ಸರ್ಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆ


Team Udayavani, Jun 18, 2019, 12:39 PM IST

rn-tdy-1..

ಕುದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಆಸ್ಪತ್ರೆ.

ಕುದೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆಯಿಂದ ಕೂಡಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಅಸಡ್ಡೆಯೇ ಇದಕ್ಕೆ ಕಾರಣ ಎಂದು ಕುದೂರು ಗ್ರಾಮಸ್ಥರಿಂದ ಆರೋಪ ಕೇಳಿ ಬರುತ್ತಿದೆ.

ಕುದೂರು ಗ್ರಾಮದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗಿದೆ. ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಕೊಠಡಿ, ಶಸ್ತ್ರ ಚಿಕಿತ್ಸಾ ಕೊಠಡಿ, ಶವಗಾರ ಎಲ್ಲವೂ ಸುಸಜ್ಜಿತವಾಗಿರಬೇಕು ಎಂದು ಸರ್ಕಾರ 2 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಆದರೆ, ಕಟ್ಟಡಕ್ಕೆ ಬಳಸುತ್ತಿರುವ ಕಂಬಿಗಳು ಕಳಪೆಯಾಗಿದೆ. ಅಲ್ಲದೆ, ನೂತನ ಆಸ್ಪತ್ರೆಯ ಕಟ್ಟಡದ ಕಾಮಗಾರಿಯೂ ಕಳಪೆಯಾಗಿದೆ.

ದೂರು ಸಲ್ಲಿಸಿದ್ದರೂ ಪ್ರಯೋಜನವಿಲ್ಲ: ಈ ಹಿಂದೆ ತಳಪಾಯ ಕಟ್ಟುವಾಗ ಕಳಪೆ ವಸ್ತುಗಳನ್ನು ಬಳಸಲಾಗುತ್ತಿದೆ ಎಂದು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಆದರೆ, ಆಸ್ಪತ್ರೆ ಕಾಮಗಾರಿ ಮಾಡುವವರು ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಗಿರುವುದರಿಂದ ಗ್ರಾಮಸ್ಥರ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳದೇ ಕಾಮಗಾರಿ ಮುಂದುವರಿ ಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರಸ್ತುತ ಆಸ್ಪತ್ರೆಯ ಕಟ್ಟಡ ಮೋಲ್ಡ್, ಪ್ಲಾಸ್ಟಿಂಗ್‌ ಆಗಿ ಟೈಲ್ಸ್ ಮತ್ತು ಬಣ್ಣ ಬಳಿಯುವ ಕಾಮಗಾರಿವರೆಗೆ ಬಂದು ನಿಂತಿದೆ.

ಮಳೆ ಬಂದರೆ ನೂತನ ಕಟ್ಟಡದಲ್ಲಿ ಸೋರಿಕೆ: ಸರ್ಕಾರಿ ಆಸ್ಪತ್ರೆಯ ಕಟ್ಟಡ ಶೇ.80ರಷ್ಟು ಕೆಲಸ ಮುಗಿದು ಬಣ್ಣ ಬಳಿಯುವ ಹಂತಕ್ಕೆ ತಲುಪಿದೆ. ಆಸ್ಪತ್ರೆಯ ಕೊಠಡಿಗಳು ಕಳಪೆಯಿಂದ ಈಗಾಗಲೇ ಸೋರಲಾರಂಭಿಸಿವೆ ಎಂದು ಗ್ರಾಮದ ಯುವಕರು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಜತೆ ಪ್ರತಿನಿಧಿಗಳು ಶಾಮೀಲಾಗಿದ್ದಾರೆಯೇ?: ಕಳಪೆ ಕಾಮಗಾರಿ ಎಂದು ವರ್ಷದ ಮುಂಚೆಯ ಸುದ್ದಿ ಪ್ರಕಟವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಶಾಸಕರಿಗೆ ಹಾಗೂ ಸಂಸದರಿಗೆ ಮನವಿ ಸಲ್ಲಿಸಿದ್ದರು. ಆದರೆ, ಇದುವರೆವಿಗೂ ಶಾಸಕ ಮಂಜುನಾಥ್‌ ಆಗಲಿ, ಸಂಸದ ಡಿ.ಕೆ.ಸುರೇಶ್‌ ಆಗಲಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲನೆ ಮಾಡಿಲ್ಲ. ಕಳಪೆ ಕಮಗಾರಿ ಮಾಡುವ ಗುತ್ತಿಗೆದಾರರನ್ನು ಗದರಿಕೊಳ್ಳುವ ಕೆಲಸವನ್ನು ಸಹ ಮಾಡಿಲ್ಲ. ಇನ್ನೂ ಹೆಸರಿಗಷ್ಟೇ ಇರುವಂತಿರುವ ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಹಾಗೂ ಜಿಪಂ ಸದಸ್ಯರು ಕಳಪೆ ಕಾಮಗಾರಿಯನ್ನು ಖಂಡಿಸಿಲ್ಲ. ಇದೆಲ್ಲವನ್ನು ನೋಡಿದರೆ ಅಧಿಕಾರಿಗಳ ಜೊತೆಗೆ ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆಯೇ ಎಂಬ ಅನುಮಾನ ಮೂಡಿಸಿದೆ.

ಆಗೊಮ್ಮೆ ಇಗೊಮ್ಮೆ ಬರುವ ಎಂಜಿನಿಯರ್‌ ಕಾಟಾಚಾರಕ್ಕೆ ಬಂದು ಹೋದಂತೆ ಕಾಣುತ್ತಿದೆ. ಸಾವಿರಾರು ವರ್ಷಗಳ ಕಾಲ ಗ್ರಾಮದ ಜನರಿಗೆ ಅನುಕೂಲ ಕಲ್ಪಿಸುವ ಆಸ್ಪತ್ರೆ ಗುಣಮಟ್ಟವಾಗಿರುವಂತೆ ನೋಡಿಕೊಳ್ಳುವುದು ಪ್ರತಿ ಗ್ರಾಮಸ್ಥರ ಕರ್ತವ್ಯವಾಗಿದೆ. ಈ ಬಗ್ಗೆ ಜನರು ಧಂಗೆ ಏಳುವ ಮೊದಲು ಸರಿಯಾದ ಕಾಮಗಾರಿ ನೆಡೆಸಿ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳಪೆ ಕಾಮಗಾರಿ ವಿಡಿಯೋ ವೈರಲ್: ಕುದೂರು ಆಸ್ಪತ್ರೆಯ ಕಳಪೆ ಕಾಮಗಾರಿ ಕೇವಲ ಜನರ ಬಾಯಲ್ಲಿ ಹರಿದಾಡುತ್ತಿಲ್ಲ. ಬದಲಾಗಿ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದೆ. ವಾಟ್ಸಾಪ್‌ ಹಾಗೂ ಫೇಸ್‌ಬುಕ್‌ನಲ್ಲಿ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಅನೇಕರು ಆಸ್ಪತ್ರೆ ಕಳಪೆ ಕಾಮಗಾರಿಯನ್ನು ಕುರಿತು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಅದಷ್ಟು ಬೇಗ ಗುಣಮಟ್ಟವನ್ನು ಉತ್ತಮ ಪಡಿಸಿ, ಗುಣಮಟ್ಟದ ಕಾಮಗಾರಿಯನ್ನು ನಡೆಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಮತ್ತು ಎಂಜಿನಿಯರುಗಳ ಕಾರ್ಯವೈಖರಿ ಬಗ್ಗೆ ಪ್ರಶ್ನಿಸಿದ್ದಾರೆ.

● ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.