Ramanagara: ಜಿಲ್ಲೆಯಲ್ಲಿ ಭರ್ಜರಿ ದಂಡ ವಸೂಲಿ

Team Udayavani, Aug 7, 2023, 4:05 PM IST

Ramanagara: ಜಿಲ್ಲೆಯಲ್ಲಿ ಭರ್ಜರಿ ದಂಡ ವಸೂಲಿ

ರಾಮನಗರ: ಬೆಂಗಳೂರು, ಮೈಸೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ದಂಡಾಸ್ತ್ರ ಪ್ರಯೋಗಿಸಲು ಆರಂಭಿಸಿದ ಜಿಲ್ಲಾ ಪೊಲೀಸ್‌ ಇಲಾಖೆಗೆ ಭರ್ಜರಿ ದಂಡದ ಮೊತ್ತ ಸಂಗ್ರಹ ವಾಗಿದೆ. ಹೌದು.., ಇಲಾಖೆಯ ಮೂಲಗಳು ಬಹಿರಂಗ ಪಡಿಸಿರುವ ಅಂಕಿ ಅಂಶಗಳನ್ನು ನೋಡಿದಾಗ ಈ ಸಂಗತಿ ಸ್ಪಷ್ಟವಾಗುತ್ತದೆ, ಕಳೆದ ಜನವರಿಯಿಂದ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 1ಕೋಟಿ ರೂ.ಗಳಷ್ಟು ದಂಡ ವಸೂಲಾಗಿದ್ದು, ಇದರಲ್ಲಿ ಕಳೆದ 2 ತಿಂಗಳ ಪ್ರಕರಣಗಳು ಸಿಂಹಪಾಲು ಪಡೆದಿವೆ.

ಬೆಂಗಳೂರು, ಮೈಸೂರು ಆಕ್ಸೆಸ್‌ ಕಂಟ್ರೋಲ್‌ ಹೆ„ವೆಯಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಸಾರಿಗೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲು ಜೂನ್‌ ತಿಂಗಳಿಂದ ಕ್ರಮ ಕೈಗೊಂಡಿತ್ತು. ಈ 2 ತಿಂಗಳಲ್ಲಿ ವರ್ಷದ ಶೇ.80ರಷ್ಟು ದಂಡ ಸಂಗ್ರಹವಾಗಿದೆ. ಇದರೊಂದಿಗೆ ರಾಷ್ಟ್ರೀಯ ಹೆದ್ದಾರಿಯ ಷಟ್‌ಪಥ ರಸ್ತೆಯಲ್ಲಿ ದೊಡ್ಡಮೊತ್ತದ ದಂಡ ಸಂಗ್ರಹವಾಗಿದೆ.

ಎರಡು ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣ:   ರಾಮನಗರ ಜಿಲ್ಲಾ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪ್ರತಿದಿನ ಜಿಲ್ಲಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಂಡ ವಸೂಲಿ ಮಾಡುವುದು  ಸಾಮಾನ್ಯ. ಈಬಗ್ಗೆ ಸಾಕಷ್ಟು ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಕಳೆದ ಕೆಡಿಪಿ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ನಿಮಗೆ ಟಾಗೇìಟ್‌ ಕೊಟ್ಟಿದ್ದಾರೆ ದಂಡ ಹಾಕುತ್ತೀರಾ ಎಂದು ಈ ಬಗ್ಗೆ ಪ್ರಸ್ತಾಪಿಸಿದ್ದರು.  ಜ.ಜುಲೈವರೆಗೆ ಜಿಲ್ಲಾ ಪೊಲೀಸ್‌ ಇಲಾಖೆ 14011 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದ್ದು, 10861000ರೂ. ದಂಡವನ್ನು ಸಂಗ್ರಹಿಸಿದೆ. ಇದರಲ್ಲಿ  10483 ಪ್ರಕರಣ ಗಳು ಜೂನ್‌ ಮತ್ತು ಜುಲೈ ತಿಂಗ ಳಲ್ಲಿ ದಾಖಲಾಗಿದ್ದು, ಈ ಎರಡೂ ತಿಂಗಳಲ್ಲಿ 80 ಲಕ್ಷ ರೂ. ಗಳಷ್ಟು ದಂಡದ ಮೊತ್ತ ಸಂಗ್ರಹಣೆಯಾಗಿದೆ.

