ಯೋಗೇಶ್ವರ್ಗೆ ಬಿಡದಿಯಲ್ಲಿ ಅಭಿನಂದನೆ
Team Udayavani, Jul 25, 2020, 7:26 AM IST
ರಾಮನಗರ: ಬೆಂಗಳೂರಿನಿಂದ ಚನ್ನಪಟ್ಟಣಕ್ಕೆ ವಾಪಸ್ಸಾಗುತ್ತಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬಿಡದಿಯಲ್ಲಿ ಅವರ ಅಭಿಮಾನಿಗಳು, ಬಿಜೆಪಿ ಮುಖಂಡರು ಅಭಿನಂದನೆ ಸಲ್ಲಿಸಿದರು.
ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಪೇಟ ತೊಡಿಸಿ ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಅವರು ತಮ್ಮ ಮೇಲೆ ಜನತೆ ಇರಿಸಿರುವ ವಿಶ್ವಾಸಕ್ಕೆ ಋಣಿಯಾಗಿರುವುದಾಗಿ ತಿಳಿಸಿದರು. ವಿಧಾನ ಪರಿಷತ್ಗೆ ನಾಮ ನಿರ್ದೇಶನವಾಗಲು ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ಮುಖಂಡರು ಕಾರಣರಾಗಿದ್ದಾರೆ ಎಂದು ಕೃತಜ್ಞತೆ ತಿಳಿಸಿದರು. ಮುಂದಿನ ದಿನಗಳು ರಾಮನಗರ ಜಿಲ್ಲೆಗೆ ಶುಭ ದಿನಗಳಾಗಲಿದೆ ಎಂದು ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಿದರು.
ಎಲ್ಲರು ಒಗ್ಗಟ್ಟಾಗಿ ಪಕ್ಷ ಕಟ್ಟಲು ಸಂಕಲ್ಪಿಸೋಣ ಎಂದರು. ಪುರಸಭೆ ಸದಸ್ಯ ಬಿ.ಎಂ.ರಮೇಶ್ ಕುಮಾರ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕಲ್ಪಿಸಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಚಿಕ್ಕಣ್ಣಯ್ಯ, ಜಿಪಂ ಮಾಜಿ ಅಧ್ಯಕ್ಷ ಸಿ.ಪಿ.ರಾಜೇಶ್, ಬಿಜೆಪಿ ಮುಖಂಡರು ಅಭಿಮಾನಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.