Kanakapura: ಸರ್ಕಾರಿ ಬಸ್-ಕಾರಿನ ನಡುವೆ ಭೀಕರ ಅಪಘಾತ; 6 ಮಂದಿ ಸ್ಥಳದಲ್ಲೇ ಸಾವು
Team Udayavani, Aug 28, 2023, 6:08 PM IST
ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ನಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಕ್ವಾಲಿಸ್ ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಇದನ್ನೂ ಓದಿ:Athletics Championships ಸ್ವರ್ಣ ಗೆದ್ದ ನೀರಜ್’ಗೆ ಸಿಕ್ಕ ಬಹುಮಾನದ ಹಣವೆಷ್ಟು ಗೊತ್ತಾ?
ಸಾತನೂರು ಬಳಿಯ ಕೆಮ್ಮಾಳೆ ಗೇಟ್ ಬಳಿ ಈ ಅಪಘಡ ಸಂಭವಿಸಿದ್ದು, ಕ್ವಾಲಿಸ್ ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟದಿಂದ ವಾಪಾಸಾಗುತ್ತಿದ್ದರು ಎಂದು ವರದಿಯಾಗಿದೆ.
ಮೃತ ಆರು ಮಂದಿ ಬೆಂಗಳೂರು ಮೂಲದ ನಿವಾಸಿಗಳು. ಕೆಲವರು ವಿಧಾನಸೌಧದಲ್ಲಿ ನೌಕರರಾಗಿ ಕೆಲಸ ಮಾಡುತ್ತಿರುವುದಾಗಿ ಪೊಲೀಸ್ ಮೂಲಗಳ ಮಾಹಿತಿಯನ್ನಾಧರಿಸಿ ವರದಿಯಾಗಿದೆ.
ನಾಗೇಶ್, ಜ್ಯೊರ್ತಿಲಿಂಗ, ಪುಟ್ಟರಾಜು, ಕುಮಾರ, ಗೋವಿಂದ ಮೃತ ವ್ಯಕ್ತಿಗಳು ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ, ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೂ ತೀವ್ರ ಗಾಯವಾಗಿದೆ. ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿದ್ದ 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ಭೀಕರ ಅಪಘಾತದ ಪರಿಣಾಮ ಬಸ್ ನ ಮುಂಭಾಗಕ್ಕೆ ಕಚ್ಚಿಕೊಂಡಂತಿದ್ದ ಕ್ವಾಲಿಸ್ ಕಾರನ್ನು ಅಗ್ನಿಶಾಮಕ ಸಿಬ್ಬಂದಿಯು ಜೆಸಿಬಿ ಮತ್ತು ಕ್ರೇನ್ ಸಹಾಯದಿಂದ ಬೇರ್ಪಡಿಸಿದ್ದಾರೆ.
ಸ್ಥಳಕ್ಕೆ ಸಾತನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.