ನೀವು ಎಲ್ಲೇ ಇದ್ದರೂ ಕಾಂಗ್ರೆಸ್‌ಗೆ ಮತ ನೀಡಿ: ಡಿಕೆಶಿ
Team Udayavani, Jan 16, 2023, 12:51 PM IST
ಕನಕಪುರ: “ತಾಲೂಕಿನ ನೂರಾರು ಜನ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬೇರೆ ಬೇರೆ ನಗರಗಳಿಗೆ ವಲಸೆ ಹೋಗಿದ್ದಾರೆ. ಯಾವುದೇ ನಗರದಲ್ಲಿ ಸ್ವಂತ ಸೂರು ಮತ್ತು ಬದುಕು ಕಟ್ಟಿಕೊಂಡರೂ ನಿಮ್ಮ ಮೂಲವನ್ನು ಯಾರೂ ಅಳಸಿ ಹಾಕಲು ಸಾಧ್ಯವಿಲ್ಲ. ನಿಮ್ಮ ಸೇವೆ ಮಾಡಲು ನಾವು ಸದಾ ಸಿದ್ಧರಿದ್ದೇವೆ. ನೀವು ಎಲ್ಲೇ ವಾಸವಿದ್ದರೂ ಅಲ್ಲಿಯೂ ತಮ್ಮ ಪ್ರಭಾವ ಬೀರಿ ನಮ್ಮ ಪಕ್ಷಕ್ಕೆ ಮತಗಳನ್ನು ಕೊಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.
7 ಬಾರಿ ಆಯ್ಕೆ: ಡಿಕೆಎಸ್ ಚಾರಿಟಬಲ್ ಇನ್ಸ್‌ಟ್ಯೂಟ್ ಟ್ರಸ್ಟ್ ವತಿಯಿಂದ ಕಳೆದ 5 ದಿನಗಳಿಂದ ನಡೆದ ಕನಕೋತ್ಸವದ ಕೊನೇ ದಿನ ಭಾನುವಾರ ಸಾಧಕರ ಸಮಾವೇಶದಲ್ಲಿ ಮಾತನಾಡಿದರು. ಈ ತಾಲೂಕಿನ ಜನ ಕಳೆದ ಏಳು ಬಾರಿ ಶಾಸಕನಾಗಿ ನನ್ನನ್ನು ಆಯ್ಕೆ ಮಾಡಿ ಇಡೀ ರಾಜ್ಯಕ್ಕೆ ಪರಿಚಯ ಮಾಡಿಕೊಟ್ಟಿದ್ದೀರಿ. ಸಹೋದರ ಡಿ.ಕೆ.ಸುರೇಶ್ ಅವರನ್ನು ಮೂರು ಬಾರಿ ಲೋಕಸಭೆಗೆ ಆಯ್ಕೆ ಮಾಡಿದ್ದೀರಿ. ಆದರೆ, ನಾವು ನಿಮ್ಮ ಋಣ ತೀರಿಸಿದ್ದೀವಿ. ಅದಕ್ಕೆ ನಿಮ್ಮ ಕಣ್ಣುಗಳೇ ಸಾಕ್ಷಿ ಎಂದರು.
ಪ್ರಭಾವ ಬೀರಿ: ತಾಲೂಕು ಕಳೆದ 2-3 ದಶಕಗಳ ಹಿಂದೆ ಹೇಗಿತ್ತು. ಈಗ ಹೇಗಿದೆ. ಕುಡಿಯುವ ನೀರು, ರಸ್ತೆ, ಮೂಲ ಸೌಕರ್ಯ ಕಲ್ಪಿಸಿಕೊಟ್ಟಿದ್ದೇವೆ. ತಾಲೂಕು ಕಚೇರಿ, ನಗರಸಭೆ ಹಾಗೂ ಹಲವಾರು ಸುಸಜ್ಜಿತ ಸರ್ಕಾರಿ ಕಚೇರಿಗಳನ್ನು ನಿರ್ಮಾಣ ಮಾಡಿದ್ದೇವೆ. ಸುರೇಶ್ ಅವರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಿದ್ದೇವೆ ಎಂದರು.
