ಸರ್ಕಾರಿ ಶಾಲೆ ದಾಖಲಾತಿ ಆಂದೋಲನ


Team Udayavani, May 27, 2019, 10:06 AM IST

rn-tdy-2..

ಮಾಗಡಿಯಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಚಾರಾಂದೋಲನಕ್ಕೆ ಬಿಇಒ ಸಿದ್ದೇಶ್ವರ್‌ ಚಾಲನೆ ನೀಡಿದರು.

ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರತಿಯೊಬ್ಬರೂ ಮುಂ ದಾಗಬೇಕೆಂದು ಬಿಇಒ ಸಿದ್ದೇಶ್ವರ್‌ ತಿಳಿಸಿದರು.

ತಾಲೂಕಿನ ಹೊಸೂರು ಗ್ರಾಮದಲ್ಲಿ 2019-20 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾನ ಶಿಕ್ಷಣ: ಶಿಕ್ಷಣ ಇಂದು ಸಂವಿಧಾನಬದ್ಧ ಮೂಲ ಭೂತ ಹಕ್ಕು. ಈ ಹಕ್ಕನ್ನು ಯಾವುದೇ ತಾರ ತಮ್ಯ ಅಸಮಾನತೆ ಮತ್ತು ಪ್ರತ್ಯೇಕತೆಯಿಲ್ಲದೆ ಎಲ್ಲಾ ಮಕ್ಕಳಿಗೆ ಸಮಾನತೆ ನೆಲೆಯಲ್ಲಿ ಸಮಾನ ಅವಕಾಶಗಳ ಮೂಲಕ ಸಾಕಾರ ಗೊಳಿಸುವ ಶಾಲಾ ಶಿಕ್ಷಣ ವ್ಯವಸ್ಥೆ ಕಟ್ಟಿ ಕೊಡಬೇಕೆಂದರು.

ಒಗ್ಗೂಡಿ ಬೆಂಬಲ ನೀಡಿ:ಸರ್ಕಾರದ ಜೊತೆಗೆ ಬೆಂಬಲವಾಗಿ ಕೈ ಜೋಡಿಸುವುದು ಸಮುದಾಯದ ಹೊಣೆ ಯಾಗಿದೆ. ಸರ್ಕಾರ ಮತ್ತು ಸಮುದಾಯ ಒಗ್ಗೂಡಿ ಕೆಲಸ ನಿರ್ವಹಿಸಿದ್ದಲ್ಲಿ ಪ್ರತಿಯೊಂದು ಸರ್ಕಾರಿ ಶಾಲೆಯನ್ನು ಸಮಾನ ಗುಣಾತ್ಮಕ ಕೇಂದ್ರವನ್ನಾಗಿ ಪರಿವರ್ತಿಸಬಹುದೆಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಅಧ್ಯಕ್ಷ ಅಶೋಕ್‌, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ತರಬೇತಿ ಪಡೆದ ವೃತ್ತಿ ಪರಿಣಿತ ಶಿಕ್ಷಕರಿಂದ ಶಿಶು ಕೇಂದ್ರಿತ ಹಾಗೂ ಶಿಶು ಸ್ನೇಹಿ ವಿಧಾನದಲ್ಲಿ ಪಾಠ ಬೋಧನೆ. ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪಠ್ಯ ಪುಸ್ತಕ, 2 ಜೊತೆ ಸಮವಸ್ತ್ರ, ಶೂ, ಸಾಕ್ಸ್‌ ವಿತರಣೆ, ಹೆಣ್ಣು ಮಕ್ಕಳಿಗೆ ಹಾಜರಾತಿ ಪ್ರೋತ್ಸಾಹ ಧನ, ಮಧ್ಯಾಹ್ನದ ಬಿಸಿಯೂಟ, ಕೆನೆಭರಿತ ಹಾಲು ಮತ್ತು ವಿಟಮಿನ್‌ ಹಾಗೂ ಜಂತು ನಿವಾರಣೆ ಮಾತ್ರೆ ಮತ್ತಿತರ ಸೌಕರ್ಯ ಸಿಗಲಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಮೂಲಕ ಹದಿಹರೆಯದ ಹೆಣ್ಣು ಮಕ್ಕಳಿಗೆ ಆಪ್ತ ಸಮಾಲೋಚನೆ ಹಾಗೂ ವೈದ್ಯಕೀಯ ನೆರವು, 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್, 1 ರಿಂದ 8 ನೇ ತರಗತಿಗೆ ವಸ್ತುನಿಷ್ಠ ಕಲಿಕಾ ಮೌಲ್ಯ ಮಾಪನ, 8 ರಿಂದ 10 ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್‌ ಸಮವಸ್ತ್ರ ವಿತರಿಸಲಾಗುತ್ತದೆ. ಜೊತೆಗೆ ಇನ್ನು ಹತ್ತು ಹಲವಾರು ಸೌಲಭ್ಯಗಳು ಸರ್ಕಾರಿ ಶಾಲೆಯಲ್ಲಿ ದೊರೆಯುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಆರ್‌ಪಿ ಚಂದ್ರಣ್ಣ, ಸಹಾಯಕ ನಿರ್ದೇಶಕ ಗಂಗಾಧರ್‌, ವೆಂಕಟಯ್ಯ, ರೇವಣ್ಣ, ದಾಸಪ್ಪ, ನಾಗೇಶ್‌, ಗೋಪಿ, ಅಂಜಿನಪ್ಪ, ನಾರಾಯಣಸ್ವಾಮಿ, ಸವಿತಾ ಮತ್ತಿರರಿದ್ದರು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.