ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ
Team Udayavani, Mar 12, 2020, 5:56 PM IST
ಚನ್ನಪಟ್ಟಣ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಯ್ಕೆಯಾದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ಮುಖಂಡರು ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ತಾಲೂಕು ಕಾಂಗ್ರೆಸ್ ಮುಖಂಡರುಗಳು, ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಸಾರಥ್ಯ ಸಿಕ್ಕಿರುವುದರಿಂದ ಪಕ್ಷಕ್ಕೆ ಬಲ ಬಂದಂತಾಗಿದೆ. ಪಕ್ಷ ಪರಿಣಾಮಕಾರಿಯಾಗಿ ಸಂಘಟನೆಯಾಗಲಿದ್ದು, ಮುಂದೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತರಲು ಅವರು ಶ್ರಮಿಸಲಿದ್ದಾರೆ. ಡಿಕೆಶಿ ಅವರು ಆಯ್ಕೆಯಾಗಿರುವುದರಿಂದ ಪಕ್ಷದಲ್ಲಿರುವ ಯುವಕರನ್ನು ಸಂಘಟನೆ ಮಾಡಲು ಆನೆಬಲ ಬಂದಂತಾಗಿದೆ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಸದ್ಯ ಆಯ್ಕೆಯಾಗಿದ್ದು, ಮುಂದೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆಂದ ಮುಖಂಡರು, ಡಿಕೆಶಿ ಅವರು ಪಕ್ಷಕ್ಕೆ ದುಡಿದಿರುವುದನ್ನು ಗಂಭೀರವಾಗಿ ಪರಿಗಣಿಸಿ ಹೈಕಮಾಂಡ್ ಈ ಸ್ಥಾನ ನೀಡಿದೆ. ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಪಕ್ಷ ಕಟ್ಟಿ ಬೆಳೆಸಲು ಡಿಕೆಶಿ ಮುಂದಾಗಲಿದ್ದಾರೆ. ಅವರಿಗೆ ಪ್ರತಿ ತಾಲೂಕಿನ ಪ್ರತಿ ಗ್ರಾಮದಿಂದಲೂ ಸಹಕಾರ ನೀಡುತ್ತೇವೆ ಎಂದು ಹೇಳಿದರು.
ತಾಲೂಕು ಅಧ್ಯಕ್ಷ ಶಿವಮಾದು, ಮುಖಂಡರಾದ ಪಿ.ಡಿ.ರಾಜು, ಮಲ್ಲೇಶ್, ಮಂಗಾಡಹಳ್ಳಿ ರಾಜಣ್ಣ, ಮತ್ತೀಕೆರೆ ಹನುಮಂತಯ್ಯ, ಮಂಗಳವಾರಪೇಟೆ ನಾಗೇಂದ್ರ, ಪ್ರಮೋದ್, ನಗರಸಭೆ ಮಾಜಿ ಸದಸ್ಯ ಜಕಿ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಕ್ಕೂರು ಪುಟ್ಟರಾಜು, ಫಯಾಜ್, ಬಿಳಿಯಪ್ಪ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.