CPY ಬಾವ ಮಹದೇವಯ್ಯ ಕಿಡ್ನಾಪ್ ಅಪಹರಣ… ಪತ್ತೆಯಾದ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು
Team Udayavani, Dec 4, 2023, 8:48 AM IST
ರಾಮನಗರ: ಸಿ.ಪಿ. ಯೋಗೀಶ್ವರ್ ಅವರ ಬಾವ ಮಹದೇವಯ್ಯ ಕಿಡ್ನಾಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ಅದರಂತೆ ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದ್ದು ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು ಪೊಲೀಸರು ಹೆಚ್ಚಿನ ತಪಾಸಣೆ ನಡೆಸುತ್ತಿದ್ದಾರೆ.
ಕಳೆದೆರಡು ದಿನಗಳಿಂದ ನಾಪತ್ತೆಯಾಗಿರುವ ಮಹದೇವಯ್ಯ ಅವರ ಪತ್ತೆಗೆ ಚನ್ನಪಟ್ಟಣ ಪೊಲೀಸರು ಬಲೆ ಬೀಸಿದ್ದು ಇದೀಗ ಮಹದೇವಯ್ಯ ಅವರ ಕಾರು ಚಾಮರಾಜನಗರದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ರಾಮಾಪುರ ಪೊಲೀಸರು, ಚನ್ನಪಟ್ಟಣ ಡಿವೈಎಸ್‌ಪಿ, ಸಿಪಿವೈ ಭೇಟಿ, ಪರಿಶೀಲನೆ ನಡೆಸಿದ ವೇಳೆ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ.
ಘಟನೆಗೆ ಸಂಬಂಧಿಸಿ ಪೊಲೀಸರು ಅಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ಮೂಡಿದ್ದು ಇದೀಗ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ, ಫಿಂಗರ್ ಫ್ರಿಂಟ್ ತಂಡ, ಶ್ವಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಪತ್ತೆಯಾಗಿರುವ ಕಾರನ್ನು ನೈಟ್ ಬೀಟ್ ಪೊಲೀಸರು ಪತ್ತೆಹಚ್ಚಿದ್ದು ಪರಿಶೀಲನೆ ನಡೆಸಿದಾಗ ಮಹದೇವಯ್ಯ ಅವರಿಗೆ ಸೇರಿದ್ದ ಕಾರು ಎಂಬುದು ಗೊತ್ತಾಗಿದೆ. ಈ ವೇಳೆ ಕಾರನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ.
ಇದನ್ನೂ ಓದಿ: CPY ಬಾವ ಮಹದೇವಯ್ಯ ಕಿಡ್ನಾಪ್ ಪ್ರಕರಣ… ಚಾಮರಾಜನಗರ ಜಿಲ್ಲೆಯಲ್ಲಿ ಕಾರು ಪತ್ತೆ
ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಕಿಡ್ನಾಪ್ ಅಪಹರಣ ಪ್ರಕರಣ ದಾಖಲಾಗಿತ್ತು. ಕಾಣೆಯಾದ ದಿನ ಮಿಸ್ಸಿಂಗ್ ಎಂದು ದೂರು ನೀಡಿದ ಮಹದೇವಯ್ಯ ಪುತ್ರ ಪ್ರಶಾಂತ್.
ಈ ಸಂಬಂಧ ಐಪಿಸಿ 365 ಅಡಿ ಪ್ರಕರಣ ದಾಖಲು. ಆರೋಪಿಗಳಿಗಾಗಿ ಬಲೆ ಬೀಸಿರೋ ಪೊಲೀಸರು. ಚಾಮರಾಜನಗರದ ರಾಮಾಪುರ ಗ್ರಾಮದಲ್ಲಿ ಬೀಡು ಬಿಟ್ಟಿರೋ ಚನ್ನಪಟ್ಟಣ ಡಿವೈಎಸ್‌ಪಿ ಕೆ.ಸಿ. ಗಿರಿ, ಸಿಪಿವೈ ಕೃಷ್ಣ ತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್ ಆರತಿ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!
Arrested: ಫಾರೆಸ್ಟ್ ಗಾರ್ಡ್ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ
Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.