Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Team Udayavani, Apr 20, 2024, 5:59 PM IST
ರಾಮನಗರ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಜಾಗೃತಗೊಂಡಿರುವ ಜಿಲ್ಲಾಡಳಿತ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿರಿಸಿದೆ.
ಚುನಾವಣಾ ಇತಿಹಾಸದಲ್ಲಿ ಎಂದೂ ಕಂಡರಿಯದ ಅಕ್ರಮ ಹಣ ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದುವರೆಗೆ ಸುಮಾರು 25 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದು ಜಿಲ್ಲೆಯಲ್ಲಿ ಇದೇ ಮೊದಲ ಬಾರಿ.
ಹೌದು.., ಈಬಾರಿ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕೋಟಿ ಹಣ, ಹತ್ತಾರು ಕೆ.ಜಿ. ಚಿನ್ನ, ಬೆಳ್ಳಿ, 50 ಸಾವಿರ ಲೀ.ನಷ್ಟು ಮದ್ಯವನ್ನು ಚುನಾವಣಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣ ದಾಖಲಿನಲ್ಲಿ ದಾಖಲೆ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ವಿರುದ್ಧ ಚುನಾವಣಾ ಕರ್ತವ್ಯದಲ್ಲಿ ನಿರತವಾಗಿರುವ ಎಸ್‌ಎಸ್‌ಟಿ ತಂಡ ಮತ್ತು ಪೊಲೀಸ್ ಇಲಾಖೆ ಹದ್ದಿನಕಣ್ಣಿರಿಸಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಅಕ್ರಮಗಳ ಪ್ರಕರಣಗಳ ಸುರಿಮಳೆಯೇ ಆಗಿದ್ದು, ಹಿಂದೆಂದೂ ಕಾಣದಷ್ಟು ಪ್ರಕರಣಗಳು ಈಬಾರಿಯ ಚುನಾವಣೆಯಲ್ಲಿ ದಾಖಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇದುವರೆಗೆ 667 ವಿವಿಧ ಪ್ರಕರಣಗಳು ದಾಖಲಾಗಿದೆ. ಹಿಂದಿನ ಯಾವ ಚುನಾವಣೆಗಳಲ್ಲೂ ಇಷ್ಟು ಪ್ರಕರಣಗಳು ದಾಖಲಾಗಿರಲಿಲ್ಲ. ಮತದಾನಕ್ಕೆ ಇನ್ನೂ 7 ದಿನಗಳ ಕಾಲಾವಕಾಶವಿದ್ದು, ಪ್ರಕರಣಗಳ ಸಂಖ್ಯೆ ಸಾವಿರ ದಾಟಲಿದೆ ಎಂದು ಅಂದಾಜಿಸಲಾಗಿದೆ.
5.44 ಕೋಟಿ ರೂ. ಹಣ ವಶ: ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡ ಹಾಗೂ ಫ್ಲೆàಯಿಂಗ್‌ಸ್ಕ್ವಾಡ್ ತಂಡದಿಂದ ಅಕ್ರಮವಾಗಿ ಸಾಗಾಣಿಕೆ ಮಾಡುವ ಹಣಗಳ ಮೇಲೆ ಕಣ್ಣಿರಿಸಲಾಗಿದೆ. ಬಿಡದಿಯ ಚೆಕ್ ಪೋಸ್ಟ್ ಬಳಿ 5.37 ಕೋಟಿ ರೂ. ಹಣವನ್ನು ಎಟಿಎಂವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಇದರೊಂದಿಗೆ ಎಸ್‌ಎಸ್‌ಟಿ ತಂಡ ಮತ್ತು ಫ್ಲೇಯಿಂಗ್ ಸ್ಕ್ವಾಡ್ ತಂಡಗಳು ದಾಳಿನಡೆಸಿ ಹಲವಾರು ಕಡೆ ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದವು. ಇದುವರೆಗೆ ಒಟ್ಟಾರೆ5.50 ಕೋಟಿ ರೂ. ನಷ್ಟು ಹಣವನ್ನು ವಶಪಡಿಸಿಕೊಂಡಿದ್ದು, ಇದರಲ್ಲಿ 5.38 ಕೋಟಿ ರೂ. ಹಣವನ್ನು ದಾಖಲೆ ಪರಿಶೀಲಿಸಿ ಹಿಂದಿರುಗಿಸಲಾಗಿದೆ. ಸಮರ್ಪಕ ದಾಖಲೆ ತೋರಿಸದ ಹಿನ್ನೆಲೆಯಲ್ಲಿ 12 ಲಕ್ಷ ರೂ. ಹಣವನ್ನು ಜಿಲ್ಲಾಡಳಿತ ಜಿಲ್ಲಾ ಖಜಾನೆಯಲ್ಲಿ ಇರಿಸಿ ಪ್ರಕರಣ ದಾಖಲಿಸಿದೆ.
