ದುರಸ್ತಿ ಕಾಣದ ಶುದ್ಧ ನೀರಿನ ಘಟಕ


Team Udayavani, Jun 12, 2022, 12:38 PM IST

ದುರಸ್ತಿ ಕಾಣದ ಶುದ್ಧ ನೀರಿನ ಘಟಕ

ಕುದೂರು: ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸು ವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ.

ಆದರೆ, ಅದು ಕೆಟ್ಟರೆ ಮತ್ತೆ ದುರಸ್ತಿಗೊಳಿ ಸದೆ ಆಡಳಿತ ಯಂತ್ರ ಕಡೆಗಣಿಸಿರುವು ದರಿಂದ ಗ್ರಾಮಗಳಲ್ಲಿ ಮತ್ತೆ ಹಳೆಯ ಪದ್ಧತಿ ಮರಳುವಂತಿದೆ. ಮಾಗಡಿ ತಾಲೂಕಿನ ಬಿಸ್ಕೂರು ಗ್ರಾಪಂ ವ್ಯಾಪ್ತಿಯ ಬಿಸಲಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವರ್ಷವೇ ಕಳೆದರೂ ಈವರೆಗೂ ಇದನ್ನು ಯಾರೂ ದುರಸ್ತಿಗೊಳಿಸಿಲ್ಲ. ಈ ಗ್ರಾಮಗಳಲ್ಲಿ ಪ್ಲೊರೈಡ್‌ ಅಂಶ ಅಧಿಕವಾಗಿದ್ದು, ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ನಿತ್ಯ ಒಂದಲ್ಲ ಒಂದು ಅನಾರೋಗ್ಯಕ್ಕೆ ಸಿಲುಕಿ ಪರದಾಡುತ್ತಿದ್ದರು. ಈ ಹಿನ್ನೆಲೆ ಸರ್ಕಾರ ಶುದ್ಧ ನೀರಿನ ಘಟಕ ಅಳವಡಿಸಿತ್ತು. ಆದರೆ, ಯಂತ್ರಗಳು ಕೆಟ್ಟ ಬಳಿಕ ಕೇಳುವವರೇ ಇಲ್ಲ. ಬಿಸಲಹಳ್ಳಿ, ಬಸವನಗುಡಿಪಾಳ್ಯ ಗ್ರಾಮದಲ್ಲಿ ಅಧಿಕ ಪ್ರಮಾಣದ ಪ್ಲೊರೈಡ್‌ ಅಂಶವಿದೆ.

ಗ್ರಾಪಂ, ಜಿಪಂ, ಶಾಸಕರ ನಿರ್ಲಕ್ಷ್ಯ: ಬಸನಗುಡಿ ಪಾಳ್ಯ ಮತ್ತು ಬಿಸಲಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವರ್ಷಗಳೇ ಕಳೆದರೂ, ಯಾರೂ ಗ್ರಾಮದ ಕಡೆ ಮುಖ ಮಾಡಿಲ್ಲ. ಈ ಎರಡು ಗ್ರಾಮದವರು ಶುದ್ಧ ಕುಡಿಯುವ ನೀರು ಕುಡಿಯಲು ತರಲು 3 ಕಿ.ಮೀ. ದೂರದ ಕುದೂರು ಇಲ್ಲವೇ ಮರೂರು ಹ್ಯಾಂಡ್‌ ಪೋಸ್ಟ್‌ ಬಳಿಗೆ ಹೋಗಿ ಶುದ್ಧ ನೀರನ್ನು ತರುವ ಪರಿಸ್ಥಿತಿ ಎದುರಾಗಿದೆ. ಪ್ರತಿದಿನವೂ ಕೆಲಸ, ಕಾರ್ಯ ಬಿಟ್ಟು ದೂರದ ಊರುಗಳಿಗೆ ಅಲೆಯುವಂತಾಗಿದೆ.

ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾಪಂಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಜಿಪಂ ಎಇಇ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ. ಇನ್ನು ಶಾಸಕರ ಗಮನಕ್ಕೆ ತಂದರೂ ಆಸಕ್ತಿ ತೋರುತ್ತಿಲ್ಲ ಎಂದು ಗ್ರಾಮದ ಹಿರಿಯರು ಆರೋಪಿಸಿದ್ದಾರೆ.

ಯಂತ್ರೋಪಕರಣ ತುಕ್ಕು ಹಿಡಿಯುತ್ತಿವೆ: ತಾಲೂಕಿನ ಗ್ರಾಮಗಳಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾಯ ನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ. ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

ಶೀಘ್ರದಲ್ಲೇ ಸಮಸ್ಯೆಗೆ ಪರಿಹಾರ: ಭರವಸೆ : ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರುಪಯುಕ್ತ ವಾಗಿರುವ ಬಗ್ಗೆ ಮಾಹಿತಿ ಬಂದಿದೆ. ದುರಸ್ತಿ ಬಗ್ಗೆ ಕ್ರಮ ವಹಿಸಲಾಗುವುದು. ತ್ವರಿತವಾಗಿ ಎರಡು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸಿ ಶೀಘ್ರದಲ್ಲೇ ಜನರಿಗೆ ಶುದ್ಧ ನೀರು ಪೂರೈಸಲು ಕ್ರಮ ವಹಿಸಲಾಗುವುದು ಎಂದು ಡಿ.ಕೆ. ಚಾರಿಟಬಲ್‌ ಟ್ರಸ್ಟ್‌ ತಿಳಿಸಿದೆ.

ನೀರಿನ ಘಟಕ ನಮ್ಮ ಪಂಚಾಯಿತಿಗೆ ಸುಪರ್ದಿಗೆ ನೀಡಿಲ್ಲ. ಡಿ.ಕೆ.ಟ್ರಸ್ಟ್‌ ಅಂತ ಮಾಡಿಕೊಂಡು ಅವರೇ ಘಟಕ ಸ್ಥಾಪಿಸಿ ಅವರ ಸುಪರ್ದಿನಲ್ಲೇ ಇದೆ. ನಾವೂ ಕೂಡ 3 ಬಾರಿ ರಿಪೇರಿ ಮಾಡಿ ಸಿದ್ದೇವೆ. ಟ್ರಸ್ಟ್‌ನವರು ನಮ್ಮ ಪಂಚಾಯಿತಿ ಸುಬರ್ಧಿಗೆ ಬಿಟ್ಟರೆ ನಾವು ಘಟಕವನ್ನು ನಿರ್ವಹಿಸುತ್ತೇವೆ. -ಲಕ್ಷ್ಮಮ್ಮ, ಬಿಸ್ಕೂರು ಗ್ರಾಪಂ ಅಧ್ಯಕ್ಷೆ

ನೀರಿನ ಘಟಕವನ್ನು ಶೀಘ್ರದಲ್ಲೇ ದುರಸ್ತಿಗೊಳಿಸಬೇಕು. ಇದು ಹಾಳಾಗಿರುವ ಕಾರಣ ಕುಡಿಯುವ ನೀರಿಗಾಗಿ ಅಲೆಯಬೇಕಿದೆ. ಇಲ್ಲಿನ ಘಟಕ ದುರಸ್ತಿ ಯಾದರೆ, ಸುತ್ತಮುತ್ತಲಿನ ನಾಗರಿಕರಿಗೆ ನೀರಿನ ಸಮಸ್ಯೆ ನಿವಾರಣೆ ಆಗಲಿದೆ. – ಆರಾಧ್ಯ, ಬಿಸಲಹಳ್ಳಿ ಗ್ರಾಮಸ್ಥ

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.