ಯುವಕರಿಂದ ಮೃತ ಸೋಂಕಿತನ ಅಂತ್ಯ ಸಂಸ್ಕಾರ
Team Udayavani, Aug 21, 2020, 12:57 PM IST
ಕನಕಪುರ: ತಾಲೂಕಿನ ಕೊಟ್ಟಗಾಳು ಗ್ರಾಮದ ಬಸವ ರಾಜು (34) ಕೋವಿಡ್ ದಿಂದ ಗುರುವಾರ ಮೃತ ಪಟ್ಟಿದ್ದು, ಗ್ರಾಪಂ ಅಧಿಕಾರಿಗಳೊಂದಿಗೆ ಗ್ರಾಮದ ಯುವಕರು ಪಿಪಿಇ ಕಿಟ್ ಧರಿಸಿ ಕೋವಿಡ್-19 ನಿಯಮಗಳ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಿ ಇತರರಿಗೆ ಮಾದರಿಯಾಗಿದ್ದಾರೆ.
ತಾಲೂಕಿನ ಮರಳವಾಡಿ ಹೋಬಳಿಯ ಕೊಟ್ಟಗಾಳು ಗ್ರಾಮದ ಬಸವರಾಜು ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಕೊಟ್ಟಗಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕೋವಿಡ್-19 ಪರಿಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿತ್ತು. ಆದರೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ ಬಸವರಾಜು ಅವರನ್ನು ಪೋಷಕರು ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಲ್ಲಿ ಕೋವಿಡ್-19 ಪರಿಕ್ಷೆಗೆ ಒಳಪಡಿಸಿದಾಗ ಕೋವಿಡ್ ಆರಂಭಿಕ ಹಂತದ ರೋಗ ಲಕ್ಷಣಗಳು ಕಂಡುಬಂದಿತ್ತು.
ಗುರುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ಶವದ ಬಳಿ ಬರಲು ಹೆದರುವ ಜನರ ನಡುವೆ ಕೊಟ್ಟಗಾಳು ಗ್ರಾಮದ ಕಾಂತರಾಜು, ಕೆಂಪೇಗೌಡ, ಸಂತೋಷ್, ರುದ್ರೇಶ್, ಗಿರೀಶ್, ಸೇರಿದಂತೆ ಯುವಕರ ತಂಡ ಸ್ಥಳೀಯ ಗ್ರಾಪಂ ಅಧಿಕಾರಿಗಳಿಗೆ ನೇರವಾಗಿ ಕೊರೊನಾದಿಂದ ಮೃತಪಟ್ಟಿದ ಬಸವರಾಜು ಅವರ ಅಂತ್ಯಸಂಸ್ಕಾರದಲ್ಲಿ ಪಿಪಿಇ ಕಿಟ್ ಧರಿಸಿ ಭಾಗಿಯಾಗುವ ಮೂಲಕ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಮೃತ ವ್ಯಕ್ತಿಯ ನಿವಾಸದ ಬಳಿ ಗ್ರಾಪಂ ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಪಿಡಿಒ ಲೋಕೇಶ್, ಕಾರ್ಯ ದರ್ಶಿ ರಾಮಾಜನೇಯ, ಸಿಬ್ಬಂದಿಗಾಳದ ಕರಿಯಪ್ಪ, ನಾರಾಯಣ, ರಾಜೇಶ್, ಆಶಾ ಕಾರ್ಯಕರ್ತೆ ರತ್ನಮ್ಮ, ಅಂಗನವಾಡಿ ಕಾರ್ಯಕರ್ತೆ ಗೀತಾ, ಪೊಲೀಸ್ ಸಿಬ್ಬಂದಿ ರೇವಣ್ಣ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.