ಪರೀಕ್ಷಾ ಕೇಂದ್ರ ಸುರಕ್ಷಿತ ತಾಣ: ಸಚಿವ

Team Udayavani, Jul 2, 2020, 6:41 AM IST

pariksha-sachiva

ರಾಮನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕ್ಷೇಂದ್ರಗಳಾಗುವ ಜತೆಗೆ ಸುರಕ್ಷತೆ ಕೇಂದ್ರಗಳೂ ಆಗಿವೆ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದರು. ಬುಧವಾರ ಜಿಲ್ಲೆಯ ವಿವಿಧ ಪರೀಕ್ಷೆ ಕೇಂದ್ರಗಳಿಗೆ ಭೇಟಿಕೊಟ್ಟು ಪರಿಶೀಲಿಸಿ, ನಗರದ  ಭಾರತೀಯ ಸಂಸ್ಕೃತಿ ವಿದ್ಯಾಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಗೆ ತಮ್ಮ ಭೇಟಿ ಬಗ್ಗೆ ಮಾತನಾಡಿದ ಅವರು ಮಕ್ಕಳ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ.

ಮುಂಜಾಗ್ರತೆ ಕ್ರಮಗಳು ಯಾವ  ಮಟ್ಟದಲ್ಲಿ ಪಾಲನೆಯಾ ಗಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೇಗಿದೆ ಎಂಬುದರ ಬಗ್ಗೆ ಖುದ್ದ ಅರಿವು ಮೂಡಿಸಿಕೊಳ್ಳಲು ಭೇಟಿ ನೀಡಿರುವುದಾಗಿ ಸಚಿವರು ತಿಳಿಸಿದರು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ತಾವು ಖುದ್ದು ಭೇಟಿ  ಮಾಡಿರುವುದಾಗಿ, ವಿದ್ಯಾರ್ಥಿಗಳು ಈವರೆಗೆ ಇಂಗ್ಲಿಷ್‌, ಗಣಿತ, ವಿಜ್ಞಾನ ವಿಷಯಗಳಿಗೆ ಈಗಾಗಲೇ ಪರೀಕ್ಷೆ ಬರೆದಿದ್ದಾರೆ. ಅವರು ಲವಲವಿಕೆಯಿಂದ ಪರೀಕ್ಷೆಗೆ ತೆರಳಿದ್ದನ್ನು ತಾವು ನೋಡಿರುವುದಾಗಿ ತಿಳಿಸಿದರು.

ರಾಮನಗರ ಜಿಲ್ಲೆ ಯಲ್ಲಿ ಮಕ್ಕಳ ಹಾಜರಾತಿ ಚೆನ್ನಾಗಿದೆ ಎಂದರು.  ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಪರೀಕ್ಷೆ ಅರಂಭಕ್ಕೆ ಮುನ್ನ ಪರೀಕ್ಷೆ ಬಗ್ಗೆ ಊಹಾಪೋಹದ ಮಾತುಗಳು ಕೇಳಿದವು. ಈಗ ಮೌಲ್ಯಮಾಪನದ ಬಗ್ಗೆ ಕೇಳಿ ಬರುತ್ತಿದೆ. ಮಕ್ಕಳು  ಪರಿಶ್ರಮ ಪಟ್ಟು ಓದಿದ್ದಾರೆ. ಛಲದಿಂದ ಪರೀಕ್ಷೆ ಬರೆ ಯುತ್ತಿದ್ದಾರೆ. ಅವರು ಅಂಕ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಮಕ್ಕಳ ಪರಿಶ್ರಮದ ಬಗ್ಗೆ ತಿರಸ್ಕಾರ ಸಲ್ಲದು ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕ ನಿರ್ಧರಿಸುವ ಮುನ್ನ ತಾವು ವಿರೋಧ ಪಕ್ಷಗಳ ಮುಖಂಡ ಸಿದ್ದರಾಮಯ್ಯ, ಎಚ್‌ .ಡಿ. ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌, ಮಾಜಿ ಶಿಕ್ಷಣ ಸಚಿವ ರ ಬಳಿ ಚರ್ಚಿಸಿದ್ದಾಗಿ,  ಎಚ್‌.ಡಿ.ಕುಮಾರಸ್ವಾಮಿ ಮತ್ತು ತನ್ವಿರ್‌ಸೇಠ್ ಅವರು ಪರೀಕ್ಷೆ ಮುಂದಕ್ಕೆ ಹಾಕಿ ಎಂದು ಅಭಿ ಪ್ರಾಯ ವ್ಯಕ್ತಪಡಿಸಿದರು. ಅವರ ಅಭಿಪ್ರಾಯ ತಾವು ಗೌರವಿಸುವುದಾಗಿ, ಅವರ ಕಾಳಜಿ ಅರ್ಥ ಮಾಡಿಕೊಂಡು ಪರೀಕ್ಷೆಗೆ ಸಿದ್ದತೆ  ಇನ್ನಷ್ಟು ಎಚ್ಚರಿಕೆ ಮತ್ತು ಹೆಚ್ಚಿನ ರೀತಿ ಕ್ರಮವಹಿಸಿರುವು ದಾಗಿ ತಿಳಿಸಿದರು. ಜಿಲ್ಲೆಯ ಕನಕಪುರ, ಚನ್ನಪಟ್ಟಣ ಮತ್ತು ರಾಮನಗರ ತಾಲೂಕಿನ ಕೆಲವು ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಸಚಿವರ ಪ್ರವಾಸದ ವೇಳೆ ಜಿಪಂ ಸಿಇಒ  ಇಕ್ರಂ, ಡಿಡಿಪಿಐ ಸೋಮಶೇಖರಯ್ಯ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪೂರಕ ಪರೀಕ್ಷೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಮುಂದಾಗಿದ್ದ, ಕೆಲವು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ ಅವರು ಆತಂಕ ಪಡುವ ಅಗತ್ಯವಿಲ್ಲ. ಆಗಸ್ಟ್‌ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಅವರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಅವರನ್ನು ಫ್ರೆಶ್‌ ಕ್ಯಾಂಡಿಡೇಟ್‌ ಅಂತಲೇ ಪರಿಗಣಿಸಲಾ ಗುತ್ತದೆ. ವಿದ್ಯಾರ್ಥಿಗಳು ಆತಂಕ ಪಡುವುದು ಬೇಡ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.