ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿ

ಜಿಲ್ಲಾಧಿಕಾರಿ ಕಚೇರಿ ಬಳಿ ರೈತಸಂಘ-ಹಸಿರು ಸೇನೆ ಪ್ರತಿಭಟನೆ

Team Udayavani, Aug 27, 2019, 5:19 PM IST

rn-tdy-1

ನೆರೆ ಸಂತ್ರಸ್ತರಿಗೆ ಕೂಡಲೇ ಅಗತ್ಯ ಪರಿಹಾರ, ಸೌಲಭ್ಯ ಕಲ್ಪಿಸಲು ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು.

ರಾಮನಗರ: ರಾಜ್ಯದ 17 ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡುವ ಜತೆಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಡರು, ಪ್ರವಾಹ ಗಂಭೀರ ಪರಿಸ್ಥಿತಿಯನ್ನು ಉಂಡು ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದೆ, ಆಸ್ತಿ ನಷ್ಟವಾಗಿದೆ ಎಂದು ಹೇಳಿದರು.

ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಕೇಂದ್ರ ಸರ್ಕಾರ ತಕ್ಷಣ ರಾಜ್ಯ ಸರ್ಕಾರದ ಮೂಲಕ ನೆರವು ನೀಡಬೇಕಾಗಿದೆ. ಮುಳುಗಡೆಯಾ ಗಿರುವ ಹಳ್ಳಿಗಳನ್ನು ತೆರವು ಮಾಡಿ ಪುನರ್‌ ನಿರ್ಮಾಣ ಮಾಡಬೇಕು, ಜಾನುವಾರು ಗಳನ್ನು ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದರು.

ಸಾಲ ವಸೂಲಾತಿ ನಿಲ್ಲಿಸಿ: ಮನೆ ಕಳೆದುಕೊಂಡವರಿಗೆ ಸರ್ಕಾರ ತಲಾ 10 ಲಕ್ಷ ರೂ ನೆರವು ಕೊಟ್ಟು ಮನೆ ನಿರ್ಮಿಸಿಕೊಳ್ಳಲು ಅವಕಾಶ ಕೊಡಬೇಕು. ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ., ಪರಿಹಾರ ನೀಡಬೇಕು. ರೈತರು ಮತ್ತು ಮಹಿಳಾ ಸಂಘಟನೆಗಳ ಯಾವುದೇ ಸಾಲಗಳ ವಸೂಲಾತಿ ನಿಲ್ಲಿಸಬೇಕು ಎಂದರು.

ಏಕಾಏಕಿ ಹರಿದ ನೀರು, ಯಾರ ಹೊಣೆ?: ಜಲಾಶಯಗಳ ನಿರ್ವಹಣೆ ಹೊಣೆ ಹೊತ್ತವರ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳು ಜಲಾವೃತ್ತವಾಗಿದ್ದವು. ಅಲ್ಲಿನ ಕಬ್ಬಿನ ತೋಟ ಸೇರಿದಂತೆ ನೀರು ಆವೃತ್ತವಾಗಿದ್ದ ತೋಟಗಳೆಲ್ಲಾ ಕೊಳೆತು ನಾರುತ್ತಿವೆ. 10 ನದಿ ನೀರು ಒಮ್ಮೆಲೆ ದಿನಗ ಟ್ಟಲೆ ಹರಿದರೆ ಏನಾದರೂ ಉಳಿದೀತೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಇದೀಗ ರಾಜ್ಯದಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ, 17 ಜಿಲ್ಲೆಗಳಿಗೂ ಒಬ್ಬಬ್ಬ ಸಚಿವರನ್ನು ಕಳುಹಿಸಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಬೀದಿಗಿಳಿದು ಹೋರಾಟ: ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಲಕ್ಷ್ಮಣಸ್ವಾಮಿ ಮಾತನಾಡಿ, ಇಂದು ಸಾಂಕೇತಿಕ ಹೋರಾಟ ನಡೆದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಕ್ಷಣ ಸ್ಪಂದಿಸದಿದ್ದರೆ, ಇಡೀ ರಾಜ್ಯದಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ನೀಡಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌ ಸ್ವೀಕರಿಸಿದರು. ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬೈರೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಾಸೇಗೌಡ, ಜಿಲ್ಲಾ ಹಸಿರು ಸೇನೆ ಸಂಚಾಲಕ ಶ್ರೀನಿವಾಸ್‌ ನಲ್ಲಹಳ್ಳಿ, ರೈತ ಸಂಘದ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಪಿ.ರಮೇಶ್‌, ಕನಕಪುರ ತಾಲೂಕು ಅಧ್ಯಕ್ಷ ಅನಂತ್‌ರಾಮ್‌ ಪ್ರಸಾದ್‌, ಜಿಲ್ಲೆಯ ಮಹಿಳಾ ಪದಾಧಿಕಾರಿಗಳಾದ ನಾಗಮ್ಮ, ಸುಕನ್ಯಾ, ಮಾಗಡಿ ತಾಲೂಕು ಅಧ್ಯಕ್ಷ ಗೋವಿಂದರಾಜು, ಪ್ರಮುಖರಾದ ರೇಣುಕಯ್ಯ, ನಂದಿನಿ, ಗಿರೀಶ್‌ ಮತ್ತಿತರರಿದ್ದರು.

ಅನ್ನ ಕೊಡುವ ರೈತರೇ ಅನ್ನಕ್ಕಾಗಿ ಬೇಡುವ ಸ್ಥಿತಿ:

ಕೇಂದ್ರ ಸರ್ಕಾರ ತಕ್ಷಣ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ನೆರೆ ಹಾವಳಿಯಿಂದ ಸುಮಾರು 14.5 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಅನ್ನ ಬೆಳೆಯುವ ಕೈಗಳು ಅನ್ನಕ್ಕಾಗಿ ಬೇಡುವ ಸ್ಥಿತಿ ಬಂದಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ರಾಜ್ಯ-ಕೇಂದ್ರ ಸರ್ಕಾರಗಳು ನಿರ್ಲಕ್ಷ್ಯ ತಾಳಿದೆ. ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಳೆದಿದೆ ಎಂದು ರೈತ ಸಂಘದ ಮುಖಂಡರು ದೂರಿದರು.

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.