ಸಂವಿಧಾನದ ಪ್ರತಿಫಲದಿಂದ ಶೈಕ್ಷಣಿಕ ಅಭಿವೃದ್ಧಿ
Team Udayavani, Jan 29, 2018, 4:24 PM IST
ಚನ್ನಪಟ್ಟಣ: ಸಂವಿಧಾನದ ಪ್ರತಿಫಲದಿಂದಾಗಿ ಇಂದು ಸಮಾಜದಲ್ಲಿನ ಎಲ್ಲ ವರ್ಗದವರು ರಾಜಕೀಯವಾಗಿ, ಆರ್ಥಿಕವಾಗಿ, ಶೆ„ಕ್ಷಣಿಕವಾಗಿ ಅಭಿವೃದ್ಧಿಯಾಗಲು ಸಾಧ್ಯವಾಗಿದೆ ಎಂದು ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ಅಭಿಪ್ರಾಯಿಸಿದರು.
ಪಟ್ಟಣದ ಪೊಲೀಸ್ ಠಾಣೆ ಮುಂಭಾಗದ ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ 69ನೇ ಗಣರಾಜ್ಯೋತ್ಸವ ಪ್ರಯುಕ್ತ ತಾಲೂಕು ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಪ್ರಜಾತಂತ್ರ ಸಂರಕ್ಷಣಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ತಮ್ಮ ಬಾಲ್ಯದಲ್ಲಿ ಹಲವಾರು ಸಮಸ್ಯೆಗಳನ್ನು ಅನುಭವಿಸಿದ್ದರು. ಅವರಂತೆ ಬೇರೆ ಯಾವ ಸಮುದಾಯದವರು ಕಷ್ಟ ಅನುಭವಿಸಬಾರದು ಎಂಬ ಚಿಂತನೆಯಿಂದ ಛಲದಿಂದ ಅತ್ಯುನ್ನತ ಶಿಕ್ಷಣವನ್ನು ಪಡೆದು ಸಂವಿಧಾನದ ರಚನೆಗೆ ಮುಂದಾದರು ಎಂದರು.
ದಲಿತ ಮುಖಂಡ ಎಸ್.ಸಿ.ಶೇಖರ್ ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆಯ ನಿರ್ಮಾಣಕ್ಕಾಗಿ ಹಲವಾರು ಅಭಿಮಾನಿಗಳು ಕೈಜೋಡಿಸಿ ಇಂದು ರಸ್ತೆಯ ಪ್ರಯಾಣಿಕರು ಶಿಲ್ಪಿಗೆ ಕೈಮುಗಿಯುವಂತಾಗಿದೆ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ತಿಳಿಸಿದರು.
ನಿವೃತ್ತ ಅಭಿಯಂತರ ರವಿಕುಮಾರ್ ಮಾತನಾಡಿ, ಇಂದು ಎಲ್ಲಾ ವರ್ಗದವರು ಸಮಾನವಾಗಿ ಎಲ್ಲಾ ವರ್ಗದಲ್ಲಿ ತಮ್ಮನ್ನು ತಾವು ಗುರ್ತಿಸಿಕೊಳ್ಳಲು ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ. ಆದರೆ ಇಂದು ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಅಭ್ಯಾಸ ಮಾಡದವರು ಅವರ ಬರವಣಿಗೆಯನ್ನು ಅಪಮಾನ ಮಾಡಲು ಯತ್ನಿಸಿದ್ದಾರೆ ಎಂದು ವಿಷಾದಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಸ್ತೂರಿ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಪ್ರಜಾ ಪರಿವರ್ತನಾ ಪಾರ್ಟಿ ರಾಜ್ಯ ಕಾರ್ಯದರ್ಶಿ, ಗ.ಚಂದ್ರಶೇಖರ್, ಅಭಿಯಂತರ ಎಂ.ಎಲ್.ಶಂಕರಪ್ಪ, ಎಸ್‌ಸಿ, ಎಸ್‌ಟಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಮತ್ತೀಕೆರೆ ಹನುಮಂತಯ್ಯ, ಕೇಶವಮೂರ್ತಿ,
ಮಂಗಳವಾರಪೇಟೆ ನಾರಾಯಣಸ್ವಾಮಿ, ದಸಂಸ ಜಿಲ್ಲಾ ಸಂಚಾಲಕ ಕುಮಾರ್, ತಾಲೂಕು ಸಂಚಾಲಕ ವೆಂಕಟೇಶ್, ಜೆಡಿಎಸ್ ಮುಖಂಡ ಕೋಟೆ ಶ್ರೀನಿವಾಸ್, ಕೋಟೆ ಸಿದ್ದರಾಮಯ್ಯ, ಪ್ರಜಾ ಪರಿವರ್ತನಾ ಪಾರ್ಟಿ ಜಿಲ್ಲಾ ಕಾರ್ಯದರ್ಶಿ ನೀಲಸಂದ್ರ ಸಿದ್ದರಾಮು, ಸೇರಿದಂತೆ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.