ಪ್ರಯಾಣಿಕರ ನಿಶೆ ಇಳಿಸಿರುವ ಪೊಲೀಸರು:   ಜಿಲ್ಲೆಯಲ್ಲಿ  ಕಳೆದ ಎರಡು ತಿಂಗಳಲ್ಲಿ ಕುಡಿದು ವಾಹನ ಚಲಿಸುವವರ ವಿರುದ್ಧ ಪ್ರಕರಣ ದಾಖಲಿಸುವುದು ಹೆಚ್ಚಾಗಿದೆ. ಇದುವರೆಗೆ 356 ಕುಡಿದು ವಾಹನ ಚಲಿಸುವವರ ವಿರುದ್ಧ ಪ್ರಕರಣ ದಾಖ ಲಿಸಿರುವ 34.10 ಲಕ್ಷ ರೂ. ದಂಡವನ್ನು ಸಂಗ್ರಹಿಸಿದೆ.

ಆದರೆ, ಜೂನ್‌ ತಿಂಗಳಲ್ಲಿ 284 ಪ್ರಕರಣಗಳನ್ನು ದಾಖಲಿಸಿದ್ದು 26.90 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಇನ್ನು  ಜುಲೈ ತಿಂಗಳಲ್ಲಿ ಈ ಸಂಖ್ಯೆ ಕಡಿಮೆಯಾಗಿದ್ದ 44 ಪ್ರಕರಣಗಳನ್ನು ದಾಖಲಿಸಿ 4.40 ಲಕ್ಷ ರೂ. ದಂw ‌ವಸೂಲಿ ಮಾಡಲಾಗಿದೆ.

ಹೆದ್ದಾರಿಯಲ್ಲಿ ಅಪಘಾತಗಳ ಪ್ರಮಾಣ ಇಳಿಕೆ:

ಕಾಕತಾಳೀಯ ಎಂಬಂತೆ ಪೊಲೀಸ್‌ ಇಲಾಖೆ ದಶಪಥ ಹೆದ್ದಾರಿಗೆ ಇಳಿದು ದಂಡವಿಧಿಸಲು ಪ್ರಾರಂಭಿಸಿದ ಬಳಿಕ ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಗಳ ಪ್ರಮಾಣ ಕೊಂಚ ತಗ್ಗಿದೆ. ಕಳೆದ ಆಗಸ್ಟ್‌ನಿಂದ ಜುಲೈವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿನ  ದಶ ಪಥ ಹೆದ್ದಾರಿಯಲ್ಲಿ 456 ಅಪಘಾತಗಳು ಸಂಭವಿಸಿದ್ದು, 147 ಮಂದಿ ಸಾವಿಗೀಡಾಗಿದ್ದು, 485 ಮಂದಿ ಗಾಯಗೊಂಡಿ ದ್ದಾರೆ. ಕಳೆದ ಜೂ.20ರಿಂದ ಪೊಲೀಸ್‌ ಇಲಾಖೆ ಗೆದ್ದಾರಿಯಲ್ಲಿ ಸಂಚಾರ ನಿಯಮ ಪಾಲನೆಗೆ ಮುಂದಾಗಿದ್ದು, ಜುಲೈ ತಿಂಗಳಲ್ಲಿ ಕಟ್ಟನಿಟ್ಟಾಗಿ ಸಂಚಾರ ನಿಯಮಗಳಿಗೆ ಚಾಲನೆ ನೀಡಲಾಯಿತು. ಜುಲೈ ತಿಂಗಳಲ್ಲಿ 27 ರಸ್ತೆ ಅಪಘಾತಗಳು ಸಂಭವಿಸಿದ್ದು 3 ಮಂದಿ ಸಾವಿ ಗೀಡಾಗಿದ್ದು, 40 ಮಂದಿ ಗಾಯಗೊಂಡಿದ್ದಾರೆ. 10 ತಿಂಗಳ ಅಪಘಾತದ ದಾಖಲೆಯನ್ನು ಪರಿಶೀಲಿಸಿದಾಗ ಇದೇ ಮೊದಲ ಬಾರಿಗೆ ಸಾವಿನ ಪ್ರಮಾಣ ಸಿಂಗಲ್‌ ಡಿಜಿಟ್‌ಗೆ ಇಳಿದಿದೆ.

-ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.