ನೂತನ ಪಿಂಚಿಣಿ ಯೋಜನೆ ರದ್ದಿಗೆ ಆಗ್ರಹ
Team Udayavani, Feb 26, 2019, 7:36 AM IST
ಚನ್ನಪಟ್ಟಣ: ನೂತನ ಪಿಂಚಿಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಯೋಜನೆಯನ್ನೇ ಮುಂದುವರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.
ಕೇಂದ್ರ ಸರ್ಕಾರವು ನೂತನ ಪಿಂಚಿಣಿ ಯೋಜನೆಯನ್ನು ಜಾರಿಗೊಳಿಸುವ ಅಥವಾ ಕೈಬಿಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ಕೇಂದ್ರದ ಈ ನಿಲುವನ್ನು ಆಧರಿಸಿ, ಸರ್ಕಾರ ರಚನೆ ಮಾಡಿರುವ ಅಧಿಕಾರಿಗಳು ಸಮಿತಿ ವರದಿ ಪಡೆದುಕೊಂಡು ಹಳೆಯ ಪಿಂಚಿಣಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಹಳೆಯ ಪಿಂಚಿಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಸರ್ಕಾರವು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಿದ್ದು, ಎನ್‌ಪಿಎಸ್ ಯೋಜನೆ ರದ್ದತಿ ಸಂಬಂಧ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದೆ. ಹಾಗಾಗಿ ಆದಷ್ಟು ಶೀಘ್ರವಾಗಿ ಸರ್ಕಾರ ಅನುಷ್ಠಾನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದೇಗೌಡ, ಕಾರ್ಯದರ್ಶಿ ಹೇಮಾವತಿ, ಸರ್ಕಾರಿ ನೌಕರರ ಸಂಘದ ಸದಸ್ಯರಾದ ಸೌಭಾಗ್ಯ, ಅಶ್ವಿನಿ, ಸರಸ್ವತಿ, ರಮೇಶ್, ಪ್ರಕಾಶ್, ಗುಂಡಪ್ಪ, ಜಯಲಕ್ಷ್ಮೀ, ರವಿಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.