ಸೋಂಕು ನಿಯಂತ್ರಣದಲ್ಲಿದೆ: ಡೀಸಿ
Team Udayavani, Jul 14, 2020, 11:34 AM IST
ರಾಮನಗರ: ಜಿಲ್ಲಾದ್ಯಂತ ಕೋವಿಡ್ ನಿಯಂತ್ರಣದಲ್ಲಿದೆ ಎಂದು ಡೀಸಿ ಎಂ.ಎಸ್.ಅರ್ಚನಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಮನ ಸೆಳೆದರು.
ಜಿಲ್ಲಾಡಳಿತ ಮತ್ತು ಮುಖ್ಯಮಂತ್ರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿರುವ ಕಂದಾಯ ಭವನದಲ್ಲಿರುವ ವ್ಯವಸ್ಥೆ, ರಾಜರಾಜೇಶ್ವರಿ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲೆಯ ಸೋಂಕಿತರ ಸಂಖ್ಯೆ ಇತ್ಯಾದಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪ್ರತಿ ತಾಲೂಕಿನಲ್ಲಿ ತಲಾ 500 ಹಾಸಿಗೆಗಳ ಕೋವಿಡ್-19 ಕೇರ್ ಸೆಂಟರ್ ತೆರೆಯಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.35ರಷ್ಟು ಹೆಚ್ಚು ಮಳೆಯಾಗಿದೆ. ಜಿಲ್ಲೆಯಲ್ಲಿ ಜುಲೈ ಕೊನೆಯ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಬಿತ್ತನೆ ಕಾರ್ಯ ರೈತರು ಕೈಗೊಳ್ಳುತ್ತಾರೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರದ ಸಂಗ್ರಹವಿದೆ. ಯಾವುದೇ ಕೊರತೆಯಿಲ್ಲ ಎಂದು ಸ್ಪಷ್ಟ ಪಡಿಸಿದರು.
ಜಿಲ್ಲೆಯಲ್ಲಿ ಮಾಗಡಿ ಹೊರತುಪಡಿಸಿ ಇನ್ನುಳಿದ ಮೂರು ತಾಲೂಕುಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸುವಷ್ಟು ಸಮಸ್ಯೆ ಎದುರಾಗಿಲ್ಲ. ಮಾಗಡಿ ತಾಲೂಕಿನ ಕೆಲವು ಕಡೆಗಳಲ್ಲಿ ಮಾತ್ರ ಮಾಸಿಕ ಬಾಡಿಗೆ ಆಧಾರದ ಮೇಲೆ ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.