ಜಿಲ್ಲೆಯಲ್ಲಿ ಬಹುತೇಕ ಕೆರೆಗಳು ಭರ್ತಿ


Team Udayavani, Aug 8, 2022, 3:09 PM IST

ಜಿಲ್ಲೆಯಲ್ಲಿ ಬಹುತೇಕ ಕೆರೆಗಳು ಭರ್ತಿ

ರಾಮನಗರ: ಜಿಲ್ಲಾದ್ಯಂತ ಕಳೆದ ವಾರದಿಂದ ಸುರಿಯು ತ್ತಿರುವ ಧಾರಾಕಾರ ಮಳೆಗೆ ಇಳೆ ತಂಪಾಗಿದ್ದು, ಹಳ್ಳ- ಕೊಳ್ಳಗಳಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆ ಒಂದೊಂದೆ ಕೆರೆಗಳು ತುಂಬಿ ಕೋಡಿ ಬೀಳಲಾರಂಭಿಸಿವೆ. ಕ

ಳೆದ ಎರಡು ತಿಗಳಿಂದಲೂ ಆಗಿಂದಾಗ್ಗೆ ಮಳೆ ಆಗುತ್ತಿದ್ದರೂ, ಹಳ್ಳಕೊಳ್ಳಗಳಲ್ಲಿ ರಭಸದಿಂದ ನೀರು ಹರಿದಿರಲಿಲ್ಲ. ಕಳೆದ ಐದಾರು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ದಿಂದ ಹಳ್ಳಗಳು ಮೈದುಂಬಿ ಹರಿಯು ತ್ತಿವೆ. ಇದರಿಂದ ಕೆರೆ-ಕುಂಟೆಗಳು ತುಂಬಿ ಹರಿಯ ತೊಡಗಿವೆ.

ಕೈಲಾಂಚ ಹೋಬಳಿ ಬೆಟ್ಟ ಗುಡ್ಡಗಳಿಂದ ಕೂಡಿರುವ ಪ್ರದೇಶವಾಗಿದ್ದು, ಅರ್ಕಾವತಿ ನದಿ ತೀರದ ಪ್ರದೇಶ ಬಿಟ್ಟರೆ ಬಹುಪಾಲು ಬೆಟ್ಟಗಳ ಸಾಲೇ ಕಾಣುತ್ತದೆ. ಈ ಪ್ರದೇಶದಲ್ಲಿ ಹಲವು ಸಣ್ಣ ಮತ್ತು ದೊಡ್ಡ ದೊಡ್ಡ ಕೆರೆಗಳು ನಿರ್ಮಾಣವಾಗಿದ್ದು, ಅವುಗಳು ಅಂತರ್ಜಲ ರಕ್ಷಣೆಗೆ ಪ್ರಮುಖ ಪಾತ್ರ ವಹಿಸಿವೆ. ಅಲ್ಲದೆ, ಹಲವು ಗ್ರಾಮಗಳ ಕುಡಿಯುವ ನೀರಿನ ಬವಣೆ ರೈತರ ಬೋರ್‌ವೆಲ್‌ಗ‌ಳ ಜೀವಾಳ ಕೂಡ ಈ ಕೆರೆಗಳಾಗಿವೆ.

ಭರ್ತಿಯಾದ ಕೆರೆಗಳು: ಮಳೆ ಇಲ್ಲದ ಕಾರಣ ಅನೇಕ ವರ್ಷಗಳು ಕೆರೆಗಳು ತುಂಬಿರಲಿಲ್ಲ. ಕಳೆದ ಎರಡು ವರ್ಷಗಳಿಂದ ಒಂದಷ್ಟು ಮಳೆಯಾಗಿದ್ದ ಕಾರಣ ಕಳೆದ ವರ್ಷ ಮೂರ್‍ನಾಲ್ಕು ಕೆರೆಗಳು ಕೋಡಿ ಬಿದ್ದಿದ್ದವು. ಈ ವರ್ಷ ಧಾರಾಕಾರವಾಗಿ ಮಳೆಯಾಗುತ್ತಿರುವ ಕಾರಣ ಮುಂಗಾರು ಪ್ರಾರಂಭದಲ್ಲೇ ಹುಣಸನಹಳ್ಳಿ ಮದಗದ ಕೆರೆ, ತುಂಬೇನಹಳ್ಳಿ ಕೆರೆ, ಕೆ.ಜಿ. ಹೊಸಹಳ್ಳಿ ಅಂಗಡಿ ಕೆರೆ, ಚನ್ನಮಾನಹಳ್ಳಿ ಚನ್ನಮ್ಮನ ಕೆರೆ ಭರ್ತಿಯಾಗಿ ಕೋಡಿ ಹರಿದಿವೆ.

ರೇವಣಸಿದ್ದೇಶ್ವರ ಬೆಟ್ಟದ ಹೊಸಕೆರೆ, ಅವ್ವೆರಹಳ್ಳಿ ಕೆರೆ, ನಾಗಲಾಪುರ ಕೆರೆ, ತೆಂಗಿನ ಕಲ್ಲು ಕೆರೆಗಳು ಕೋಡಿ ಬೀಳುವ ಹಂತ ತಲುಪಿವೆ. ವರುಣಾರ್ಭಟ ಹೀಗೆ ಮುಂದುವರಿದರೆ ಇನ್ನಷ್ಟು ಕೆರೆಗಳು ಭರ್ತಿಯಾಗಲಿದ್ದು, ರೈತರಿಗೆ ಒಂದಷ್ಟು ಖುಷಿ ತರಿಸಲಿದೆ. ನೀರಿನ ಬವಣೆ, ಅಂತರ್ಜಲ ರಕ್ಷಣೆಗೆ ಸಹ ಕಾರಿಯಾಗಲಿವೆ. ಅಂತೆಯೇ ಮನೆ ಮಠಗಳು ಸೇರಿದಂತೆ ಪ್ರವಾಹಭೀತಿ ಆತಂಕ ಕೂಡ ಮನೆ ಮಾಡಿದೆ.

ಅನಾಹುತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಮೋರಿ, ಬ್ರಿಡ್ಜ್ಗಳು ಕೊಚ್ಚಿ ಹೋಗಿವೆ. ಜಮೀನುಗಳಿಗೆ ನೀರು ನುಗ್ಗಿ ಫಸಲು ನಾಶದ ಜೊತೆಗೆ ಮರಗಳು ಕೂಡ ಧರೆಗುರುಳಿ ರೈತರನ್ನ ಸಂಕಷ್ಟಕ್ಕೀಡು ಮಾಡಿದ್ದು, ಕೂಡಲೇ ಅಧಿಕಾರಿಗಳು ಮತ್ತು ಜಿಲ್ಲಾಢಳಿತ ಸರ್ಕಾರ ಗಮನ ಹರಿಸಿ ಪ್ರಾಕೃತಿಕ ವಿಕೋಪ ತಡೆಗೆ ಶ್ರಮಿಸಬೇಕು. ಅನಾಹುತವಾಗಿರುವ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಾಗೃತರಾಗಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.