ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿ
Team Udayavani, Feb 23, 2020, 4:02 PM IST
ಚನ್ನಪಟ್ಟಣ: ಪರಿಸರ ನಾಶದಿಂದಾಗುವ ದುಷ್ಪರಿಣಾಮಗಳನ್ನು ಸಮಾಜಕ್ಕೆ ತಿಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡ ಬೇಕಾಗಿದೆ ಎಂದು ಮುಖ್ಯ ಶಿಕ್ಷಕ ಎಂ.ಕೆ. ಶಶಿಕುಮಾರ್ ಅಭಿಪ್ರಾಯಪಟ್ಟರು.
ತಾಲೂಕಿನ ಯಲಚಿಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಂಪುರದ ನೇಗಿಲ ಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ “ಕಾಡನ್ನು ಬೆಂಕಿಯಿಂದ ರಕ್ಷಿಸಿ- ಅರಣ್ಯ ಸಂರಕ್ಷಣೆ ನಮ್ಮ ಹೊಣೆ’ ಎಂಬ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಪರಿಸರ ಜಾಗೃತಿ ಭಾವ ಬಿತ್ತಿದರೆ, ಭವಿಷ್ಯದ ದಿನಗಳಲ್ಲಿ ಉತ್ತಮ ಫಲ ನೀಡುತ್ತದೆ ಎಂದರು.
ಯುವ ಕವಿ ಮಂಜೇಶ್ ಬಾಬು ಮಾತನಾಡಿ, ಕಿಡಿಗೇಡಿಗಳು ಹಚ್ಚುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗುತ್ತಿವೆ. ಪರಿಸರವೆಂದರೆ ಬರಿ ಹಸಿರಲ್ಲ, ಪ್ರಾಣಿ-ಪಕ್ಷಿಗಳು ಸಹ ಮನುಷ್ಯನ ಬದುಕಿನಲ್ಲಿ ಯಾವ ಪಾತ್ರ ವಹಿಸುತ್ತದೆ ಎಂಬುದನ್ನು ಮಕ್ಕಳಿಗೆ ತಿಳಿಸಬೇಕು. ಅನೇಕ ವನ್ಯ ಮೃಗ-ಪಕ್ಷಿಗಳು ವಿನಾಶದ ಅಂಚಿಗೆ ತಲುಪುತ್ತಿರುವುದು ಅತ್ಯಂತ ಶೋಚನೀಯ ಸ್ಥಿತಿ. ಅನೇಕ ಬಗೆಯ ಔಷಧಿಯ ಗುಣಗಳುಳ್ಳ ಸಸ್ಯಸಂಪತ್ತು ನಾಶವಾಗುತ್ತಿರುವುದು ಕಳವಳ ಪಡ ಬೇಕಾದ ಸಂಗತಿ ಎಂದರು.
ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ವಿಜಯ್ ರಾಂಪುರ, ಜಾನಪದ ಗಾಯಕ ಚೌ.ಪು. ಸ್ವಾಮಿ, ಶಿಕ್ಷಕ ಮುತ್ತಯ್ಯ ಹಾಜರಿದ್ದರು. ಯಲಚಿಪಾಳ್ಯ ಗ್ರಾಮದ ಬೀದಿಗಳಲ್ಲಿ ಪರಿಸರ ಪ್ರೇಮ ಮೂಡಿಸುವ ಘೋಷಣೆಗಳೊಂದಿಗೆ ಜಾಥಾ ನಡೆಸಲಾಯಿತು. ಗಾಯಕ ಚೌ.ಪು.ಸ್ವಾಮಿ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.