ಮಕ್ಕಳು ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ
Team Udayavani, Jan 30, 2019, 7:29 AM IST
ಕುದೂರು: ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ನಗರದ ಗುರುಕುಲ ವಿದ್ಯಾಮಂದಿರದಲ್ಲಿ ನಡೆದ ವಾರ್ಷಿಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪೋಷಕರು ಎಷ್ಟೇ ಬಡವರಾಗಿದ್ದರೂ ತಮ್ಮ ಮಕ್ಕಳು ವಿದ್ಯಾವಂತರಾಗಬೇಕು. ಉತ್ತಮ ಕೆಲಸಕ್ಕೆ ಸೇರಿ ಸುಂದರವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಶಾಲೆ, ಕಾಲೇಜಿಗೆ ಸೇರಿಸುತ್ತಾರೆ.
ಅದೇ ರೀತಿ ಶಿಕ್ಷಕರು ಪಾಠ, ಪ್ರವಚನ ಮಾಡುವ ಮೂಲಕ ಶಿಕ್ಷಣ ನೀಡಲು ಶ್ರಮಿಸುತ್ತಾರೆ. ಈ ಎರಡು ವರ್ಗದವರು ವಿದ್ಯಾರ್ಥಿಗಳಿಂದ ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೇ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಪೋಷಕರು, ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆ ನೀಡಲು ಶ್ರದ್ಧೆಭಕ್ತಿಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಹೇಳಿದರು.
ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ: ಗ್ರಾಪಂ ಅಧ್ಯಕ್ಷ ಕೆ.ಎಂ.ರಾಘವೇಂದ್ರ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಿಗೆ ನೀರು, ಗಾಳಿ, ಆಹಾರ ಎಷ್ಟು ಮುಖ್ಯವೂ ಶಿಕ್ಷಣವೂ ಅಷ್ಟೇ ಮುಖ್ಯವಾಗಿದೆ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು. ಹಣ, ಆಸ್ತಿಯನ್ನು ಮಾಡುವುದಕ್ಕಿಂತ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ತಿಳಿಸಿದರು.
ಗುಣಮಟ್ಟದ ಶಿಕ್ಷಣ ನೀಡಲು ಬದ್ಧ: ಗುರುಕುಲ ವಿದ್ಯಾ ಮಂದಿರದ ಕಾರ್ಯದರ್ಶಿ ಕೇಶಮೂರ್ತಿ ಮಾತನಾಡಿ, ಸಮಾಜದ ಪ್ರಗತಿ ಶಿಕ್ಷಣದಿಂದ ಮಾತ್ರ ಸಾಧ್ಯ. ಗುರುಕುಲ ವಿದ್ಯಾಸಂಸ್ಥೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಬದ್ಧವಾಗಿದೆ. ಇಲ್ಲಿನ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಉತ್ತಮ ಶಿಕ್ಷಣದಿಂದ ಜೀವನ ಸುಭದ್ರ: ತಾಪಂ ಸದಸ್ಯ ಅಣ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ ಹರಿಸಬೇಕು. ಇಂದು ಟೀವಿ, ಮೊಬೈಲ್‌ಗಳಿಂದ ವಿದ್ಯಾರ್ಥಿಗಳು ಸಮಯ ಹಾಳು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ಮುಂದಿನ ಜೀವನ ಸುಭದ್ರವಾಗಿರುತ್ತದೆ ಎಂದು ಹೇಳಿದರು.
ಈ ವೇಳೆ ಮುಖ್ಯಮಂತ್ರಿ ಚಂದ್ರು, ತುಮಕೂರು ಜಿಲ್ಲಾ ಆಸ್ಪತ್ರೆ ನಿವೃತ್ತ ಅಧಿಕಾರಿ ಬಾದೇಗೌಡ, ವೆಂಕಟಸಿದ್ದಯ್ಯ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಪಥ ಸಂಚಲನ, ವ್ಯಾಯಾಮ, ಬೆಂಕಿಸಾಹಸ, ಯೋಗ ಪ್ರದರ್ಶನ, ಕೋಲಾಟ, ನೃತ್ಯ, ಬೈಕ್ ಸಾಹಸ ಪ್ರದರ್ಶನ ಮಾಡಿದರು. ಗುರುಕುಲ ವಿದ್ಯಾಮಂದಿರದ ಅಧ್ಯಕ್ಷ ಉದಯ ಕುಮಾರ್, ಗ್ರಾಪಂ ಸದಸ್ಯ ಕೆ.ಟಿ.ವೆಂಕಟೇಶ್, ಶಂಕರ್, ಬಾಲಕೃಷ್ಣ, ವಿಶ್ವನಾಥ್, ಶಿಕ್ಷಕ ಅರವಿಂದ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.