ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ
Team Udayavani, Apr 19, 2018, 5:39 PM IST
ಚನ್ನಪಟ್ಟಣ: ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸೆಯಿದೆ. ಆದರೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷನನ್ನಾಗಿ ಮಾಡಿ ಪಕ್ಷ ಕೈಕಟ್ಟಿಹಾಕಿದೆ. ಅಭ್ಯರ್ಥಿ ಎಚ್.ಎಂ.ರೇವಣ್ಣ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದ್ದು ಅವರನ್ನು ಗೆಲ್ಲಿಸುವ ಮೂಲಕ ಶಕ್ತಿ ತೋರಿ ಸಬೇಕೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಪಟ್ಟಣದ ಸಾತನೂರು ರಸ್ತೆಯ ಮಹದೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿ ಸಲಿದೆ. ಈಗಲೂ ರೇವಣ್ಣ ಮಂತ್ರಿಯಾಗಿದ್ದಾರೆ. ಮುಂದೆಯೂ ಮಂತ್ರಿಯಾಗುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
140 ಸ್ಥಾನಗಳಲ್ಲಿ ಜಯ: ರಾಜ್ಯದಲ್ಲಿ ಅನೇಕ ಮಾಧ್ಯಮಗಳು ಎಷ್ಟೊಂದು ಸರ್ವೆ ನಡೆಸಿವೆ. ಅವ್ಯಾವೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿಲ್ಲ. ಕೇವಲ ಕಾಂಗ್ರೆಸ್ ಸೀಟು ಕಡಿಮೆಯಾಗುತ್ತವೆ ಎಂದಷ್ಟೇ ಹೇಳಿವೆ. ಈಗಲೂ ರಾಜ್ಯದಲ್ಲಿ ಪಕ್ಷ 140 ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಯೋಗೇಶ್ವರ್ ಮಂತ್ರಿಯಾಗುವುದಿಲ್ಲ, ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರವೂ ಬರುವುದಿಲ್ಲ. ಜನತೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ದ್ರೋಹ ಮಾಡಿದವರಿಗೆ ಬುದ್ಧಿ ಕಲಿಸಿ ತಮ್ಮನ್ನು ಆಯ್ಕೆ ಮಾಡಿ: ಕ್ಷೇತ್ರದ ಅಭ್ಯರ್ಥಿ, ಸಾರಿಗೆ ಸಚಿವ ಎಚ್.ಎಂ.ರೇವಣ್ಣ
ಮಾತನಾಡಿ, ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ನೆರೆಯ ಮಾಗಡಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಈ ಬಾರಿ ತಾಲೂಕಿನ ಜನತೆಯ ಪ್ರತಿನಿಧಿ ಯಾಗಿ ಹೋಗಬೇಕೆಂಬ ಆಕಾಂಕ್ಷೆ ಹೊಂದಿದ್ದೇನೆ. ಪಕ್ಷಕ್ಕೆ ದ್ರೋಹ ಮಾಡಿ ಹೋಗಿರುವವರಿಗೆ ಬುದ್ಧಿ ಕಲಿಸಿ ತಮ್ಮನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ತಕ್ಕ ಪಾಠ ಕಲಿಸಿ: ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿ ಇಬ್ಬರೂ ಕಾಂಗ್ರೆಸ್ ವಿರೋಧಿಗಳು. ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದಾಗ ಕೊಟ್ಟ ಕಷ್ಟಗಳ ಸಮಯದಲ್ಲೇ ನಾವು ರಾಜಿ ಮಾಡಿ ಕೊಂಡಿಲ್ಲ. ಇನ್ನು ಈಗ ಮಾಡಿಕೊಳ್ಳುತ್ತೇವೆಯೇ ಎಂದು ಪ್ರಶ್ನಿಸಿದರು. ಯಾವುದೇ ಕಾರಣಕ್ಕೂ ಹೊಂದಾಣಿಕೆ ಇಲ್ಲ. ರೇವಣ್ಣ ಅವರನ್ನು ಗೆಲ್ಲಿಸುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಪಡಿಸುತ್ತೇವೆ. ಪಕ್ಷದ್ರೋಹ ಮಾಡಿರುವವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಒಡೆಯಲು ಸಜ್ಜಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಎಸ್.ರವಿ, ಸಿ.ಎಂ.ಲಿಂಗಪ್ಪ, ಡಿಸಿಸಿ ಅಧ್ಯಕ್ಷ ಎಸ್.ಗಂಗಾಧರ್, ಎಐಸಿಸಿ
ಸದಸ್ಯೆ ಶಾರದಾಗೌಡ, ಕುಕ್ಕುಟ ಮಂಡಳಿ ಅಧ್ಯಕ್ಷ ಡಿ.ಕೆ.ಕಾಂತರಾಜು, ನಗರಸಭೆ ಅಧ್ಯಕ್ಷೆ ನಜ್ಮುನ್ನೀಸಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾದು, ವೀರೇಗೌಡ, ಮುದ್ದುಕೃಷ್ಣ, ಜಿಪಂ ಸದಸ್ಯರಾದ ವೀಣಾಕುಮಾರಿ, ಸುಗುಣಾ, ಪ್ರಸನ್ನಕುಮಾರ್, ವಿವಿಧ ಘಟಕಗಳ ಅಧ್ಯಕ್ಷರಾದ ಕೆ.ಟಿ.ಲಕ್ಷ್ಮಮ್ಮ, ಹನುಮಂತಯ್ಯ, ಎಸ್.ಸಿ.ಶೇಖರ್, ಮುಖಂಡ ಮಸೂದ್ ಫೌಜ್‌ದಾರ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.