54 ಸಾವಿರ ಲೀ. ಮದ್ಯ ವಶ: ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಕ್ರಮ ಮದ್ಯದ ವಿರುದ್ಧ ಅಬ್ಕಾರಿ, ಪೊಲೀಸ್ ಇಲಾಖೆ ವಿಶೇಷ ನಿಗಾವಹಿಸಿದ್ದು, ಎಸ್‌ಎಸ್‌ಟಿ ಮತ್ತು ಫ್ಲೆàಯಿಂಗ್ ಸ್ಕ್ವಾಡ್ ತಂಡಗಳು ಅಕ್ರಮ ಮದ್ಯದ ವಿರುದ್ಧ ಕ್ರಮಜರುಗಿಸಲು ಮುಂದಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 54235 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟಾರೆ ಮೌಲ್ಯ 1,70,09,189 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇನ್ನು 1.67 ಲಕ್ಷ ರೂ. ಮೌಲ್ಯದ 1.675 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಅಪಾರ ಪ್ರಮಾಣದ ಉಡುಗೊರೆ ವಶಕ್ಕೆ : ಪಕ್ಷಗಳು ಮತದಾರರಿಗೆ ಹಂಚಿಕೆ ಮಾಡಲು ದಾಸ್ತಾ ನು ಮಾಡಿದ್ದ ವಸ್ತುಗಳ ವಿರುದ್ಧವೂ ಪೊಲೀಸ್ ಇಲಾಖೆ ಕಣ್ಣಿರಿಸಿದೆ. 7.64 ಲಕ್ಷ ಮೌಲ್ಯದ 50 ಬಂಡಲ್ ಉಡುಗೆ ವಸ್ತ್ರಗಳು, 6.81 ಲಕ್ಷ ಮೌಲ್ಯದ 135 ಡಿನರ್ ಸೆಟ್‌ಗಳು, 67 ಸಾವಿರ ಮೌಲ್ಯದ 270 ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
19 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆ : ಯಾವುದೇ ದಾಖಲೆ ಇಲ್ಲದೆ ಸಾಗಾಣಿಕೆ ಮಾಡು ತ್ತಿದ್ದ 19 ಕೋಟಿ ಮೌಲ್ಯದ 28.5 ಕೆ.ಜಿ. ಚಿನ್ನ, 21ಲಕ್ಷ ಮೌಲ್ಯದ 28 ಕೆ.ಜಿ. ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ43ದ್ವಿಚಕ್ರ ವಾಹನ, 1 ತ್ರಿಚಕ್ರ ವಾಹನ, 1 ನಾಲ್ಕು ಚಕ್ರದ ವಾಹನ, 4 ಬೃಹತ್ ವಾಹನ ಜಪ್ತಿ ಮಾಡಲಾಗಿದೆ.
12 ಲೀಟರ್ ಅಕ್ರಮ ಮದ್ಯ ವಶ : ರಾಮನಗರ: ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿದ್ದು, ಏ. 19ರ ಬೆಳಗ್ಗೆ 9 ಗಂಟೆಯ ವರೆಗೆ ಒಟ್ಟು 12.33ಲೀ. ಮದ್ಯ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ವೇಳೆ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಇಲಾಖೆ ಕಾರ್ಯಾಚರಣೆ ವೇಳೆ 4,608 ರೂ. ಮೌಲ್ಯದ 12.33 ಲೀ ಮದ್ಯ ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆಯನ್ನು ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಅಕ್ರಮ ಹಣ, ಮಧ್ಯ, ಬೆಲೆಬಾಳುವ ವಸ್ತುಗಳು ಪತ್ತೆಯಾದಲ್ಲಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುತ್ತಿದೆ. ಎಫ್‌ಎಸ್, ಎಸ್ ಎಸ್‌ಟಿ ತಂಡಗಳೊಂದಿಗೆ ಪೊಲೀಸ್, ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನೀತಿಸಂಹಿತೆ ಜಾರಿಗೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. –ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಚುನಾವಣಾಧಿಕಾರಿ
-ಸು.ನಾ.ನಂದಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.