ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ: ರಸ್ತೆ, ಸೇತುವೆ ಕಾಮಗಾರಿಗಳಿಗೆ ನಿಧಿ ಬಿಡುಗಡೆ
ಕುಮಾರಸ್ವಾಮಿ ಸರಕಾರದಲ್ಲಿ ಅಂಗೀಕಾರಗೊಂಡಿದ್ದ ಯೋಜನೆಗಳಿಗೆ ಕಾಮಗಾರಿ ಮೊತ್ತ ಬಿಡುಗಡೆಗೊಳಿಸಿದ ಬಿ.ಎಸ್.ವೈ.
Team Udayavani, Aug 24, 2020, 8:33 PM IST
ಬೆಂಗಳೂರು: ಎಚ್ ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ರಸ್ತೆ ಹಾಗೂ ಸೇತುವೆ ಕಾಮಗಾರಿಗಳಿಗೆ 104 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದರು.
ಈ ಪೈಕಿ ಮೊದಲ ಕಂತಿನ 54 ಕೋಟಿ ರೂಪಾಯಿಗಳ (53 ಕೋಟಿ 45 ಲಕ್ಷ ರೂಪಾಯಿಗಳು) ಹಣವನ್ನು ರಾಜ್ಯ ಸರ್ಕಾರ ಇದೀಗ ಬಿಡುಗಡೆ ಮಾಡಿದೆ. ಬಾಕಿ ಇರುವ 50 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಪ್ರಸಕ್ತ ಹಣಕಾಸು ವರ್ಷದ ಮಾರ್ಚ್ ಅಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಹಣಕಾಸು ಸಚಿವರು ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರಸಕ್ತ ಮಂಜೂರಾಗಿರುವ 54 ಕೋಟಿ ರೂಪಾಯಿಗಳ ಕಾಮಗಾರಿಯ ಜೊತೆಗೆ ಉಳಿಕೆ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದೆ ಇದರಿಂದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 104 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಬಹುದು ಎಂದು ಕುಮಾರ ಸ್ವಾಮಿ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಿರಂತರವಾಗಿ ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಂಪರ್ಕದೊಂದಿಗೆ ತಾಲೂಕಿನ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿದ ಪರಿಣಾಮ ಈ ಆರ್ಥಿಕ ನೆರವು ಲಭ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.