ಸ್ಮಶಾನಕ್ಕೆ 18 ಗುಂಟೆ ಜಾಗ ಬಿಟ್ಟುಕೊಟ್ಟ ಗ್ರಾಪಂ ಸದಸ್ಯ!
Team Udayavani, Jun 11, 2023, 12:29 PM IST
ಚನ್ನಪಟ್ಟಣ: ಹಲವಾರು ವರ್ಷಗಳಿಂದ ಹುಣಸನ ಹಳ್ಳಿ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸೂಕ್ತ ಜಾಗವಿಲ್ಲದೇ ಪರದಾಡುವ ಸ್ಥಿತಿಯನ್ನು ಮನಗಂಡ ಗ್ರಾಪಂ ಸದಸ್ಯ ಮುತ್ತುರಾಜು ತನ್ನ ಜಮೀನನ್ನೇ ಸ್ಮಶಾನಕ್ಕೆ ನೀಡಲು ಮುಂದಾಗಿದ್ದಾರೆ.
ತಾಲೂಕಿನ ಕೋಡಂಬಹಳ್ಳಿ ಗ್ರಾಪಂ ವ್ಯಾಪ್ತಿಯ ಹುುಣಸನಹಳ್ಳಿಯ ಸದಸ್ಯ ಮುತ್ತುರಾಜು ತನ್ನ 18 ಗುಂಟೆ ಜಾಗವನ್ನು ಸ್ಮಶಾನಕ್ಕೆಂದು ಸರ್ಕಾರಕ್ಕೆ ನೀಡಲು ಮುಂದಾಗಿದ್ದು, ಈ ಸಂಬಂಧ ತಹಶೀಲ್ದಾರ್ ಮಹೇಂದ್ರ ಅವರನ್ನು ಭೇಟಿ ಮಾಡಿ ಜಾಗವನ್ನು ಸುಪರ್ದಿಗೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಸಮಸ್ಯೆ ಬಗೆಹರಿಸಿ: ಹುಣಸನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆಂದು ಪ್ರತ್ಯೇಕ ಜಾಗವಿಲ್ಲ, ಹೊಳೆದಡೆಯ ಪಕ್ಕ ಇರುವ ಜಾಗದಲ್ಲಿ ಹಾಗೂ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಇಲ್ಲಿಯವರೆಗೂ ಶವಸಂಸ್ಕಾರವನ್ನು ನಡೆಸಲಾಗುತ್ತಿತ್ತು. ಆದರೆ, ಕೆಲ ದಿನಗಳಿಂದ ಖಾಸಗಿ ವ್ಯಕ್ತಿಯೂ ಶವಸಂಸ್ಕಾರಕ್ಕೆ ಅವಕಾಶ ನೀಡದ ಕಾರಣ ಗ್ರಾಮದಲ್ಲಿ ಸ್ಮಶಾನದ ಸಮಸ್ಯೆ ತಲೆದೋರಿದ್ದು ಅಧಿಕಾರಿಗಳಿಗೂ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು.
ಕೋಡಂಬಹಳ್ಳಿ ಗ್ರಾಪಂನ ಹುಣಸನಹಳ್ಳಿ ಗ್ರಾಮದ ಸದಸ್ಯ ಮುತ್ತುರಾಜ್ ಅವರ 18 ಗುಂಟೆ ಜಾಗವೂ ಹೊಳೆ ಪಕ್ಕದಲ್ಲಿದ್ದು, ಸ್ಮಶಾನಕ್ಕೆ ಹೇಳಿ ಮಾಡಿಸಿದ ಜಾಗ. ಗ್ರಾಮದ ಮುಖ್ಯಸ್ಥರು, ಗ್ರಾಮಸ್ಥರು ಆ ಜಾಗವನ್ನು ಸ್ಮಶಾನಕ್ಕೆ ನೀಡುವಂತೆ ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಮುತ್ತುರಾಜ್ ಜಾಗ ಬಿಟ್ಟುಕೊಡಲು ಸಮ್ಮತಿಸಿದ್ದಾರೆ.
ಈ ಸಂಬಂಧ ಈಗಾಗಲೇ ತಾಲೂಕು ಕಚೇರಿಗೆ ಭೇಟಿ ನೀಡಿ ತಹಶೀಲ್ದಾರ್ ಮಹೇಂದ್ರ ಅವರನ್ನು ಗ್ರಾಮಸ್ಥರೊಡನೆ ಭೇಟಿ ಮಾಡಿ ತನಗೆ ಸೇರಿದ 18ಗುಂಟೆ ಜಾಗವನ್ನು ಸರ್ಕಾರ ಸ್ವಾಧೀನ ಪಡಿಸಿಕೊಂಡು ಸ್ಮಶಾನ ಮಾಡಿ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ತಹಶೀಲ್ದಾರ್‌ರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಂಕರಾನಂದ, ಮಂಜುನಾಥ, ಗೋಪಿ, ಮುತ್ತುರಾಜ್, ನಾಗೇಶ್, ಪುಟ್ಟಸ್ವಾಮಿ, ರಾಮು, ಶ್ರೀನಿವಾಸ್ ಇತರರಿದ್ದರು.
ಹೊಳೆ ಪಕ್ಕ ಇರುವ ನನ್ನ 18 ಗುಂಟೆ ಜಾಗ ಸ್ಮಶಾನಕ್ಕೆ ಹೇಳಿ ಮಾಡಿಸಿದಂತಿದ್ದು ಅದನ್ನು ಬಿಟ್ಟುಕೊಡುವಂತೆ ಗ್ರಾಮದ ಮುಖ್ಯಸ್ಥರು, ಗ್ರಾಮಸ್ಥರು ಕೇಳಿದ್ದಾರೆ. ಹೀಗಾಗಿ ಜಾಗ ಬಿಟ್ಟುಕೊಡಲು ಒಪ್ಪಿ ತಹಶೀಲ್ದಾರ್‌ರಿಗೆ ಮನವಿ ಪತ್ರ ನೀಡಿದ್ದೇನೆ. -ಮುತ್ತುರಾಜ್, ಗ್ರಾಪಂ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.