ಕೋವಿಡ್ ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್
Team Udayavani, Aug 11, 2020, 8:20 AM IST
ರಾಮನಗರ: ಸರ್ಕಾರ ಹಾಗೂ ಆರೋಗ್ಯ ಇಲಾಖೆ ತಿಳಿಸಿರುವ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವ ಮೂಲಕ ಸೋಂಕಿ ನಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಗಾಣಕಲ್ ನಟರಾಜ್ ಮನವಿ ಮಾಡಿಕೊಂಡರು.
ತಾಲೂಕಿನ ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಹಾಗೂ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್‌ಗಳ ಸಂಯುಕ್ತಾಶ್ರಯದಲ್ಲಿ ಕೊರೊನಾ ಕುರಿತಾದ ಜಾಗೃತಿ ಮೂಡಿಸುವ ಬೀದಿ ನಾಟಕ, ಆಯುಷ್ ಇಲಾಖೆ ಔಷಧೀಯ ಗಿಡಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಗುವ ಔಷಧೀಯ ಗಿಡಮೂಲಿಕೆ ಬಳಸಿ ಆರೋಗ್ಯವರ್ಧನೆ ಮಾಡಿಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್.ಮರೀಗೌಡ, ಕೋವಿಡ್ ಸೋಂಕಿತರನ್ನು ಗೌರವದಿಂದ ಕಾಣಬೇಕು ಎಂದರು. ಕ್ಷೇತ್ರ ಸಮನ್ವಯ ಅಧಿಕಾರಿ ಸಂಪತ್ ಕುಮಾರ್ ಮಾತನಾಡಿ, ಮುಂಜಾಗ್ರತಾ ಕ್ರಮ ತಪ್ಪದೇ ಪಾಲಿಸುವ ಮೂಲಕ ಕೊರೊನಾ ವ್ಯಾಪಿ ಸ ದಂತೆ ತಡೆಯಬಹುದು ಎಂದರು. ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಷ್ ವಿಭಾಗದ ಡಾ. ಸದಾಶಿವಾನಂದಗೌಡ ಪಾಟೀಲ್ , ಡಾ.ರಂಗಪ್ಪ, ಔಷಧೀಯ ಗಿಡಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.
ಹಿರಿಯ ಜಾನಪದ ಗಾಯಕ ಚೌ.ಪು.ಸ್ವಾಮಿ, ಯುವ ಕವಿಗಳಾದ ಲಕ್ಷ್ಮೀ ಕಿಶೋರ್ ಅರಸ್ ಕೂಡೂÉರು, ದರ್ಶನ್‌ಗೌಡ ಮತ್ತೀಕೆರೆ, ಬನ್ನಿಕುಪ್ಪೆ (ಬಿ), ಗ್ರಾಪಂ ಮಾಜಿ ಅಧ್ಯಕ್ಷ ಎಚ್. ಗೋಪಾಲ್‌ರಾಜು, ಗ್ರಾಪಂ ಮಾಜಿ ಸದಸ್ಯ ಕೃಷ್ಣಪ್ಪ, ಸೊಸೈಟಿ ಶಿವರುದ್ರಯ್ಯ, ಮುಖಂಡರಾದ ಬೈರೇಗೌಡ, ಚಿಕ್ಕವೀರಯ್ಯ, ಮುಖ್ಯ ಶಿಕ್ಷಕಿ ರಾಜೇಶ್ವರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.