ನೀರಿನ ಸದ್ಬಳಕೆಗೆ ನಿರಂತರ ಜಾಗೃತಿ ಅಗತ್ಯ
Team Udayavani, Sep 9, 2019, 12:53 PM IST
ರಾಮನಗರ: ನೀರಿನ ಸದ್ಬಳಕೆ, ಮಣ್ಣಿನ ಸವಕಳಿ ಹಾಗೂ ಆಧುನಿಕ ಕೃಷಿ ಬೇಸಾಯ ಪದ್ಧತಿಗಳ ಬಗ್ಗೆ ಜನ ಸಾಮಾನ್ಯರು, ರೈತ ವರ್ಗದಲ್ಲಿ ಸಾಕಷ್ಟು ಜಾಗೃತಿ ಮೂಡಿಸುವ ಅವಶ್ಯವಿದೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ತಿಳಿಸಿದರು.
ಬಿಡದಿಯ ಶ್ರೀ ಬಸವೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ, ರಾಮನಗರದ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ತಂತ್ರಜ್ಞಾನ ಅಳವಡಿಕೆ ಮತ್ತು ಸಂಶೋಧನಾ ಸಂಸ್ಥೆಯಿಂದ ನಡೆದ ಜಲಶಕ್ತಿ ಅಭಿಯಾನ ಮತ್ತು ಕಿಸಾನ್ ಮೇಳದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಈ ವಿಷಯಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿಕೊಂಡು ತಮ್ಮ ಪೋಷಕರು, ನೆರೆ-ಹೊರೆಯವರಲ್ಲಿಯೂ ಜಾಗೃತಿ ಮೂಡಿಸಬೇಕು. ಗ್ರಾಮೀಣ ಭಾಗದ ಅಭಿವೃದ್ಧಿಗೆ ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಕಿಸಾನ್ ಮೇಳದಲ್ಲಿ ಆಯೋಜಿಸಿದ್ದ ಕೃಷಿ ಪ್ರಾತ್ಯಕ್ಷಿಕೆ, ವಸ್ತು ಪ್ರದರ್ಶನ, ವಿಚಾರ ಸಂಕಿರಣಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ನೀರಿಗಾಗಿ ಯುದ್ಧ ನಡೆಯುವ ಸಂಭವ: ಎಂಎಲ್ಸಿ ಸಿ.ಎಂ.ಲಿಂಗಪ್ಪ ಮಾತನಾಡಿ ನೀರಿಗಾಗಿ ಮುಂದಿನ ದಿನಗಳಲ್ಲಿ ಯುದ್ಧಗಳು ನಡೆದರು ಆತಿಶಯೋಕ್ತಿಯಲ್ಲ. ನೀರು ಅಪಾರವಾಗಿ ಸಿಗುವ ಪ್ರಾಕೃತಿಕ ಸಂಪತ್ತಲ್ಲ. ಅದು ಮಿತವಾಗಿದೆ. ಮುಂದಿನ ಪೀಳಿಗೆಗೆ ಶುದ್ಧ ನೀರು ಉಳಿಸಬೇಕಾಗಿದೆ. ಹೀಗಾಗಿ ನೀರಿನ ಮಿತಬಳಕೆ ಮಾಡಿ, ಮಾಲಿನ್ಯವನ್ನು ತಡೆಗಟ್ಟಬೇಕಾಗಿದೆ ಎಂದರು.
ಭತ್ತದ ಗದ್ದೆಯಲ್ಲಿ ಪದೇ ಪದೆ ನೀರನ್ನು ಬದಲಿಸುವ ಪದ್ಧತಿಯನ್ನು ಅವರು ಪ್ರಶ್ನಿಸಿದರು. ಕಲ್ಯಾಣ ಮಂಟಪಗಳಲ್ಲಿ ನೀರಿನ ಬಾಟಲಿಗಳ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಪ್ಲಾಸ್ಟಿಕ್ ಬಳಕೆಯ ಜೊತೆಗೆ ನೀರು ಸಹ ವ್ಯರ್ಥವಾಗುತ್ತಿದೆ. ನಗರ, ಗ್ರಾಮೀಣ ಎರಡೂ ಕಡೆಯಲ್ಲೂ ನೀರಿನ ಸದ್ಬಳಕೆ ವಿಚಾರದಲ್ಲಿ ನಿರಂತರ ಜಾಗೃತಿ ಅಗತ್ಯವಿದೆ ಎಂದು ತಿಳಿಸಿದರು.
