲುಗಿರವ ಆರ್ಥಿಕತೆಯ ಜಿಗಿತಕ್ಕೆ ಪೂರಕ ಬಜೆಟ್‌ನ್ನು ಜಿಲ್ಲೆಯ ಜನತೆ ನಿರೀಕ್ಷಿಸಿದ್ದರು. ಮಾವು, ಆಹಾರ ಸಂಸ್ಕರಣ ಕ್ಷೇತ್ರಗಳ ವಿಚಾರದಲ್ಲಿ ರಾಮನಗರದಲ್ಲಿ ವಿಶೇಷ ಯೋಜನೆ ಘೋಷಿಸಿ, ಜಿಲ್ಲೆಯ ಆರ್ಥಿಕ ಸ್ಥಿತಿಯ ಸುಧಾರಣೆಗೆ ದಾರಿ ಮಾಡುಕೊಡುತ್ತಾರೆ ಎಂಬ ನಿರೀಕ್ಷೆ ಇತ್ತು. ದೇಶದ ಒಟ್ಟಾರೆ ಆರ್ಥಿಕ ವ್ಯವಸ್ಥೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆಯಾದರು, ಜಿಲ್ಲೆಗೇನೂ ಸಿಕ್ಕಿಲ್ಲ ಎಂಬ ಕೊರಗು ಜಿಲ್ಲೆಯ ಜನರಲ್ಲಿ ಮನೆ ಮಾಡಿದೆ.

ರೈತರ ಆದಾಯ ದ್ವಿಗುಣ: ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಆಯವ್ಯಯದಲ್ಲಿ ವಿತ್ತ ಸಚಿವರು ಪುನರುಚ್ಚರಿಸಿದ್ದಾರೆ. ಆದರೆ, ಇದಕ್ಕೆ ಪೂರಕವಾದ ಅಂಶಗಳು ಬಜೆಟ್‌ನಲ್ಲಿ ಇಲ್ಲ. ಕಳೆದ ವರ್ಷದ ಬಜೆಟ್‌ನಲ್ಲೂ ಪೂರಕ ಅಂಶಗಳು ಇರಲಿಲ್ಲ. ಕಳೆದ ಬಜೆಟ್‌ನಲ್ಲಿ ಕಿಸಾನ್‌ ರೈಲಿನ ಬಗ್ಗೆ ವಿತ್ತ ಸಚಿವರು ಹೇಳಿದ್ದರು.

ಕಿಸಾನ್‌ ರೈಲು ಯಾವ ನಿಲ್ದಾಣದಲ್ಲಿ ನಿಂತಿದೆ. ಸ್ವಾಮಿನಾಥನ್‌ ವರದಿ ಜಾರಿ ಮಾಡದಿರುವ ಬಗ್ಗೆ ಜಿಲ್ಲೆಯ ರೈತ ಸಮುದಾಯ ಅಸಮಾಧಾನಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಕಳೆದ ಬಾರಿ 30 ಸಾವಿರ ಕೋಟಿ ರೂ. ನೀಡಲಾಗಿತ್ತು. ಈ ಬಾರಿ 40 ಸಾವಿರ ಕೋಟಿ ರೂ. ನೀಡಲಾಗಿದೆ ಎಂದು ವಿತ್ತ ಸಚಿವರು ಘೋಷಿಸಿದ್ದಾರೆ. ಆದರೆ, ಯಾವ ಗ್ರಾಮೀಣ ಪ್ರದೇಶ ಉದ್ದಾರವಾಗಿದೆ. ಟೊಮೇಟೋ, ಈರುಳ್ಳಿ, ಆಲೂಗಡ್ಡೆಯ ಜೊತೆಗೆ ಬೇಗ ಕೊಳೆಯುವ 22 ಆಹಾರ ಪದಾರ್ಥಗಳನ್ನು ಆಪರೇಷನ್‌ ಗ್ರೀನ್‌ ಸ್ಕೀಂನಡಿ ತರುಲು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಇದನ್ನೂ ಓದಿ:ಆಕಸ್ಮಿಕ ಬೆಂಕಿಗೆ ಬಣವೆ,ತೊಗರಿ ಬೆಳೆ ನಾಶ; ಭೇಟಿ

ರೈತರ ಮನವೊಲಿಕೆ ಯತ್ನ: ಕೃಷಿ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಮೂಲ ಸೌಕರ್ಯ ವೃದ್ಧಿಗೆ 40 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಗಳಲ್ಲಿ ಇ-ನಾಮ್‌ ಸೇರಿದಂತೆ ಮೂಲ ಸೌಕರ್ಯ ವೃದ್ಧಿಗೆ ಈ ಹಣವನ್ನು ಉಪಯೋಗಿಸಿಕೊಳ್ಳುವುದಾಗಿ ವಿತ್ತ ಸಚಿವರು ಹೇಳಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸುತ್ತಿರುವ ರೈತರ ಮನವೊಲಿಕೆಗೆ ನಡೆದಿರುವ ಪ್ರಯತ್ನ ಇದು ಎಂಬುದು ರೈತರ ಆರೋಪವಾಗಿದೆ.

ಸೂರ್ಯಪ್ರಕಾಶ್‌

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.