ಶಾಲಾ ಕಾಲೇಜುಗಳಲ್ಲಿ ಜಾನಪದ ಪಠ್ಯ ಅವಶ್ಯ
ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಪ್ರತಿಪಾದನೆ
Team Udayavani, Jul 30, 2019, 4:21 PM IST
ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಶಾಲಾ ಕಾಲೇಜುಗಳಲ್ಲಿ ಜಾನಪದ ಅಧ್ಯಯನವನ್ನು ಕಡ್ಡಾಯಗೊಳಿಸಲು ಕುರಿತು ಚಿಂತನಾ ಸಭೆ ನಡೆಯಿತು.
ರಾಮನಗರ: ಶಿಕ್ಷಣ ಪಠ್ಯಕ್ರಮದಲ್ಲಿ ಜಾನಪದವನ್ನು ಒಂದು ಕಡ್ಡಾಯ ಪಠ್ಯವನ್ನಾಗಿಸುವುದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದರು.
ತಾಲೂಕಿನ ಕೈಲಾಂಚ ಹೋಬಳಿಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಂಡಿಯನ್ ಫೋಕ್ಲೋರ್ ರಿಸರ್ಚ್ ಆರ್ಗನೈಸೇಷನ್, ಇಫ್ರೊ ಜಾನಪದ ಮಹಾವಿದ್ಯಾಲಯ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾಗೂ ಕನ್ನಡ ಅಧ್ಯಯನ ಸಂಸ್ಥೆ, ಬೆಂಗಳೂರು ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ನಡೆದ ಶಾಲಾ ಕಾಲೇಜುಗಳಲ್ಲಿ ಜಾನಪದ ಅಧ್ಯಯನವನ್ನು ಕಡ್ಡಾಯಗೊಳಿಸಲು ಕುರಿತು ನಡೆದ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಲಾ, ಕಾಲೇಜುಗಳ ಪಠ್ಯಕ್ರಮದಲ್ಲಿ ಜಾನಪದ ಒಂದು ಪಠ್ಯ ಕ್ರಮವಾದರೆ ಆಯಾ ಭಾಗದ ಜಾನಪದ ಕಲೆಯನ್ನು ಕಲಿಯುವ ಆ ಮೂಲಕ ಹೊಸ ತಲೆಮಾರಿನಲ್ಲಿ ಜಾನಪದವನ್ನು ಉಳಿಸಿ, ಕಲಾವಿದರನ್ನು ಹುಟ್ಟುಹಾಕಬಹುದು ಎಂದರು.
ಜಾನಪದ ಕಲಾವಿದರಿಗೆ ಗೌರವ ನೀಡಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಎಂ.ಎನ್. ವೆಂಕಟೇಶ್ ಮಾತನಾಡಿ, ಜಾನಪದ ಕಲಾವಿದರಿಗೆ ನಮ್ಮಲ್ಲಿ ಗೌರವ ಕಡಿಮೆ. ಹಾಗಾಗಿ ಜಾನಪದ ಕಲಾವಿದರಿಗೆ ಗೌರವ ಸಿಗುವ ವಾತಾವರಣವನ್ನು ನಿರ್ಮಿಸಬೇಕಿದೆ. ಕಲಾವಿದರು ತಮ್ಮ ಕಲೆಯನ್ನೇ ನಂಬಿ ಬದುಕಬಹುದೆಂಬ ಆತ್ಮವಿಶ್ವಾಸವನ್ನು ಮೂಡಿಸಬೇಕಿದೆ ಎಂದು ತಿಳಿಸಿದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಚಂದ್ರಶೇಖರ್ ಮಾತನಾಡಿ, ಇಂದಿನ ಜಾನಪದ ಅಧ್ಯಯನದ ತುರ್ತು ಬೇರೆಯೇ ಆಗಿದೆ. ಹಾಗಾಗಿ ಇದನ್ನು ಗಮನದಲ್ಲಿಟ್ಟುಕೂಂಡು ಈ ಕಾಲಕ್ಕೆ ಹೊಂದಿಕೆಯಾಗುವಂತಹ ಅಧ್ಯಯನ ವಿಧಾನಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.
ಜಾನಪದ ಸಾಹಿತ್ಯ ಅನುವಾದ ಅವಶ್ಯ: ಇಫ್ರೋ ಪ್ರಧಾನ ಕಾರ್ಯದರ್ಶಿ ಡಾ.ಎಂ.ಬೈರೇಗೌಡ ಮಾತನಾಡಿ, ಕನ್ನಡ ಜಾನಪದವನ್ನು ಇಂಗ್ಲಿಷ್‌ಗೆ ಮತ್ತು ಭಾರತೀಯ ಇತರೆ ಭಾಷೆಗೆ ಅನುವಾದ ಮಾಡುವ ಅಗತ್ಯವಿದೆ. ಹಾಗಾಗಿ ವಿಶ್ವವಿದ್ಯಾಲಯಗಳಲ್ಲಿ ಭಾಷಾಂತರ ವಿಭಾಗವನ್ನು ತೆರೆಯಬೇಕು. ಅನುವಾದವಾದ ಸಾಹಿತ್ಯವನ್ನು ಅಂತರ್ಜಾಲದಲ್ಲಿ ಲಭ್ಯವಾಗುವಂತೆ ಅಂತರ್ಜಾಲ ತಾಣವೊಂದನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು.
ಇಂಡಿಯನ್ ಫೋಕ್ಲೋರ್ ರಿಸರ್ಚ್ ಆರ್ಗನೈಸೇಷನ್ ಖಜಾಂಚಿ ಕೆ.ಎಸ್. ರಂಗೇಗೌಡ ಮಾತನಾಡಿದರು. ಇಫ್ರೋ ಅಧ್ಯಕ್ಷ ಡಾ.ಇ.ಕೆ.ಗೋವಿಂದ ವರ್ಮರಾಜ, ಡಾ.ರತಿ ತಂಬಟ್ಟಿ, ತಮಿಳು ಜಾನಪದ ವಿದ್ವಾಂಸ ಡಾ.ರಾಮಾನುಜನ್, ಜಾನಪದ ವಿದ್ವಾಂಸ ಡಾ.ಕ್ಯಾತನಹಳ್ಳಿ ರಾಮಣ್ಣ, ಸಂಶೋಧನಾ ವಿದ್ಯಾರ್ಥಿಗಳಾದ ಜಿ.ಸಣ್ಣಯ್ಯ, ರಜಿಯಾ ನದಾಫ್, ಡಾ.ಬಸವರಾಜು, ದ್ರಾವಿಡ ವಿಶ್ವವಿದ್ಯಾಲಯದ ಡಾ.ನರಸಿಂಹ ಪ್ರಸಾದ್, ಟಿ. ಲಕ್ಷ್ಮೀನಾರಾಯಣ, ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲದ ಡಾ.ವಿಜಿಶಾ, ಡಾ.ಧನ್ಯಾ, ಮೈಸೂರಿನ ದಿನೇಶ್, ಡಾ.ಯು.ಎಂ. ರವಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.