ಕೆರೆ, ಕಟ್ಟೆಗಳನ್ನು ಪುನಶ್ಚೇತನಗೊಳಿಸಿ: ತಾಪಂ ಅಧ್ಯಕ್ಷ ಜಿ.ಎನ್.ನಟರಾಜ್ ಗಾಣಕಲ್ ಮಾತನಾಡಿ, ಗ್ರಾಮಗಳಲ್ಲಿನ ಕೆರೆಕಟ್ಟೆಗಳನ್ನು ಪುನಶ್ಚೇತನಗೊಳಿಸಿ, ಉಳಿಸಿಕೊಳ್ಳುವುದು ನಾಗರಿಕರ ಕರ್ತವ್ಯ. ಪ್ರತಿ ಗ್ರಾಮದಲ್ಲೂ ಅಲ್ಲಿನ ನಿವಾಸಿಗಳು, ತಮ್ಮ ವ್ಯಾಪ್ತಿಯ ಕರೆಗಳಲ್ಲಿ ಹೂಳೆತ್ತಿ, ಮಳೆ ನೀರು ಸಂಗ್ರಹಕ್ಕೆ ಮುಂದಾಗಬೇಕು ಎಂದು ಹೇಳಿದರು.
ತಾವು ಹೆಜ್ಜಾಲದ ದೊಡ್ಡ ಕೆರೆ ಸೇರಿದಂತೆ 7 ಕೆರೆಗಳನ್ನು ಪ್ರಾಯೋಗಿಕವಾಗಿ ಅಭಿವೃದ್ಧಿಪಡಿಸಿದ ಯಶಸ್ಸು ಸಾಧಿಸಿದ ಉದಾಹರಣೆ ನೀಡಿದರು. ಸರ್ಕಾರಿ ಸ್ವಾಮ್ಯದ ನಿಗಮಗಳ ಸಹಕಾರದಲ್ಲಿ ಕೆರೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿದ್ದ ಶಾಸಕರು ಹಾಗೂ ಅಧಿಕಾರಿಗಳಲ್ಲಿ ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ: ಈ ವೇಳೆ ನೀರಿನ ಸಂರಕ್ಷಣೆ, ಅರಣ್ಯೀಕರಣ ಹಾಗೂ ಪರಿಸರ ಉಳಿವಿನ ಕುರಿತು ನಡೆದಿದ್ದ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿದರು. ಗಾಂಧಿ ಕೃಷಿ ವಿವಿಯ ಸಹಾಯಕ ನಿರ್ದೇಶಕ ಡಾ.ನಾರಾಯಣಗೌಡ, ಹಿರಿಯ ವಿಜ್ಞಾನಿ ಡಾ.ಸವಿತಾ ಎಸ್.ಮಂಗಾನವರ್ ಮಾತನಾಡಿದರು. ಬೆಂಗಳೂರಿನ ಜಿಕೆವಿಕೆ ಸಹ ಪ್ರಾಧ್ಯಾಪಕ ಡಾ.ಎಂ.ಎನ್.ತಿಮ್ಮೇಗೌಡ, ನಿವೃತ್ತ ಪ್ರಾಧ್ಯಾಪಕ ಡಾ.ನಾಗರಾಜ್ ಅವರು ಕೊಳವೆ ಬಾವಿಗಳ ಮರುಪೂರಣ, ಕೃಷಿ ಹೊಂಡ ಪ್ರಾಮುಖ್ಯತೆ, ವಿನ್ಯಾಸ ಮತ್ತು ನೀರಿನ ಸದ್ಬಳಕೆ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಪಂ ಸದಸ್ಯ ಪ್ರಕಾಶ್, ಜ್ಞಾನವಿಕಾಸ ವಿದ್ಯಾಸಂಘದ ನಿರ್ದೇಶಕ ಎಲ್.ಸತೀಶ್‌ಚಂದ್ರ, ಖಜಾಂಚಿ ಹೊನ್ನಶೆಟ್ಟಿ(ರಾಜಣ್ಣ), ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ದಿಲೀಪ್, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಉಪಸ್ಥಿತರಿದ್ದರು. ವಿಜ್ಞಾನಿ ಪ್ರೀತು ಸ್ವಾಗತಿಸಿದರು. ಶಿಕ್ಷಕ ಶಿವಸ್ವಾಮಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.