Ramanagara; ನಾನೂ ರಾಮಭಕ್ತ, ನಾವು ರಾಮೋತ್ಸವ ಮಾಡುತ್ತೇವೆ: ಕೈ ಶಾಸಕ ಇಕ್ಬಾಲ್ ಹುಸೇನ್
Team Udayavani, Jan 4, 2024, 2:06 PM IST
ರಾಮನಗರ: ರಾಮಮಂದಿರ ಕರಸೇವಕರ ಬಂಧನ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ ನಡೆಯುತ್ತಿದ್ದರೆ ಇತ್ತ ರಾಮನಗರ ಕಾಂಗ್ರೆಸ್ ಶಾಸಕರು ರಾಮೋತ್ಸವದ ಜಪ ಮಾಡುತ್ತಿದ್ದಾರೆ.
ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡುತ್ತೇನೆ. ರಾಮನಗರದಲ್ಲಿ ರಾಮೋತ್ಸವವನ್ನು ನಡೆಸಬೇಕೆಂದು ಚಿಂತನೆ ಮಾಡಿದ್ದೇವೆ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡುತ್ತೇವೆ ಎಂದು ಚನ್ನಪಟ್ಟಣದಲ್ಲಿ ಕೈ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನು ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು.
ಜನರನ್ನು ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತವಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರುವ ವಿಚಾರ. ಆದರೆ ನಾವು ರಾಮನನ್ನು ಮನೆ ದೇವರೆಂದು ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.