ಕೋವಿಡ್ 19: ಮುನ್ನೆಚ್ಚರಿಕೆ ವಹಿಸಿ
Team Udayavani, Mar 24, 2020, 5:32 PM IST
ರಾಮನಗರ: ಕೋವಿಡ್ 19 ಸೋಂಕು ಜಿಲ್ಲೆಯಲ್ಲಿ ಹರಡದಂತೆ ಮುನ್ನಚ್ಚರಿಕೆ ಕ್ರಮವಹಿಸುವುದು ಜಿಲ್ಲಾಡಳಿತಕ್ಕೆ ಸವಾಲಗಿದ್ದು, ಎಲ್ಲ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು.
ಜಿಲ್ಲೆಯ ತಾಲೂಕು ತಹಶೀಲ್ದಾರ್‌ಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ವೇಳೆ ಮಾತನಾಡಿದರು. ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಆರೋಗ್ಯ ಇಲಾಖೆ ತಿಳಿಸಿರುವ ರೀತಿ ಒಬ್ಬರಿಂದ ಇನ್ನೊಬ್ಬರು ಅಂತರ ಕಾಯ್ದುಕೊಂಡು ವ್ಯವಹರಿಸಿ. ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿ. ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದರೆ ಆರೋಗ್ಯ ಇಲಾಖೆ ಸಂಪರ್ಕಿಸಿ ಎಂದು ಜಾಗೃತಿ ಮೂಡಿಸಿ ಎಂದು ತಿಳಿಸಿದರು.
ಈ ಸೋಂಕು ವೇಗವಾಗಿ ಹರಡುತ್ತದೆ. ಆರೋಗ್ಯ ಇಲಾಖೆ ತಿಳಿಸಿರುವ ಮುನ್ನಚ್ಚರಿಕೆ ಕ್ರಮ ಲಘುವಾಗಿ ತೆಗೆದುಕೊಳ್ಳದೆ ಕಟ್ಟುನಿಟ್ಟಾಗಿ ಅನುಸರಿಸಿ ಸೋಂಕು ಜಿಲ್ಲೆಯಲ್ಲಿ ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಕೈಜೋಡಿಸಬೇಕು ಎಂದರು.
ತಾಲೂಕು ಆಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಜನಸಂದಣಿಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು. ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒಇಕ್ರಂ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ಸೇರಿದಂತೆ ಎಲ್ಲ ತಾಲೂಕು ತಹಶೀಲ್ದಾರ್ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.