ಬಿಡದಿ ಟೌನ್ ಶಿಪ್‌ಗೆ ಸಿಎಂ ಆಸಕ್ತಿ!
Team Udayavani, May 13, 2020, 9:20 AM IST
ರಾಮನಗರ: ತಾಲೂಕಿನ ಬಿಡದಿ ಬಳಿಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಸಕ್ತಿ ವಹಿಸಿದ್ದು, ಯಾವುದೇ ಕಾರಣಕ್ಕೂ ಭೂ ಮಾಲಿಕ ರೈತರಿಗೆ ಅನ್ಯಾಯ ವಾಗಲು ಬಿಡುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.
ಟೌನ್‌ಶಿಪ್‌ಗೆ ಗುರುತಿಸ ಲಾಗಿರುವ 9,600 ಎಕರೆ ಭೂಮಿಯ ಪೈಕಿ ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕೆಐಎಡಿಬಿ ಸುಮಾರು 1100 ಎಕರೆಯ ಭೂಸ್ವಾಧೀನಕ್ಕೆ ಮುಂದಾಗಿರುವ ವಿಚಾರದಲ್ಲಿ ಕೆಐಎಡಿಬಿ, ನಗರಾಭಿವೃದಿ ಇಲಾಖೆ ಮತ್ತು ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಪ್ರಾಧಿಕಾರದ ಸಭೆ ಆಯೋಜಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಇತ್ತೀಚೆಗೆ ಮಾಗಡಿ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿತ್ತು. ಟೌನ್‌ಶಿಪ್ ಬಗ್ಗೆ ಚರ್ಚಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ, ಎಂಎಲ್‌ಸಿ ಸಿಎಂ ಲಿಂಗಪ್ಪ, ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಪ್ರಾಧಿಕಾರದ ಅಧ್ಯಕ್ಷ ವರದರಾಜ ಗೌಡ, ಜಿಲ್ಲಾ ಬಿಜೆಪಿ ಅದ್ಯಕ್ಷ ಎಂ.ರುದ್ರೇಶ್, ತಾಪಂ ಮಾಜಿ ಅಧ್ಯಕ್ಷ ಗಾಣಕಲ್ ನಟರಾಜ್,
ಮುಖಂಡ ರಾಜಣ್ಣ ಮತ್ತು ಆ ಭಾಗದ ರೈತ ಮುಖಂಡರನ್ನು ಆಹ್ವಾನಿಸಿದ್ದರು. ಈ ಸಭೆಯಲ್ಲಿ ಮುಖ್ಯಂತ್ರಿಗಳು ಟೌನ್‌ಶಿಪ್ ಬಗ್ಗೆ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಟೌನ್‌ಶಿಪ್‌ಗೆ ಗುರುತಿಸಿರುವ ಭೂಮಿಯ ಪೈಕಿ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಪ್ರಕ್ರಿಯೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಯನ್ನು ಸದ್ಯದಲ್ಲೇ ಆಯೋಜಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.