ಬೇಡಿಕೆ ಈಡೇರದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ
Team Udayavani, Feb 8, 2019, 7:08 AM IST
ರಾಮನಗರ: ಕಣ್ವ ಜಲಾಶಯ ಹಿನ್ನೀರಿನಲ್ಲಿ ಮುಳುಗಡೆಯದ ಭೂಮಿಯ ಬದಲಿಗೆ ತಮಗೆ ನೀಡಿರುವ ಭೂಮಿಯ ಹಕ್ಕುಪತ್ರಗಳಿಗೆ ಖಾತೆ ಮತ್ತು ಪೌತಿ ಖಾತೆ ಮಾಡಿಕೊಡುವಂತೆ ಒತ್ತಾಯಿಸಿ ನಿರಾಶ್ರಿತ ರೈತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೆ, ತಮ್ಮ ಬೇಡಿಕೆ ಈಡೇರಿಸದಿದ್ದರೆ ಲೋಕಸಭೆ ಚುನಾವಣೆಯನ್ನು ಸಾಮೂಹಿಕವಾಗಿ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ದೊಡ್ಡಮಣ್ಣುಗುಡ್ಡೆ ರೈತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಯಪುರ, ವಿಜಯಪುರ, ಕನ್ನಮಂಗಲದೊಡ್ಡಿ, ದೊಡ್ಡಮಣ್ಣು ಗುಡ್ಡೆದೊಡ್ಡಿ, ರಾಜೀವ್ ಗಾಂಧಿಪುರ ಗ್ರಾಮಗಳ ನೂರಾರು ನಿರಾಶ್ರಿತ ರೈತರು ಪ್ರತಿಭಟೆಯಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರೀಯ ಹೆದ್ದಾರಿ ತಡೆ: ನಗರದ ಮಿನಿ ವಿಧಾನಸೌಧದಿಂದ ಮೆರವಣಿಗೆ ಹೊರಟು ಐಜೂರು ವೃತ್ತದಲ್ಲಿ ಕೆಲಹೊತ್ತು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು. ನಂತರ ಮೆರವಣಿಗೆ ನಡೆಸಿ ಜಿಲ್ಲಾ ಕಚೇರಿಗಳ ಸಂಕಿರ್ಣದ ತಲುಪಿ ಅಲ್ಲಿ ಕೆಲಹೊತ್ತು ಧರಣಿ ನಡೆಸಿದರು.
ಸಾಗುವಳಿ ಪತ್ರ ನೀಡಲು ಆಗ್ರಹ: ಕಣ್ವ ಜಲಾಶಯದ ಹಿನ್ನೀರಿಲ್ಲಿ ತಮ್ಮ ಅನುಭವದಲ್ಲಿದ್ದ ಭೂಮಿ ಮುಳುಗಿದೆ. ಇದಕ್ಕೆ ಪರ್ಯಾಯವಾಗಿ ನೀಡಿರುವ ಭೂಮಿಯ ಹಕ್ಕನ್ನು ಪಹಣಿಯಲ್ಲಿ ದಾಖಲಿಸಬೇಕು. ಭೂಮಿಯಲ್ಲಿ ಅನುಭವದಲ್ಲಿ ಇರುವವರಿಗೆ ಸಾಗುವಳಿ ಪತ್ರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಣ್ವ ಜಲಾಶಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಮುಳುಗಡೆಯಾದ ಭೂಮಿಗೆ 1948ರಲ್ಲಿ ದೊಡ್ಡಮಣ್ಣುಗುಡ್ಡೆ ಸರ್ವೆ ನಂಬರ್ 1ರಲ್ಲಿ ಸುಮಾರು 500 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಅದರಲ್ಲಿ 100 ಎಕರೆ ಭೂಮಿಯನ್ನು ಸೈನಿಕರಿಗೆ ಮೀಸಲಿರಿಸಿದೆ. ಉಳಿದ 400 ಎಕರೆ ಭೂಮಿಯನ್ನು ತಮಗೆ ಹಂಚಲಾಗಿದೆ. ಆದರೆ ತಮಗೆ ತಮ್ಮ ಭೂಮಿಯ ಒಡೆತನ ಅಥವಾ ಮಾಲೀಕತ್ವವೇ ಇಲ್ಲದಾಗಿದ್ದು, ಜೀವನ ಡೋಲಾಯಮಾನವಾಗಿದೆ ಎಂದು ರೈತರು ಅಳಲು ತೋಡಿಕೊಂಡರು.
ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದರು ಜಿಲ್ಲಾಡಳಿತವಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲ. ತಮ್ಮ ಬೇಡಿಕೆ ಈಗಲೂ ಈಡೇರದಿದ್ದರೆ, ಎದುರಾಗುತ್ತಿರುವ 2019ರ ಲೋಕಸಭಾ ಚುನಾವಣೆಯನ್ನು ಸಾಮೂಹಿಕವಾಗಿ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.
ಜಮೀನಿನ ಗೊಂದಲ ಬಗೆಹರಿಸಿ: ರೈತರಲ್ಲಿರುವ ದಾಖಲಾತಿ ಪಡೆದು ಕಂಪ್ಯೂಟರ್ ಪಹಣಿಯಲ್ಲಿ ಹಕ್ಕುಗಳನ್ನು ದಾಖಲಿಸಬೇಕು. ಭೂಮಿಯಲ್ಲಿ ಅನುಭವದಲ್ಲಿರುವವರಿಗೆ ಸಾಗುವಳಿ ಪತ್ರ ನೀಡಬೇಕು. ಇದಲ್ಲದೆ, ರಾಷ್ಟ್ರೀಯ ಹೆದ್ದಾರಿಗೆ ಜಮೀನು ಕಳೆದುಕೊಳ್ಳುತ್ತಿರುವ ರೈತರಿಗೆ ಪರಿಹಾರ ಸಿಗಲು ರೈತನ ಜಮೀನಿನ ಗೊಂದಲ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರೈತಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್, ನಿರಾಶ್ರಿತ ಗ್ರಾಮದ ಪ್ರಮುಖರಾದ ನವೀನ್, ಗೌರಮ್ಮ, ಚನ್ನೇಗೌಡ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Ramanagara: ಕಾಡಾನೆ ದಾಳಿಗೆ ರೈತ ಬಲಿ
Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.