ರಸ್ತೆಯಲ್ಲಿಯೇ ಕೋಳಿ ತ್ಯಾಜ್ಯ ವಿಲೇವಾರಿ


Team Udayavani, Jan 24, 2019, 7:21 AM IST

koli.jpg

ಚನ್ನಪಟ್ಟಣ: ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ಕೆಲ ಅಂಗಡಿಗಳ ಮಾಲೀಕರು ರಸ್ತೆ ಬದಿ ಮತ್ತು ನಿರ್ಜನ ಪ್ರದೇಶಗಳಲ್ಲಿ ಬಿಸಾಡಿ ಹೋಗುತ್ತಿದ್ದು, ದುರ್ವಾಸನೆ ಬೀರುವ ಈ ತ್ಯಾಜ್ಯದಿಂದ ರಸ್ತೆಯಲ್ಲಿ ಸಂಚಾರಿಸುವ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಗುಂಡಿತೆಗೆದು, ಕೋಳಿ ತ್ಯಾಜ್ಯವನ್ನು ಅದರಲ್ಲಿ ಮುಚ್ಚಿ ವಿಲೇವಾರಿ ಮಾಡಬೇಕಾಗಿರುವುದು ನಿಯಮವಾಗಿದ್ದು, ಕೆಲವರು ಈ ಗೋಜಿಗೆ ಹೋಗದೆ ಪ್ಲಾಸ್ಟಿಕ್‌ ಚೀಲಗಳಲ್ಲಿ ತ್ಯಾಜ್ಯವನ್ನು ತುಂಬಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಆ ಪ್ರದೇಶದ ವಾತಾವರಣ ಕಲುಷಿತವಾಗುವ ಜತೆಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ಪ್ರಯಾಣಿಕರ ಸಂಚಾರಕ್ಕೆ ಅಡ್ಡಿ: ಬೆಂಗಳೂರು- ಮೈಸೂರು ಹೆದ್ದಾರಿ, ಪಟ್ಟಣದ ಹೊರ ವಲಯದ ರಾಮಮ್ಮನ ಕೆರೆ ಏರಿ, ಸಾತನೂರು ರಸ್ತೆ, ಗ್ರಾಮಾಂತರ ಪ್ರದೇಶದ ದೇವರಹೊಸಹಳ್ಳಿ, ಕೂಡೂರು, ಹೊಂಗನೂರು, ಕೋಡಂಬಹಳ್ಳಿ ಸೇರಿದಂತೆ ಹಲವೆಡೆ ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿರುವುದರಿಂದ ಸಂಚಾರ ಮಾಡುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ತ್ಯಾಜ್ಯ ದುರ್ವಾಸನೆ ಬೀರುವುದರ ಜತೆಗೆ ಇದನ್ನು ತಿನ್ನಲು ಆಗಮಿಸುವ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಇನ್ನಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಬದಿಯಲ್ಲಿಯೇ ಕೋಳಿ ಮಾಂಸ ಆಸ್ವಾದಿಸುತ್ತಾ, ರಸ್ತೆಯಲ್ಲಿ ಹೋಗುವ ಸಾರ್ವಜನಿಕರ ಮೇಲೆ ನಾಯಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಏನಿದು ಕೋಳಿ ತ್ಯಾಜ್ಯ?: ಕೋಳಿಯನ್ನು ಸ್ವತ್ಛ ಮಾಡಿದ ನಂತರ ಅದರ ದೇಹದಲ್ಲಿನ ನಿರುಪಯುಕ್ತ ಭಾಗಗಳನ್ನೇ ಕೋಳಿ ತ್ಯಾಜ್ಯ ಎನ್ನಲಾಗುತ್ತದೆ. ಕೋಳಿಯನ್ನು ಸ್ವತ್ಛ ಮಾಡುವಾಗ ಅದರ ದೇಹದೊಳಗಿನ ಕರುಳು, ಮೇಲಾºಗದ ರೆಕ್ಕೆ ಪುಕ್ಕಗಳು, ಕಾಲಿನ ಸ್ವಲ್ಪ ಭಾಗವನ್ನು ತೆಗದು ಹಾಕಲಾಗುತ್ತದೆ.

ನಂತರ ಅದನ್ನು ಒಂದೆಡೆ ಶೇಖರಿಸಿ ವಿಲೇವಾರಿ ಮಾಡಲಾಗುತ್ತದೆ. ಈ ತ್ಯಾಜ್ಯವನ್ನು ನಿರ್ಜನ ಪ್ರದೇಶಗಳಲ್ಲಿ ಗುಂಡಿ ತೆಗೆದು, ಕೋಳಿ ತ್ಯಾಜ್ಯ ಮುಚ್ಚುವ ಮೂಲಕ ವಿಲೇವಾರಿ ಮಾಡಬೇಕಾಗಿದೆ. ಕೆಲ ಕೋಳಿ ಅಂಗಡಿ ಮಾಲೀಕರು ಇದನ್ನು ಅನುಸರಿಸಿದರೆ ಇನ್ನೂ ಕೆಲವರು ರಸ್ತೆ ಬದಿಯಲ್ಲಿ ಬಿಸಾಡಿ ಕೈ ತೊಳೆದುಕೊಳ್ಳುತ್ತಿದ್ದಾರೆ.

