ರೈತರ ಮನೆಗೆ ಸರ್ಕಾರಿ ಸೌಲಭ್ಯ ತಲುಪಿಸಿ: ಕಾವ್ಯ


Team Udayavani, Nov 1, 2022, 4:11 PM IST

tdy-9

ಚನ್ನಪಟ್ಟಣ: ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಪಂ ಕಚೇರಿ ಆವರಣದಲ್ಲಿ ನರೇಗಾ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ನಡೆಯಿತು.

ತಾಲೂಕು ನರೇಗಾ ಸಾಮಾಜಿಕ ಪರಿಶೋಧನಾ ಸಂಯೋಜಕಿ ಡಿ.ಎಸ್‌.ಉಮಾಶ್ರೀ, ನರೇಗಾ ಅನುದಾನದಡಿ ವೈಯಕ್ತಿಕ ಹಾಗೂ ಸಾರ್ವಜನಿಕ ಕಾಮಗಾರಿಗಳ ಪ್ರಗತಿ ಹಾಗೂ ಮುಂದೆ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ತಿಟ್ಟಮಾರನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವೈಯಕ್ತಿಕ ಹಾಗೂ ಸಾಮಾಜಿಕ ನರೇಗಾ ಕಾಮಗಾರಿಗಳು ನಡೆದಿದ್ದು, ಈ ಸಂಬಂಧ ಮಾಹಿತಿ ನೀಡಿದರು.ವರದಿ ಆಧರಿಸಿ ಸಾರ್ವಜನಿಕರು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಡುವೆ ಚರ್ಚೆ ನಡೆಯಿತು.

ದಕ್ಷತೆಯಿಂದ ಕಾರ್ಯನಿರ್ವಹಣೆ ಮಾಡಿ: ಪಿಡಿಒ ಜೆ.ಕಾವ್ಯ ಮಾತನಾಡಿ, ಇಲಾಖೆಗಳ ಅಧಿ ಕಾರಿಗಳು ಸಣ್ಣಪುಟ್ಟ ಲೋಪಗಳನ್ನು ಸರಿ ಮಾಡಿ ಕೊಂಡು, ರೈತರ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮತ್ತಷ್ಟು ದಕ್ಷತೆಯಿಂದ ಕಾರ್ಯ ನಿರ್ವಹಣೆ ಮಾಡಬೇಕು. ಅಧಿಕಾರಿಗಳು ತಮ್ಮ ಇಲಾಖೆಯಡಿ ಗ್ರಾಮೀಣ ಜನರು ಹಾಗೂ ರೈತರಿಗೆ ದೊರೆಯುವ ಸೌಲಭ್ಯ, ಅನುಕೂಲಗಳ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ಕೊಡುವುದರ ಜೊತೆಗೆ, ರೈತರನ್ನು ಕಚೇರಿಗಳಿಗೆ ಅಲೆಸದಂತೆ ಕೆಲಸ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.

ಗ್ರಾಪಂ ಕಾರ್ಯದರ್ಶಿ ಬಸವಲಿಂಗಯ್ಯ ಮಾತ ನಾಡಿ, ನರೇಗಾ ಜಾಬ್‌ ಕಾರ್ಡ್‌ ಹೊಂದಿ ರುವ ಫ‌ಲಾನುಭವಿಗಳು, ಈಗಾಗಲೇ ಎರಡೂವರೆ ಲಕ್ಷ ರೂ. ವೆಚ್ಚದ ವೈಯಕ್ತಿಕ ಕಾಮಗಾರಿ ಪೂರೈಸಿದ್ದಲ್ಲಿ ಅಂತಹವರು ಮತ್ತೆ ನರೇಗಾ ವೈಯಕ್ತಿಕ ಕಾಮಗಾರಿ ನಡೆಸಲು ಅರ್ಹರಾಗಿರುವುದಿಲ್ಲ ಎಂದು ಮಾಹಿತಿ ನೀಡಿದರು.

ನರೇಗಾ ಕಾಮಗಾರಿಗೆ ಅವಕಾಶ: ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಸುಷ್ಮಾ ಮಾತನಾಡಿ, ಋತುಮಾನಕ್ಕೆ ಅನುಗುಣವಾಗಿ ಭತ್ತದ ಬೆಳೆಗೆ ಔಷಧ, ಎರಡು ರೆಕ್ಕೆಯ ನೇಗಿಲು ದೊರೆಯುವಿಕೆ ಹಾಗೂ ನರೇಗಾ ಯೋಜನೆಯಡಿ ಹಲವು ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶವಿದೆ. ರೈತರು ಸೂಕ್ತ ದಾಖಲೆಗಳೊಂದಿಗೆ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹು ದಾಗಿದೆ ಎಂದು ಮನವಿ ಮಾಡಿದರು.

ಅರ್ಹರು ಸೌಲಭ್ಯ ಬಳಸಿಕೊಳ್ಳಿ: ನರೇಗಾ ಎಂಜಿನಿಯರ್‌ ಮಹದೇವು ಮಾತನಾಡಿ, ಇಪ್ಪತ್ತು ಅಡಿ ಅಗಲ, ಹತ್ತಡಿ ಉದ್ದದ ಕೊಟ್ಟಿಗೆ ನಿರ್ಮಾಣಕ್ಕೆ ಎಲ್ಲರಿಗೂ ಐವತ್ತೇಳು ಸಾವಿರ ರೂ. ನಿಗದಿ ಮಾಡಲಾಗಿದೆ. ಅದೇ ರೀತಿ ಹದಿನೈದು- ಹನ್ನೆರಡು ಅಡಿ ಉದ್ದದ ಮೇಕೆ ಶೆಡ್ಡು ನಿರ್ಮಾಣಕ್ಕೆ ಎಪ್ಪತ್ತೆçದು ಸಾವಿರ ರೂ.ನಿಗದಿಯಾಗಿದ್ದು, ಅರ್ಹರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು. ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಧುಸೂದನ್‌ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಎನ್‌. ಆರ್‌.ರೇಖಾ, ಸದಸ್ಯರಾದ ಹನುಮಂತು, ಗೌರಮ್ಮ, ಗಂಗಮ್ಮ, ಸೌಭಾಗ್ಯಮ್ಮ, ಮುನಿ ವೆಂಕಟಪ್ಪ, ಅಶೋಕ್‌, ಕೃಷ್ಣಪ್ಪ, ಚಂದ್ರಕಲಾ, ಪವಿತ್ರ, ಮಾಜಿ ಸದಸ್ಯ ಮೂರ್ತಿ ಮತ್ತು ಅಂಗನವಾಡಿ- ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.