ರೈತ ಹೋರಾಟಕ್ಕೆ ಮಹಿಳಾ ಶಕ್ತಿ ವೇದಿಕೆ ಸಾಥ್
Team Udayavani, Feb 16, 2021, 1:47 PM IST
ಕನಕಪುರ: ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಸ್ವತಂತ್ರ ನಂತರದ ಚಳುವಳಿಯಲ್ಲಿ ಐತಿಹಾಸಿಕ ಮಹತ್ವ ಪಡೆದು ಕೊಂಡಿರುವುದು ಆಶಾದಾಯಕ ಎಂದು ಮಹಿಳಾ ಶಕ್ತಿ ವೇದಿಕೆ ನಾಗರತ್ನ ತಿಳಿಸಿದರು.
ನಗರದ ರೋಟರಿ ಭವನದಲ್ಲಿ ಪ್ರೊ. ಎಂ.ಡಿ.ನಂಜುಂಡಸ್ವಾಮಿಯವರ 85ನೇ ವರ್ಷದ ನೆನೆಪಿನ ಪ್ರಯುಕ್ತ ರೈತ ಸಂಘ ಹಾಗೂ ಹಸಿರು ಸೇನೆ, ಮಹಿಳಾ ಶಕ್ತಿ ವೇದಿಕೆಯಿಂದ ಹಮ್ಮಿಕೊಂಡಿದ್ದ ರೈತ ಜಾಗೃತಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈವರೆಗೂ ಸಚಿವರುಗಳಿಗೆ ಮನವಿ ಕೊಡುವುದಷ್ಟೇ ಪ್ರತಿಭಟನೆಯಾಗಿತ್ತು. ಅದರ ಸ್ವರೂಪ ಸ್ವತಂತ್ರ ಪೂರ್ವದ ಹೋರಾಟಗಳಂತೆ ಬದಲಾಗಿದೆ. ಪಂಜಾಬ್, ಹರಿಯಾಣದ 540 ರೈತ ಸಂಘಟನೆಯ ರೈತರು, ಚಳಿ ಲೆಕ್ಕಿಸದೇ, ಹಗಲು-ರಾತ್ರಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಆದರೆ, ರೈತರ ಹೋರಾಟ ಹತ್ತಿಕ್ಕಲು, ರೈತರಿಗೆ ದೇಶದ್ರೋಹಿ ಎಂಬ ಪಟ್ಟ ಕಟ್ಟುತ್ತಿದ್ದಾರೆ ಎಂದರು.
ವಿಚಾರವಾದಿ ಪಾರ್ವತೀಶ್ ಬಿಳಿದಾಳೆ ಮಾತನಾಡಿ, ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಸರ್ಕಾರ ನೀಡಿದ್ದ ಆಶ್ವಾಸನೆ ಈಡೇರಿದಿಯೇ? ರೈತ ಬಿತ್ತನೆ ಮಾಡಿದರೆ ಯಾವುದಾದರೂ ಒಂದು ಬೆಳೆ ತೆಗೆಯಬಹುದು. ಆದರೆ, ಸರ್ಕಾರ ರೈತರಿಗೆ ಬಿತ್ತಿರುವಕನಸುಗಳಲ್ಲಿ ಯಾವುದಾದರೂ ಈಡೇರಿದೇಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು. ನಗರದ ಅಯ್ಯಪ್ಪಸ್ವಾಮಿ ದೇವಾಲಯದಿಂದ ಚನ್ನಬಸಪ್ಪ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ, ಮಾನವ ಸರಪಳಿ ನಿರ್ಮಿಸಿ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಚೀಲೂರು ಮುನಿರಾಜು, ಜಿಲ್ಲಾಧ್ಯಕ್ಷ ಮಲ್ಲಯ್ಯ, ಉಪಾಧ್ಯಕ್ಷ ರಾಮು, ಶಶಿಕುಮಾರ್, ರಾಜ್ಯ ಉಪಾಧ್ಯಕ್ಷ ರಾಮಸ್ವಾಮಿ, ಬಿಎಸ್‌ಪಿ ನೀಲಿ ರಮೆಶ್, ಸ್ವ.ಕ.ರ.ವೇ. ಜಿಲ್ಲಾಧ್ಯಕ್ಷ ಭಾಸ್ಕರ್, ಕನ್ನಡ ಸೇನೆ ಜಯಸಿಂಹ, ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ಕೋಟೆ ಕುಮಾರ್, ಕೆಎಸ್‌ಎಸ್‌ಡಿ ಜಿಲ್ಲಾ ಖಜಾಂಚಿ ರುದ್ರೇಸ್, ನಮನ ಚಂದ್ರು, ಜಯರಾಮೇಗೌಡ, ರೈತ ಸಂಘದ ಸಂಪತ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.