ಗ್ರಾಪಂನಿಂದ ಬಟ್ಟೆ ಬ್ಯಾಗ್ ವಿತರಣೆ
Team Udayavani, Jul 26, 2020, 7:57 AM IST
ಚನ್ನಪಟ್ಟಣ: ಸ್ವಚ್ಛ ಶುಕ್ರವಾರದ ಅಂಗವಾಗಿ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಪಂಚಾಯ್ತಿ ವತಿಯಿಂದ ಪ್ರತಿ ಮನೆಗೆ ಉಚಿತವಾಗಿ ಬಟ್ಟೆಯ ಬ್ಯಾಗ್ ವಿತರಣೆ ಮಾಡಲಾಯಿತು.
ಚಕ್ಕೆರೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಯತೀಶ್ ಚಂದ್ರ ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಜನರಿಗೆ ಉಚಿತ ಬಟ್ಟೆ ಬ್ಯಾಗ್ ವಿತರಣೆ ಮಾಡಿದರು. ಪಿಡಿಒ ಯತೀಶ್ ಚಂದ್ರ ಮಾತನಾಡಿ, ಇತ್ತೀಚಿ ನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರಕ್ಕೆ ಹೆಚ್ಚಿನ ಹಾನಿ ಆಗುತ್ತಿರುವುದರಿಂದ ಪ್ರತಿ ಮನೆ ಗಳಿಗೂ ಬಟ್ಟೆ ಬ್ಯಾಗ್ ಕೊಡಬೇಕು ಎಂದು ನಿರ್ಧಾರ ಮಾಡಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಗ್ರಾಮಸ್ಥರು ಯಾವುದೇ ವಸ್ತು ಖರೀದಿ ಮಾಡಲು ಹೋಗುವಾಗ ಬಟ್ಟೆ ಬ್ಯಾಗುಗಳನ್ನೇ ಬಳಸಬೇಕು, ಪ್ಲಾಸ್ಟಿಕ್ ಕವರ್ ತಿರಸ್ಕರಿಸಬೇಕು ಎಂದರು. ಈ ಬ್ಯಾಗ್‌ಗಳನ್ನು ಖರೀದಿ ಮಾಡಲು ಪಂಚಾಯ್ತಿ ಸದಸ್ಯರ ಒಪ್ಪಿಗೆ ಮೇರೆಗೆ ಅವರ ಗೌರವಧನ ಹಾಗೂ ಪಂಚಾಯ್ತಿ ತೆರಿಗೆ ಮೊತ್ತದಿಂದ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. ಕಾರ್ಯದರ್ಶಿ ರಮೇಶ್, ಸಿಬ್ಬಂದಿಗಳಾದ ನಾಗರಾಜು, ಯೋಗೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.