ಸಹಾಯ ಮಾಡಲಿಲ್ಲ: ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಜನಸಾಮಾ ನ್ಯರು ಸಂಕಷ್ಟಕ್ಕೆ ಸಿಲುಕಿದಾಗ ಸರ್ಕಾರ ಜನರ ಸಹಾ ಯಕ್ಕೆ ಬರಲಿಲ್ಲ. ಅಡುಗೆ ಅನಿಲ, ಇಂಧನ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಂಕಷ್ಟದಲ್ಲಿದ್ದಾರೆ. ಜನಸಾಮಾನ್ಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸರ್ಕಾರ ಯಾವುದೇ ಸಹಾಯ ಮಾಡ ಲಿಲ್ಲ. ಜನರಿಗೆ ಈ ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಮಾತ್ರ ಕೊಟ್ಟಿದೆ ಎಂದು ಹರಿಹಾಯ್ದರು.
ಭರ್ತಿ ಮಾಡಿಲ್ಲ: ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯನವರು ಹೇಳಿದ್ದಲ್ಲ. ಸರ್ಕಾರ ಕೊಡುವ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರ ಸಂಘದಿಂದಲೇ ಇದು 40 ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಬೀದಿಯಲ್ಲಿ ನಿಂತು ಸ್ವಪಕ್ಷೀಯರೇ ಕೆಸರೆರಚಾಟ ಮಾಡಿ ಕೊಂಡಿದ್ದಾರೆ. 2500 ಕೋಟಿ ಕೊಟ್ಟರೆ ಮುಖ್ಯ ಮಂತ್ರಿಗಳ ಕುರ್ಚಿ ಮಾರಾಟಕ್ಕಿದೆ ಎಂದು ಯತ್ನಾಳ ಅವರು ಹೇಳುತ್ತಾರೆ. ಪಿಎಸ್‌ಐ ಹಗರಣದಲ್ಲಿ ಬಿಜೆಪಿ ನಾಯಕರೇ ಭಾಗಿಯಾಗಿದ್ದಾರೆ ಎಂದು ಸ್ವಪಕ್ಷೀಯರೇ ಒಪ್ಪಿಕೊಂಡಿದ್ದಾರೆ. ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡುತ್ತಿಲ್ಲ ಎಂದು ದೂರಿದರು.
ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಚಂದ್ರಶೇಖರ್, ನಗರಸಭೆ ಅಧ್ಯಕ್ಷ ಕೆ.ಟಿ.ಕಿರಣ್, ಹಲವಾರು ಕಾಂಗ್ರೆಸ್ ಮುಖಂಡರು ಇದ್ದರು.
ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದೆ. ಬಿಜೆಪಿ ನಾಯಕರು ಮಾಡುವ ಹಗರಣಗಳಿಗೆ ಸಿಬಿಐ, ಇಡಿ ತನಿಖೆ ಮಾಡುವುದಿಲ್ಲ. ಆದರೆ, ವಿರೋಧ ಪಕ್ಷದ ನಾಯಕರ ಮೇಲೆ ಇಡಿ, ಸಿಬಿಐ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರದ್ದು ಭಾವನಾತ್ಮಕ ರಾಜಕೀಯ ನಮ್ಮ ರಾಜಕೀಯ ಬದುಕು ಕಟ್ಟುವ ರಾಜಕೀಯ ಮುಂದಿನ ಚುನಾವಣೆಯಲ್ಲಿ ನಿಮ್ಮ ಪ್ರೀತಿ, ವಿಶ್ವಾಸವು ಸಂಸದರು, ಶಾಸಕರ ಮೇಲೆ ಇದ್ದರೆ ಸಾಲದು, ಕಾಂಗ್ರೆಸ್ ಮೇಲೆ ಇರಬೇಕು. – ಪ್ರಿಯಾಂಕ್ ಖರ್ಗೆ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.