ಮಾದರಿ ಶಾಲೆಯಾಗಿಸಲು ಹಣ ವಿನಿಯೋಗ
Team Udayavani, May 28, 2020, 7:25 AM IST
ಮಾಗಡಿ: ತಾಲೂಕಿನಲ್ಲಿ ಯಾವುದಾರೂ ಒಂದು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯನ್ನು ಮಾದರಿಯನ್ನಾಗಿಸಲು 15ನೇ ಹಣಕಾಸಿನಲ್ಲಿ ಹಣ ವಿನಿಯೋಗಿಲಾಗುವುದು ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು. ತಾಪಂ ಸಭಾಂಗಣದಲ್ಲಿ 15ನೇ ಹಣಕಾಸಿನ ಯೋಜನೆಯಡಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ವಿಶೇಷ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಂಚಾಯ್ತಿ ವ್ಯಾಪ್ತಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಹೈಟೆಕ್ ಶೌಚಾಲಯ, ಮಳೆ ನೀರು ಕೊಯ್ಲು, ಸಿನ್‌ಟೆಕ್ಸ್ ಟ್ಯಾಂಕ್ ಅಳವಡಿಕೆ ಸೇರಿದಂತೆ ಹಲವು ಸೌಲಭ್ಯ ಒದಗಿಸಲಾಗುವುದು. ತಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಒಳಚರಂಡಿಯಿಲ್ಲ. ಮನೆಗಳಲ್ಲಿರುವ ಪಿಟ್‌ಗುಂಡಿಗಳಲ್ಲಿ ತ್ಯಾಜ್ಯ ಹೊರತೆಗೆಯಲು ಒಂದು ಸಕ್ಕಿಂಗ್ ಮಿಷನ್ ಅಗತ್ಯವಿದ್ದು, ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಂಚಾಯ್ತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪಶು ಚಿಕಿತ್ಸಾ ಆಸ್ಪತ್ರೆಗಳಲ್ಲಿ ಮಳೆ ನೀರು ಕೊಯ್ಲು ಮಾಡಲಾಗುವುದು, ಕುಡಿಯುವ ನೀರಿನ ಘಟಕಗಳು, ಬೋರ್‌ವೆಲ್‌ಗಳ ಪುನಶ್ಚೇತನ, ನೀರು ಸಂಸ್ಕರಣ ಹೊಂಡದ ನಿರ್ವಹಣೆ, ಸೋಲರ್ ಘಟಕ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಗ್ರಾಮಾಭಿವೃದ್ಧಿ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯ್ಕ, ಉಪಾಧ್ಯಕ್ಷೆ ಅಂಬಿಕಾ, ಸದಸ್ಯರಾದ ಎಂ.ಎಚ್. ಸುರೇಶ್, ಹನುಮಂತರಾಯಪ್ಪ, ಕೆ.ಎಚ್. ಶಿವರಾಜು, ದಿವ್ಯಾರಾಣಿ, ಎಲ್. ಸುಧಾ, ಗಂಗಮ್ಮ, ಗೀತಾ ಗಂಗರಂಗಯ್ಯ, ಶಿವಮ್ಮ, ಸುಗುಣ ಕಾಮರಾಜ್ ತಾಲೂಕು ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಪ್ರದೀಪ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.