ಬೀದಿ ನಾಯಿಗಳ ಹಾವಳಿ: ಎಲ್ಲೆಂದರಲ್ಲಿ ಬಿಸಾಡುತ್ತಿರುವ ಈ ಕೋಳಿ ತ್ಯಾಜ್ಯದಿಂದಾಗಿ ಬೀದಿ ನಾಯಿಗಳಿಗೆ ಪ್ರತಿದಿನ ಮೃಷ್ಠಾನ್ನ ಭೋಜನವಾಗಿದೆ. ಇದನ್ನು ತಿಂದು ದಷ್ಟಪುಷ್ಟವಾಗಿ ಕೊಬ್ಬಿರುವ ಬೀದಿ ನಾಯಿಗಳು ಕೆರೆಯಂಗಳದಲ್ಲಿ ಒಂಟಿಯಾಗಿ ಮೇಯುವ ಕುರಿ, ದನ, ಕರುಗಳ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ.

ಇದರ ಜತೆಗೆ ರಸ್ತೆ ಬದಿಯಲ್ಲಿ ಸಂಚಾರಿಸುವ ಸಾರ್ವಜನಿಕರ ಮೇಲೂ ಸಹ ದಾಳಿ ನಡೆಸುತ್ತಿವೆ. ತಾಲೂಕಿನ ದೇವರಹೊಸಹಳ್ಳಿ ಭಾಗದಲ್ಲಿ ತ್ಯಾಜ್ಯವನ್ನು ತಿನ್ನಲು ಕಾಡಿನಿಂದ ಚಿರತೆಗಳೂ ಸಹ ಗ್ರಾಮಗಳತ್ತ ಬರುತ್ತಿದ್ದು, ಆ ಭಾಗದಲ್ಲಿ ತ್ಯಾಜ್ಯದ ಜತೆಗೆ ಕರುಗಳು, ಕುರಿಗಳನ್ನೂ ಸಹ ತಿಂದಿರುವ ಉದಾಹರಣೆಗಳು ಸಾಕಷ್ಟಿವೆ.

ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ: ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡಿ ಕೈತೊಳೆದು ಕೊಳ್ಳುತ್ತಿರುವ ಕೋಳಿ ಅಂಗಡಿಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾದ ತಾಲೂಕು ಆಡಳಿತ ಹಾಗೂ ಆರೋಗ್ಯಾಧಿಕಾರಿಗಳ ಜಾಣ ಕುರುಡಿನಿಂದ ಈ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಸಂಬಂಧಿಸಿದ ಗ್ರಾಮ ಪಂಚಾಯ್ತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕೃತ್ಯ ಎಸಗುತ್ತಿರುವ ಕೋಳಿ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜತೆಗೆ ಅವರ ಅಂಗಡಿ ಪರವಾನಗಿಯನ್ನೇ ರದ್ದುಪಡಿಸಬೇಕು. ನಿರ್ಜನ ಪ್ರದೇಶಗಳಲ್ಲಿ ಸಮರ್ಪಕವಾಗಿ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಸೂಚನೆ ಹೊರಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಮಾಡಿದ್ದಾರೆ. 

ಪಟ್ಟಣ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಕೋಳಿ ಅಂಗಡಿಗಳ ಮಾಲೀಕರಿಗೆ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಸೂಚಿಸಲಾಗುವುದು. ನಿಯಮ ಅನುಸರಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಲು ಆರೋಗ್ಯ ವಿಭಾಗದ ಅಧಿಕಾರಿಗಳನ್ನು ಪರಿಶೀಲನೆಗೆ ಕಳುಹಿಸಲಾಗುವುದು. ನಿಯಮ ಉಲ್ಲಂಘನೆ ಮಾಡುವವರಿಗೆ ಪರವಾನಗಿ ರದ್ದುಪಡಿಸಲಾಗುವುದು.
-ಪುಟ್ಟಸ್ವಾಮಿ, ಪೌರಾಯುಕ್ತ

ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ಬಿಸಾಡುವುದರಿಂದ ನಾಯಿಗಳ ಅದನ್ನು ತಿನ್ನಲು ಬಂದು ಪಕ್ಕದಲ್ಲಿ ಪಾದಚಾರಿಗಳ ಮೇಲೆ ಎರಗುತ್ತಿವೆ. ಇದರಿಂದ ರಸ್ತೆ ಸಂಚಾರ ಮಾಡಲು ಭಯವಾಗುತ್ತಿದೆ. ಸಂಬಂಧಪಟ್ಟ ಆಡಳಿತ ಈ ಬಗ್ಗೆ ಗಮನಹರಿಸಿ ಸಮಸ್ಯೆ ಸರಿಪಡಿಸಬೇಕು.
-ಮಹೇಂದ್ರಕುಮಾರ್‌, ಚನ್ನಪಟ್ಟಣ

* ಎಂ.ಶಿವಮಾದು

ಟಾಪ್ ನ್ಯೂಸ್

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.