ನನ್ನನ್ನು CM ಮಾಡಬೇಕೆಂದು ನೀವು ಗೆಲ್ಲಿಸಿದಿರಿ, ಆದರೆ..: ಕನಕಪುರದಲ್ಲಿ ಡಿಕೆ ಶಿವಕುಮಾರ್


Team Udayavani, Jun 3, 2023, 2:40 PM IST

ನನ್ನನ್ನು CM ಮಾಡಬೇಕೆಂದು ನೀವು ಗೆಲ್ಲಿಸಿದಿರಿ, ಆದರೆ..: ಕನಕಪುರದಲ್ಲಿ ಡಿಕೆ ಶಿವಕುಮಾರ್

ರಾಮನಗರ: ನೀವು ನನ್ನನ್ನು ಮುಖ್ಯಮಂತ್ರಿ ಮಾಡಬೇಕೆಂದು ಗೆಲ್ಲಿಸಿದಿರಿ. ಹೈಕಮಾಂಡ್ ನನಗೆ ಡಿಸಿಎಂ ಜವಾಬ್ದಾರಿ ನೀಡಿದೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಆಗಮಿಸಿದ ಅವರು ಕಲ್ಲಹಳ್ಳಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಿತವಚನ ನೀಡಿದ್ದಾರೆ. ಅವರ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಮುಂದೆ ಒಳ್ಳೆಯ ದಿನಗಳು ಬರಲಿದೆ ಎಂದು ಪರೋಕ್ಷವಾಗಿ ಮುಂದೆ ಸಿಎಂ ಆಗುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ:ಸಚಿನ್ ಅಲ್ಲ, ಈತ ಏಷ್ಯಾದ ಅತ್ಯುತ್ತಮ ಆಟಗಾರ: ಮಾಜಿ ಪಾಕ್ ನಾಯಕನ ಹೆಸರು ಸೂಚಿಸಿದ ಸೆಹವಾಗ್

ಹೈಕಮಾಂಡ್ ನನ್ನನ್ನು ರಾಜ್ಯದ ಉಪಮುಖ್ಯಮಂತ್ರಿ ಮಾಡಿದೆ. ನಾನು ಎಷ್ಟೇ ಎತ್ತರಕ್ಕೆ ಬೆಳೆದ್ರು ಇಲ್ಲಿ ಮಾತ್ರ ನಿಮ್ಮ ಮನೆಮಗ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ರಾಜಕಾರಣಕ್ಕೆ ಬಂದೆ. ನನಗೆ ಯಾವತ್ತೂ ಅಧಿಕಾರದ ಮದ ಇಲ್ಲ, ಮುಂದೆಯೂ ಇರುವುದಿಲ್ಲ. ಕನಕಪುರ ಮಾದರಿ ಕ್ಷೇತ್ರಯಾಗಬೇಕು. ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಕೊಟ್ಟಿದ್ದೇನೆ. ನನ್ನ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಆಗಬೇಕು. ಬಿಜೆಪಿ ಸರ್ಕಾರ ಮೆಡಿಕಲ್ ಕಾಲೇಜು ತಪ್ಪಿಸಿತ್ತು. ಅದನ್ನ ಮತ್ತೆ ತರಲು ನಾನು ಮುಂದಾಗಿದ್ದೇನೆ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದೇನೆ‌. ಅರೋಗ್ಯ, ಶಿಕ್ಷಣ ಬಹಳ ಮುಖ್ಯ. ಎಲ್ಲದಕ್ಕೂ ನಾವು ಬೆಂಗಳೂರಿಗೆ ಹೋಗಲಾಗಲ್ಲ. ಎಲ್ಲರೂ ಬೆಂಗಳೂರಿಗೆ ವಲಸೆ ಹೋಗುವುದನ್ನು ತಪ್ಪಿಸಬೇಕು ಎಂದರು.

ಆಸ್ತಿ ಮಾರಬೇಡಿ: ಬೆಂಗಳೂರು-ಕನಕಪುರ ರಸ್ತೆ ಶೀಘ್ರದಲ್ಲೇ ಕಾಮಗಾರಿ ಮುಗಿಯಲಿದೆ. ಕ್ಷೇತ್ರದಲ್ಲಿ ಎಲ್ಲಾ ರೀತಿಯ ಬದಲಾವಣೆಯಾಗುತ್ತದೆ. ನೀವು ಯಾರೂ ನಿಮ್ಮ ಆಸ್ತಿಗಳನ್ನ ಮಾರಿಕೊಳ್ಳಬೇಡಿ. ಮುಂದೆ ಕ್ಷೇತ್ರದ ಜನರಿಗೆ ಉತ್ತಮ ಭವಿಷ್ಯವಿದೆ. ಮುಂದೆ ನಿಮ್ಮ ಆಸ್ತಿಗೆ ಒಳ್ಳೆಯ ಬೆಲೆ ಬರುತ್ತದೆ. ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆಗೆ ಹೆಚ್ಚು ಒತ್ತು ಸಿಗಲಿದೆ. ಕ್ಷೇತ್ರದ ಜನತೆಗೆ ಮುಂದೆ ಆರ್ಥಿಕ ಶಕ್ತಿ ಸಿಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ನನ್ನನ್ನು ಭೇಟಿ ಮಾಡಲು ಸಾಕಷ್ಟು ಜನ ಬರುತ್ತಿದ್ದೀರಿ. ಮುಂದೆ ರಾಮನಗರ ಮತ್ತು ಕನಕಪುರದಲ್ಲಿ ಕಚೇರಿ ತೆರೆಯುತ್ತೇನೆ. ವಾರದಲ್ಲಿ ಒಂದು ದಿನ ಜಿಲ್ಲೆಗೆ ಮೀಸಲಿಡುವ ಕೆಲಸ ಮಾಡುತ್ತೇನೆ. ಯಾರೂ ಬೆಂಗಳೂರಿಗೆ ಬಂದು ಕಾಯುವ ಪರಿಸ್ಥಿತಿ ತಂದುಕೊಳ್ಳಬೇಡಿ. ನನ್ನ ಗನ್ ಮ್ಯಾನ್ ಪಿಎ ಗಳು 50, 100ರೂ ದುಡ್ಡು ಕೊಟ್ಟರೆ ನಿಮ್ಮನ್ನು ಮುಂದಕ್ಕೆ ಕರೆಸುತ್ತಾರೆ, ಇಲ್ಲದಿದ್ದರೆ ನಿಮ್ಮನ್ನ ಹಿಂದೆ ಬಿಡುತ್ತಾರೆ. ಎಲ್ಲವೂ ನನಗೆ ಗೊತ್ತು ಎಂದರು.

ನಾವು ಗೆದ್ದಿದ್ದೇವೆಂದು ಇತರ ಪಕ್ಷಗಳ ಮೇಲೆ ದಬ್ಬಾಳಿಕೆ ಬೇಡ. ಜೆಡಿಎಸ್ ಹಾಗೂ ಬಿಜೆಪಿಯವರನ್ನು ಅಣಕಿಸುವುದು ಬೇಡ. ಎಲ್ಲರೂ ಶಾಂತಿಯಿಂದ ವರ್ತಿಸಬೇಕು. ಯಾರೂ ಜೂಜಾಟ ಸೇರಿ ಇತರ ವ್ಯಸನಕ್ಕೆ ಹೋಗಬೇಡಿ ಎಂದು ಕ್ಷೇತ್ರದ ಜನತೆಗೆ ಡಿಕೆ ಶಿವಕುಮಾರ್ ಕರೆ ನೀಡಿದರು.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.