“ಸಂಪೂರ್ಣ ಅಭಿವೃದ್ಧಿ ಅನುಷ್ಠಾನವೇ ಸಂಸದರ ಆದರ್ಶ ಗ್ರಾಮ’
Team Udayavani, Jul 4, 2017, 8:35 AM IST
ಕನಕಪುರ: ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳ ಸಂಪೂರ್ಣ ಅಭಿವೃದ್ಧಿ ಅನುಷ್ಠಾನವೇ ಸಂಸದ ಆದರ್ಶ ಗ್ರಾಮದ ಮೂಲ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಹೇಳಿದರು.
ತಾಲೂಕಿನ ಮರಳವಾಡಿ ಹೋಬಳಿಯ ಯಲಚವಾಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ಸಂಸದರ ಆದರ್ಶ ಗ್ರಾಮ ಯೋಜನೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಲಚವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ 41 ಗ್ರಾಮಗಳ ಸಂಪೂರ್ಣ ಅಭಿವೃದ್ಧಿಗೆ ತೋಟಗಾರಿಕೆ, ಕೃಷಿ, ರೇಷ್ಮೆ, ಪಶು ಸಂಗೋಪನೆ, ಇಂಧನ ಇಲಾಖೆ, ಸ್ವತ್ಛ ಭಾರತ್ ಅಭಿಯಾನ ಸೇರಿದಂತೆ ಎಲ್ಲಾ ಇಲಾಖೆಗಳಿಂದ ವೈಯಕ್ತಿಕಫಲಾನುಭವಿಗಳನ್ನು ಗುರುತಿಸಿ ಆರ್ಥಿಕವಾಗಿ
ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬುಧವಾರದಿಂದಲೇ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ
ಕಲೆ ಹಾಕಲಿದ್ದಾರೆ. ಪ್ರತಿ ಕುಟುಂಬದ ಸದಸ್ಯರು ಅಧಿಕಾರಿಗಳು ಕೇಳಿದ ಮಾಹಿತಿ ನೀಡುವಂತೆ ತಿಳಿಸಿದರು.
ಜಿಪಂ ಸದಸ್ಯ ಎಚ್.ಕೆ.ನಾಗರಾಜು ಮಾತನಾಡಿ, ರಾಜ್ಯದಲ್ಲೇ ಜಿಲ್ಲೆ ನರೇಗಾದಲ್ಲಿ ಪ್ರಥಮ ಸ್ಥಾನದಲ್ಲಿದೆ. ಸಂಸದರು ಹೆಚ್ಚು ಒತ್ತು ಕೊಟ್ಟು ಕ್ಷೇತ್ರದ ಪ್ರತಿಯೊಬ್ಬ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕೆಂಬ ಉದ್ದೇಶದಿಂದ ನರೇಗಾದಲ್ಲಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು. ಮರಳವಾಡಿ ಜಿಪಂ ಸದಸ್ಯ ಎಂ.ಎನ್.
ನಾಗರಾಜು ಮಾತನಾಡಿ, ಯಲಚವಾಡಿ ಗ್ರಾಪಂ ಆರ್ಥಿಕವಾಗಿ ಹಿಂದುಳಿದ ಗ್ರಾಪಂ ಆಗಿದೆ. ನೀರಿನ ಮಟ್ಟ ತೀರಾ ಕುಸಿದಿದ್ದು ವ್ಯವಸಾಯ ಮಾಡುವುದೇ ಕಷ್ಟವಾಗಿದೆ. ಪ್ರತಿ ಕುಟುಂಬ ಸರ್ವೆ ಮಾಡುವ ಮೂಲಕ ಅಂಥ ಕುಟುಂಬಗಳಿಗೆ ಆರ್ಥಿಕ ಚೈತನ್ಯ ತುಂಬಬೇಕೆಂದರು.
ಈ ಸಂದರ್ಭದಲ್ಲಿ ಕಂದಾಯ, ಕೈಗಾರಿಕೆ, ಕೃಷಿ, ತೋಟಗಾರಿಕೆ, ಬೆಸ್ಕಾಂ, ಪಶುಪಾಲನೆ, ಅಬಕಾರಿ, ಸ್ವತ್ಛಭಾರತ್ ಮಿಷನ್, ಸಮಾಜ ಕಲ್ಯಾಣ ಇಲಾಖೆ, ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜಿಪಂ ಸಿಇಒ ಸಿ.ಪಿ.ಶೈಲಜಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಕೃಷ್ಣಪ್ಪ, ಯಲಚವಾಡಿ ಗ್ರಾಪಂ ಅಧ್ಯಕ್ಷ ಮಹಮದ್ ಅಬ್ದುಲ್, ಸದಸ್ಯರಾದ ಜಯರಾಮೇಗೌಡ, ನರಸಿಂಹಯ್ಯ, ಬಸವರಾಜು, ಕರಿಯಪ್ಪ ಸೇರಿದಂತೆ ತಾಲೂಕು ಹಾಗೂ ಗ್ರಾಪಂ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.