ಕನಕಪುರದಲ್ಲಿ ಅದ್ಧೂರಿ ಸಂಭ್ರಮ
Team Udayavani, Dec 10, 2019, 4:49 PM IST
ಕನಕಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಹನುಮ ಜಯಂತಿ ಅಂಗವಾಗಿ ನಗರದ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಅನ್ನಸಂತರ್ಪಣೆ ಏರ್ಪಡಿಸಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಿಸಲಾಯಿತು.
ನಗರದ ಬಸ್ ನಿಲ್ದಾಣದ ಬಳಿ ಇರುವ ಮತ್ತು ಅರ್ಕಾವತಿ ವೃತ್ತದ ಬಳಿಯ ಹನುಮ ದೇವಾಲಯಗಳಲ್ಲಿ ಹನುಮ ಜಯಂತಿ ಅಂಗವಾಗಿ ಬೆಳಗ್ಗಿನಿಂದಲೇ ಸುಪ್ರಭಾತ, ಮಹಾಗಣಪತಿ ಪೂಜೆ, ಪುಣ್ಯಾಹ, ಭಗವಾನ್ ವಾಸುದೇವ ಪುಣ್ಯಾಹ, ಹೋಮ, ಪಂಚಾಮೃತ ಅಭಿಷೇಕ, ನಂತರ ಮಹಾಮಂಗಳಾರತಿ ನಡೆಯಿತು ಹನುಮ ಜಯಂತಿ ಅಂಗವಾಗಿ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ಹನುಮ ದೇವಾಲಯಕ್ಕೆ ಸಾವಿರಾರು ಮಂದಿ ಭಕ್ತಾದಿಗಳು ಭೇಟಿ ನೀಡಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅರ್ಕಾವತಿ ವೃತ್ತದ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಅದ್ಧೂರಿ ರಾಜ್ಯೋತ್ಸವ ಆಚರಿಸಲಾಯಿತು. ಹನುಮ ಜಯಂತಿ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪ್ರತಿ ವರ್ಷ ಹನುಮ ಜಯಂತಿ ಆಚರಣೆಯಲ್ಲಿ ಕಾರು ಚಾಲಕರು ಮತ್ತು ಮಾಲೀಕರು, ಗೂಡ್ಸ್ ಗಾಡಿ ಚಾಲಕರು ಮತ್ತು ಮಾಲೀಕರು, ಆಟೋ ಚಾಲಕರು ಮತ್ತು ಮಾಲೀಕರು, ಖಾಸಗಿ ಬಸ್ ಮಾಲಿಕರು, ಎಪಿಎಂಸಿ ವರ್ತಕರು, ಸೇರಿದಂತೆ ನಗರದ ಸಾರ್ವಜನಿಕರು ಹನುಮ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.