ಹಾಲು ಆಮದು ಒಪ್ಪಂದಕ್ಕೆ ಖಂಡನೆ
Team Udayavani, Oct 25, 2019, 4:19 PM IST
ಮಾಗಡಿ: ವಿದೇಶದಿಂದ ಹಾಲು ಆಮದು ಒಪ್ಪಂದ ನೀತಿ ಖಂಡಿಸಿ ತಾಲೂಕು ರೈತ ಸಂಘದ ವತಿಯಿಂದ ಗುರುವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ತಾಲೂಕಿ ನಿಂದ ನೂರಾರು ರೈತರು ವಾಹನದಲ್ಲಿ ತೆರಳಲು ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಚಾಲನೆ ನೀಡಿದರು.
ಪಟ್ಟಣದಲ್ಲಿ ಕಲ್ಯಾಗೇಟ್ ವೃತ್ತದ ಗಣಪತಿಗೆ ಪೂಜೆ ಸಲ್ಲಿಸಿ, ರಾಮನಗರದಲ್ಲಿ ನಡೆಯಲಿರುವ ಪ್ರತಿಭಟನೆಗೆ ತೆರಳಲು ವಾಹನಗಳಿಗೆ ಚಾಲನೆ ನೀಡಿದ ಅವರು ಮಾತನಾಡಿ, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟನೆ ನಡೆಸಲು ರೈತ ಸಂಘಟನೆ ಜೊತೆಗೆ ವಿವಿಧ ಸಂಘ- ಸಂಸ್ಥೆಗಳು, ಜನಪರ ಹೋರಾಟಗಾರರು ಸಂಪೂರ್ಣ ಸಹಕಾರ ನೀಡಿ ಬೆಂಬಲ ವ್ಯಕ್ತಪಡಿಸಿವೆ ಎಂದು ಹೇಳಿದರು.
ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಧುಗೌಡ, ಟೌನ್ ಅಧ್ಯಕ್ಷ ರಂಗಸ್ವಾಮಯ್ಯ, ಮಂಜುನಾಥ್, ಜಯಣ್ಣ, ಹನುಮಂತರಾಜು, ದೊಡ್ಡರಂಗಯ್ಯ, ಉಮೇಶ್, ಗಿರಿಧರ್, ರಂಗಪ್ಪ, ವೆಂಕಟೇಶ್, ನಟರಾಜ್,ರಾಜಣ್ಣ, ಗಿರೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.