Chain Theft: ವೃದ್ಧೆಗೆ ಚಾಕು ತೋರಿಸಿ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು ಪರಾರಿ
Team Udayavani, Jun 9, 2024, 10:54 AM IST
ಚನ್ನಪಟ್ಟಣ: ನಗರದಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ 2 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರವನ್ನು ಇಬ್ಬರು ದುಷ್ಕರ್ಮಿಗಳು ಕಸಿದುಕೊಂಡು ಪರಾರಿಯಾಗಿದ್ದಾರೆ. ನಗರದ ರಾಷ್ಟ್ರೀಯ ಹೆದ್ದಾರಿ 48 ರ ದೊಡ್ಡೇರಿ ಬಳಿಯಲ್ಲಿ ಶನಿವಾರ ಬೆಳಗಿನ ಜಾವ 6 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ.
ತಾಲೂಕಿನ ದೊಡ್ಡೇರಿ ಗ್ರಾಮದ ನಿವಾಸಿ ಚಿಕ್ಕ ತಾಯಮ್ಮ (65) ಎಂಬುವರರು ಬೆಳಗಿನ ಜಾವ 6 ಗಂಟೆ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯಲ್ಲಿ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಅವರ ಅಕ್ಕಪಕ್ಕ ಯಾರೂ ಇರಲಿಲ್ಲ. ಆಕೆ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ಇಬ್ಬರು ಕಳ್ಳರು ಏಕಾ ಏಕಿ ಎದುರು ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಇದಕ್ಕೆ ಆಕೆ ಪ್ರತಿರೊಧ ವ್ಯಕ್ತಪಡಿಸಿದಾಗ ದುಷ್ಕಮಿಗಳು ತಮ್ಮಲ್ಲಿದ್ದ ಚಾಕು ತೋರಿಸಿ ಸರ ಕಿತ್ತು ಕೊಂಡಿದ್ದಾರೆ. ಸುಮಾರು 60 ಗ್ರಾಂ ಮಾಂಗಲ್ಯ ಸರದ ಅರ್ಧಭಾಗ ಕಿತ್ತೂಯ್ದಿದ್ದಾರೆ. ಚಿಕ್ಕತಾಯಮ್ಮ ಸುಮಾರು 2 ಲಕ್ಷ ರೂ. ಬೆಲೆಬಾಳುವ 35 ಗ್ರಾಂ ಸರವನ್ನು ಕಳೆದುಕೊಂಡಿದ್ದಾರೆ.
ಈ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಚಿಕ್ಕತಾಯಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನಾಸ್ಥಳಕ್ಕೆ ನೆಲಮಂಗಲ ಪೊಲೀಸ್ ಉಪವಿಭಾಗಾಧಿಕಾರಿ ಜಗದೀಶ್, ಪೊಲೀಸ್ ಇನ್ಸ್‌ಪೆಕ್ಟರ್ ರಾಜೀವ್, ಪೊಲೀಸ್ ಸಿಬ್ಬಂದಿಗಳಾದ ಮುನಿರಾಜು, ಲಕ್ಷ್ಮಣ್, ಶ್ರೀನಿವಾಸಯ್ಯ, ಭೇಟಿ ನೀಡಿ ಪರಿಶೀಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.