20 ವರ್ಷದಿಂದ ಮಾಡಿರುವ ಕೆಲಸಕ್ಕೆ ಕೂಲಿ ಕೊಡಿ: ಸಿಪಿವೈ


Team Udayavani, Mar 4, 2023, 1:35 PM IST

tdy-9

ಚನ್ನಪಟ್ಟಣ: ನಾನು ನಿಮ್ಮ ಮನೆಯ ಮಗ, ನಾನು ತಪ್ಪು ಮಾಡಿದರೆ ಬಯ್ಯುವ, ಹೊಡೆಯುವ, ಏನೇ ಶಿಕ್ಷೆ ಕೊಡುವ ಹಕ್ಕು ನಿಮ್ಮಗಿದೆ.. “ಹೀಗೆಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಭಾವೋದ್ವೇಗಕ್ಕೆ ಒಳಗಾಗಿ ಮತದಾರರ ಮುಂದೆ ಪರಿ ಪರಿಯಾಗಿ ಬೇಡಿಕೊಂಡರು.

ತಾಲೂಕಿನ ನಾಗವಾರ ಗ್ರಾಮದಲ್ಲಿ ಸ್ವಾಭಿಮಾನಿ ಸಂಕಲ್ಪ ನಡಿಗೆಯ ಸಂದರ್ಭದಲ್ಲಿ ಗ್ರಾಮದ ಜನತೆ ಸೇರಿಕೊಂಡು ಆಯೋಜನೆ ಮಾಡಲಾಗಿದ್ದ ಹೆಲಿಕ್ಯಾಪ್ಟರ್‌ ಮೂಲಕ ಟನ್‌ಗಟ್ಟಲೇ ಗುಲಾಬಿ ಹೂಮಾಳೆ ಸುರಿಸಿದ್ದನ್ನು ಕಂಡು ಮೂಕವಿಸ್ಮಿತರಾಗಿ ನಂತರ ಅವರ ಅಭಿಮಾನದ ಕಟ್ಟೆ ಹೊಡೆದು, ತಮ್ಮಲ್ಲಿರುವ ನೋವನ್ನು ಹೊರಹಾಕಿದರು.

ಮತದಾರರಿಗೆ ಪ್ರಶ್ನೆ: ಕಳೆದ 20 ವರ್ಷದಿಂದ ನಿಮ್ಮಗಳ ಕೂಲಿ ಮಾಡಿದ್ದೇನೆ. ನನಗೆ ಕೂಲಿ ಕೊಡಿ. ನಿಮ್ಮ ಮನೆಯ ಮಗ ನಾನು ನಾನು ತಪ್ಪು ಮಾಡಿದ್ದರೆ ಬೈದು ಬುದ್ಧಿ ಹೇಳಿ, ಅಲ್ಲದೆ ಹೊಡೆದು ಬುದ್ದಿ ಕಲಿಸುವ ಹೋಣೆಗಾರಿಕೆ ನಿಮ್ಮ ಮೇಲಿದೆ. ಆದರೆ, ಕ್ಷೇತ್ರದಲ್ಲೆ ಗುರುತರವಾದ ಅಭಿವೃದ್ಧಿಯ ಸಾಕ್ಷಿಗುಡ್ಡೆಯನ್ನು ಬಿಟ್ಟುಹೋದ ನನ್ನ ಮೇಲೆ ಮುನಿಸೇಕೆ ಎಂದು ಮತದಾರರಿಗೆ ಪ್ರಶ್ನೆ ಹಾಕಿದರು.

ಪೊಳ್ಳು ಭರವಸೆ ನಂಬಿ ಗೆಲ್ಲಿಸಿದ್ದೀರಿ: ಮನೆ ಮಗ ತಪ್ಪು ಮಾಡಿದರೆ ಅವನನ್ನು ದೂರ ತಳ್ಳುವಿರೋ ಎಲ್ಲೋ ಇದ್ದವರು ಈ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದವರು ದೂರದ ಜಿಲ್ಲೆಯವರಾದ ಕುಮಾರಸ್ವಾಮಿಯ ಪೊಳ್ಳು ಭರವಸೆಗಳನ್ನು ನಂಬಿ ಅವರನ್ನು ಗೆಲ್ಲಿಸಿದ್ದಿರಿ ಅವರು ಮುಖ್ಯಮಂತ್ರಿಯಾಗಿಯೂ ಐಶಾರಾಮಿಯಾಗಿ ಸ್ಟಾರ್‌ ಹೋಟೆಲ್‌ನಲ್ಲಿ ಅಧಿಕಾರ ಕೂಡ ನಡೆಸಿದರು. ಆದರೆ, ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಗಳು ಏನು ಎಂದು ಪ್ರಶ್ನೆ ಮಾಡಿದರು.

ಕಳೆದ ಚುನಾವಣೆಯಲ್ಲಿ ಸ್ತ್ರೀಶಕ್ತಿ ಸಾಲಮನ್ನ ಮಾಡುತ್ತೇನೆ ಎಂದು ಕ್ಷೇತ್ರದ ಮುಗ್ಧ ಮಹಿಳೆಯರನ್ನು ನಂಬಿಸಿದ ಮಾರಾಯ ಗೆದ್ದ ಮೇಲೆ ಕ್ಷೇತ್ರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕ್ಷೇತ್ರದ ಕೆಲ ಗುತ್ತಿಗೆದಾರರಿಗೆ ಹಣ ಮಾಡಲು ಅವಕಾಶ ಮಾಡಿಕೊಟ್ಟಿರುವುದು ಎಲ್ಲರೂ ತಿಳಿದ ವಿಚಾರವಾಗಿದೆ ಎಂದರು.

ಸೋಲುವುದು ಖಚಿತ: ಕ್ಷೇತ್ರದ ಜನರು ಎಚ್ಚೆತ್ತುಕೊಂಡಿದ್ದು ಈ ಭಾರಿ ಕುಮಾರಸ್ವಾಮಿರವರ ಆಟ ಏನು ನೆಡೆಯದು. ರಾಜ್ಯ ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಅನ್ಯಾಯವನ್ನೇ ಎಸೆಗಿರುವ ಕುಮಾರಸ್ವಾಮಿಗೆ ಜನತೆ ತಕ್ಕ ಪಾಠ ಕಲಿಸಲು ಸನ್ನದ್ಧರಾಗಿದ್ದು, ಕಾಲ ಕೂಡಿ ಬಂದಿದೆ. ಜೆಡಿಎಸ್‌ ಮುಳುಗುವ ಹಡಗಾಗಿದ್ದು, ಕುಮಾರಸ್ವಾಮಿರವರು ಕ್ಷೇತ್ರದಲ್ಲಿ ಸೋಲುವುದು ಖಚಿತವಾಗಿದೆ. ಹಿನ್ನೆಯಲ್ಲಿ ಮುಖ್ಯಮಂತ್ರಿಯ ಕನಸು ಎಂದು ವ್ಯಂಗ್ಯವಾಡಿದರು.

ಬಮೂಲ್‌ ನಾಮಿನಿ ನಿರ್ದೇಶಕ ಎಸ್‌.ಲಿಂಗೇಶ್‌ ಕುಮಾರ್‌, ತಾಪಂ ಮಾಜಿ ಅಧ್ಯಕ್ಷ ಹರೂರು ರಾಜಣ್ಣ, ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಂಪುರ ಮಲವೇಗೌಡ, ನಗರ ಬಿಜೆಪಿ ಘಟಕದ ಅಧ್ಯಕ್ಷ ಶಿವು, ನಾಗವಾರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.