ಮಕ್ಕಳ ಶಾಲಾ ಬ್ಯಾಗ್ ತೂಕ ನಿಗದಿಗೆ ಆದೇಶ

1, 2ನೇ ತರಗತಿ ಮಕ್ಕಳ ಬ್ಯಾಗ್‌ ತೂಕ 2 ಕೆ.ಜಿ. ಇರಲಿ ,ಪ್ರತಿ ತಿಂಗಳ 3ನೇ ಶನಿವಾರ ಬ್ಯಾಗ್‌ ರಹಿತ ದಿನ

Team Udayavani, May 5, 2019, 12:51 PM IST

ramanagar-tdy-1..

ರಾಮನಗರ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದೇಹದ ಸರಾಸರಿ ತೂಕದ ಶೇ.10ರಷ್ಟು ಮೀರದಂತೆ ಶಾಲಾ ಬ್ಯಾಗಿನ ತೂಕ ಇರಬೇಕು ಎಂದು ಸರ್ಕಾರ ಆದೇಶ ನೀಡಿದೆ. ಜೊತೆಗೆ 1 ಮತ್ತು 2ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡದಂತೆ ಆದೇಶಿಸಿದೆ.

ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ ಹೊರೆ ತಗ್ಗಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸರ್ಕಾರ ದಿನಾಂಕ 3.5.19ರಂದು ತನ್ನ ಆದೇಶದಲ್ಲಿ 2019-20ನೇ ಸಾಲಿನಲ್ಲಿ ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ ಹೊರ ಕಡಿಮೆ ಮಾಡಲು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದೆ.

ಯಾವ ತರಗತಿಗೆ ಎಷ್ಟು ತೂಕ?: 1 ಮತ್ತು 2ನೇ ತರಗತಿ ವಿದ್ಯಾರ್ಥಿಗಳ ತೂಕ 1.5ರಿಂದ 2 ಕೆ.ಜಿ. ಮೀರುವಂತಿಲ್ಲ. 3ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 2ರಿಂದ 3 ಕೆ.ಜಿ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳ ಬ್ಯಾಗಿನ ತೂಕ 3ರಿಂದ 4 ಕೆ.ಜಿ, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗಿನ ತೂಕ 4ರಿಂದ 5 ಕೆ.ಜಿ. ಇರಬೇಕು ಎಂದು ಸರ್ಕಾರ ಸೂಚಿಸಿದೆ.

ಅತಿಯಾದ ಹೊರೆಯಿರುವ ಶಾಲಾ ಬ್ಯಾಗಿನಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು. ಕಡಿಮೆ ಖರ್ಚಿನ, ಹಗುರವಾಗಿರುವ ಹಾಗೂ ದೀರ್ಘ‌ಕಾಲ ಬಾಳಿಕೆ ಬರುವಂತಹ ಶಾಲಾ ಬ್ಯಾಗ್‌ ಹಾಗೂ ಇನ್ನಿತರ ಲೇಖನ ಸಾಮಗ್ರಿಗಳನ್ನು ಬಳಸುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತೆಯೂ ಸರ್ಕಾರ ತನ್ನ ಆದೇಶದಲ್ಲಿ ಸೂಚಿಸಿದೆ.

ಶಾಲೆಗಳಲ್ಲಿ ಅವಶ್ಯ ಸಾಮಗ್ರಿ ವ್ಯವಸ್ಥೆ: ಶಾಲೆಗಳ ಗ್ರಂಥಾಲಯಗಳಲ್ಲಿ ಸಮಾನಾರ್ಥಕ ಪದಕೋಶ, ಅಟ್ಲಾಸ್‌, ಜ್ಞಾನ- ವಿಜ್ಞಾನ ಕೋಶಗಳಂತಹ ಪರಾಮರ್ಶನ ಸಾಮಗ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗುವಂತೆ ಮತ್ತು ಮಕ್ಕಳು ಇವುಗಳನ್ನು ಅವಶ್ಯಕತೆ ಇದ್ದಾಗ ಬಳಸಿಕೊಳ್ಳಲು ಶಾಲೆಗಳಲ್ಲಿ ವ್ಯವಸ್ಥೆ ಮಾಡಬೇಕು. ಅಭ್ಯಾಸ ಚಟುವಟಿಕೆಗಳನ್ನು ಶಾಲೆಗಳಲ್ಲಿ ಮಾಡಿಸಿ ಫೈಲ್ ಮಾಡಿಸುವುದು, ಅವಶ್ಯಕತೆ ಇದ್ದಾಗ ಪರಾಮರ್ಶಿಸಲು ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡಬೇಕು.

