ಅಗತ್ಯ ಗೊಬ್ಬರ ಪೂರೈಕೆಗೆ ಆಗ್ರಹ
Team Udayavani, Aug 22, 2020, 12:29 PM IST
ಕನಕಪುರ: ತಾಲೂಕಿನಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆಯನ್ನು ಶಿಘ್ರವಾಗಿ ಪರಿಹರಿಸಬೇಕು ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿರಾಜು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.
ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದ ಅವರು, ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ತಾಲೂಕಿನಲ್ಲಿ ಸಂಪೂರ್ಣ ರಾಸಾಯನಿಕ ಗೊಬ್ಬರದ ಕೊರತೆ ಉಂಟಾಗಿ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಪ್ರತಿ ವರ್ಷ ಎಷ್ಟು ರೈತರಿದ್ದಾರೆ, ಎಷ್ಟು ವಿಸ್ತೀರ್ಣದಲ್ಲಿ ಬಿತ್ತನೆ ಮಾಡಿದ್ದಾರೆ, ಎಷ್ಟು ರಾಸಾಯನಿಕ ಗೊಬ್ಬರದ ಅವಶ್ಯಕತೆ ಇದೆ ಎಂಬಿತ್ಯಾದಿ ಮಾಹಿತಿ ಕೃಷಿ ಇಲಾಖೆಗೆ ಇದ್ದರೂ ದಾಸ್ತಾನು ಸಂಗ್ರಹಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.
ದಲ್ಲಾಳಿಗಳೊಂದಿಗೆ ರಸಗೊಬ್ಬರ ಮಾರಾಟಗಾರರು ಹೊಂದಾಣಿಕೆ ಮಾಡಿಕೊಂಡು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ರಸ ಗೊಬ್ಬರ ಸಿಗದೆ ಅಲೆದಾಡಿ ಬೇಸತ್ತ ರೈತರು ಹೆಚ್ಚು ಹಣ ನೀಡಿ ಖರೀದಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಸಮರ್ಪಕವಾಗಿ ಗೊಬ್ಬರ ಪೂರೈಕೆ ಮಾಡದೆ ಬೇಜಾವಬ್ದಾರಿ ಪ್ರದರ್ಶನ ಮಾಡುತ್ತಿರುವ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ತಾಲೂಕಿನ ರೈತರಿಗೆ ಅವಶ್ಯಕ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ವರ್ಷಾ ಒಡೆಯರ್ ಅವರನ್ನು ಒತ್ತಾಯಿಸಿದ್ದಾರೆ.
ತಾಲೂಕು ರೈತ ಸಂಘದ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಹರೀಶ್, ಕೃಷ್ಣಪ್ಪ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.