ಉಚಿತವಾಗಿ ಉಜ್ವಲ ಗ್ಯಾಸ್ ಸಿಲಿಂಡರ್ ವಿತರಣೆ
Team Udayavani, Mar 31, 2020, 4:18 PM IST
ಮಾಗಡಿ: ಉಜ್ವಲ ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಿದ್ದು ಅದನ್ನು ಸಮರ್ಪಕವಾಗಿ ಫಲಾನುಭವಿ ಗಳೇ ಬಳಸಿಕೊಳ್ಳಬೇಕು. ದುರ್ಬಳಕೆಗೆ ಅವಕಾಶವಿಲ್ಲ ಎಂದು ಭಾರತ್ ಗ್ಯಾಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ರಾಧಾ ಬಾಲಕೃಷ್ಣ ತಿಳಿಸಿದರು.
ಪಟ್ಟಣದಲ್ಲಿ ಭಾರತ್ ಗ್ಯಾಸ್ ವಿತರಣೆ ಸಿಬ್ಬಂದಿಗೆ ಮಾಸ್ಕ್ ಹಾಗೂ ಸ್ಯಾನಿಟಸರ್ ವಿತರಿಸಿ ಮಾತನಾಡಿ, ಕೇಂದ್ರ ಸರ್ಕಾರ ಉಜ್ವಲ ಗ್ಯಾಸ್ ಫಲಾನುಭವಿಗಳಿಗೆ ಉಚಿತವಾಗಿ ಸಿಲಿಂಡರ್ ವಿತರಿಸುವಂತೆ ಆದೇಶ ನೀಡಿದೆ. ಅದರಂತೆ ಫಲಾನುಭವಿಗಳಿಗೆ ಏಜೆನ್ಸಿ ಯಿಂದ ಸಿಲಿಂಡರ್ ನೀಡಲಾಗುವುದು. ಫಲಾನುಭವಿಗಳು ಪಡೆದ ಸಿಲಿಂಡರ್ ಸ್ಟೋವ್‌ಗೆ ಜೋಡಿಸುವ ಮುನ್ನಾ ಸೋಪಿನಿಂದ ತೊಳೆದುಕೊಳ್ಳಬೇಕು. ಗ್ಯಾಸ್ ಖಾಲಿಯಾದ ನಂತರ ಮತ್ತೆ ಸೋಪಿನಿಂದ ತೊಳೆದು ವಾಪಸ್‌ಆ ಮಾಡಬೇಕು. ಕೋವಿಡ್ 19 ಹರಡದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚನೆ ನೀಡಿದರು.
ನಮ್ಮ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ, ಸಿಬ್ಬಂದಿಗೆ ಗ್ಯಾಸ್ ಸಿಲಿಂಡರ್ ವಿತರಕರಿಗೆ ಮುಂಜಾಗ್ರತೆ ಕ್ರಮ ಅನುಸರಿಸುವಂತೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು. ಜ್ವರ, ಕೆಮ್ಮು, ದಮ್ಮು, ನೆಗಡಿ, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ನಿರ್ಲಕ್ಷಿಸದೇ ಹತ್ತಿರದ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅನವಶ್ಯಕ ಹೊರಗಡೆ ಬರಬೇಡಿ, ಮನೆಯಲ್ಲೇ ಇದ್ದ, ಕೋವಿಡ್ 19 ನಿರ್ಮೂಲನೆಗೆ ಸರ್ಕಾರ ದೊಂದಿಗೆ ಕೈಜೋಡಿಸುವಂತೆ ತಿಳಿಸಿದರು. ಭಾರತ್ ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕ ನಿರ್ದೇಶಕಿ ರಾಧಾ ಬಾಲಕೃಷ್ಣ ಅವರು ಗ್ಯಾಸ್ ಏಜೆನ್ಸಿ ಸಿಬ್ಬಂದಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.