ವಿದ್ಯಾರ್ಥಿಯು ಮನೆಯಿಂದ ಶಾಲೆಗೆ, ಶಾಲೆಯಿಂದ ಮನೆಗೆ ತೆಗೆದುಕೊಂಡು ಹೋಗುವ ಪಠ್ಯ ಪುಸ್ತಕಗಳು, ನೋಟ್ ಪುಸ್ತಕಗಳು, ಲೇಖನ ಸಾಮಗ್ರಿಗಳು, ಕಲಿಕಾ ಉಪಕರಣಗಳು ಹಾಗೂ ಇನ್ನಿತರ ವಸ್ತುಗಳನ್ನು ತರಗತಿಯೊಳಗೆ ಶೇಖರಿಸಲು ಅನುಕೂಲ ಮಾಡಿಕೊಂಡಬೇಕು ಎಂದು ಸೂಚಿಸಿರುವ ಸರ್ಕಾರ, ಎಲ್ಲಾ ಶಾಲೆಗಳಲ್ಲೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೈಗೊಳ್ಳುವುದರಿಂದ ಮಕ್ಕಳು ಮನೆಯಿಂದ ನೀರು ತರುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟಿದೆ. ನೋಟ್ ಪುಸ್ತಕಗಳ ಹಾಳೆಗಳ ಬಗ್ಗೆಯೂ ಸರ್ಕಾರ ನಿಗಾವಹಿಸಿದ್ದು, 100 ಹಾಳೆಗಳು ಮೀರಬಾರದು. ಅಲ್ಲದೆ, ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್‌ ರಹಿತ ದಿನ’ವನ್ನಾಗಿ ಆಚರಿಸುವಂತೆಯೂ ಸಲಹೆ ನೀಡಿದೆ.

ಮೂಳೆ ತಜ್ಞರ ಅಭಿಪ್ರಾಯ ಪಡೆದಿದೆ: ಶಾಲಾ ಬ್ಯಾಗ್‌ನ ಹೊರೆ ತಗ್ಗಿಸುವ ಕುರಿತು ಡಿಸಿಆರ್‌ಟಿಯು ಸೆಂಟರ್‌ ಫಾರ್‌ ಚೈಲ್ಡ್ ಆಂಡ್‌ ಲಾ, ಎನ್‌ಎಲ್ಎಸ್‌ಯುಎಲ್, ಬೆಂಗಳೂ ಇವರ ಸಹೋಗದಲ್ಲಿ 2016-17ನೇ ಸಾಲಿನಲ್ಲಿ ಕೈಗೊಂಡ ಅಧ್ಯಯನದಲ್ಲಿ ತಜ್ಞರ ತಂಡಗಳು ಶಾಲೆಗಳಿಗೆ ಭೇಟಿ ನೀಡಿ ಪ್ರಶ್ನಾವಳಿಗಳ ಮೂಲಕ ಉತ್ತರಗಳ ಅಧ್ಯಯನ ನಡೆಸಿ ಮಾರ್ಗದರ್ಶಿ ನಿಯಮಗಳನ್ನು ರೂಪಿಸಲಾಗಿದೆ ಎಂದು ಸರ್ಕಾರ ತನ್ನ ಆದೇಶವನ್ನು ಸಮರ್ಥಿಸಿಕೊಂಡಿದೆ. ಮಕ್ಕಳ ದೇಹದ ತೂಕದ ಶೇ.10ರಿಂದ 15ರಷ್ಟು ತೂಕದ ಪಠ್ಯ ಪುಸ್ತಕಗಳನ್ನು ತೆಗೆದುಕೊಂಡ ಹೋಗಬಹುದು ಎಂದು ಮೂಳೆ ತಜ್ಞರ ಅಭಿಪ್ರಾಯವನ್ನು ಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.