ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಜನತೆ

Team Udayavani, Feb 27, 2023, 12:17 PM IST

tdy-7

ಕನಕಪುರ: ನಗರದಲ್ಲಿ ನಗರಸಭೆ ಅಧಿಕಾರಿ ಸಿಬ್ಬಂದಿಗಳ ನಿರ್ಲಕ್ಷದಿಂದ ಸ್ವತ್ಛತೆ ಮರೀಚಿಕೆಯಾಗಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಧಮ್ಮ ದೀವಿಗೆ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಆಕ್ರೋಶ ವ್ಯಕ್ತಪಡಿಸಿದ್ದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಗರಸಭೆ ತುರ್ತು ಸಂದರ್ಭಗಳಲ್ಲಿ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಹೊಣೆಗೇಡಿತನ ಪ್ರದರ್ಶನ ಮಾಡುತ್ತಿದೆ. ಇದರ ಪರಿಣಾಮ ನಗರದಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ ಎಂದು ಆರೋಪಿಸಿದರು.

ವಾರ್ಡ್‌ಗಳಲ್ಲಿ ನಾನಾ ಸಮಸ್ಯೆ: ಕೆಲ ದಿನಗಳಿಂದ ಕೆಲವು ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕಾಯಂ ನೌಕರರು ಇದ್ದರೂ ಸಹ ಅವರಿಂದ ನಗರದಲ್ಲಿ ಆಗಬೇಕಿದ್ದ ಕೆಲಸ ಕಾರ್ಯಗಳನ್ನು ಮಾಡುವ ಇಚ್ಛಾಸಕ್ತಿ ತೋರುತ್ತಿಲ್ಲ. ಕೆಲವು ವಾರ್ಡ್ ಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಸಹ ತಲೆದೋರಿದೆ. ಕೆಲ ನೌಕ ರರು ಪ್ರತಿಭಟನೆ ಮಾಡುತ್ತಿರುವುದನ್ನೇ ನೆಪ ಮಾಡಿಕೊಂಡು ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ವಸ್ತು ಪ್ರದರ್ಶನಕಿದ್ಯಾ ಚಿರಶಾಂತಿ ವಾಹನ? ಕಳೆದ ನಾಲ್ಕು ದಿನಗಳಿಂದ ದಿನ ಬಳಕೆ ಹಾಗೂ ಕುಡಿಯುವ ನೀರಿನ ಪೂರೈಕೆ ಅಸಮರ್ಪಕವಾಗಿದೆ. ನಗರಕ್ಕೆ ಕಾವೇರಿ ನೀರು ಪೂರೈಸುವ ಪೈಪ್ಲೆ„ನ್‌ ಒಡೆದು ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ಅದರ ದುರಸ್ತಿಗೆ ಸರಿಯಾದ ಕ್ರಮಗಳನ್ನು ಕೈಗೊಳ್ಳದೆ ವಿಳಂಬ ಮಾಡುತ್ತಿದ್ದಾರೆ. ದಿನಬಳಕೆ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ. ನಗರಸಭೆ ಇದ್ದು ಇಲ್ಲದಂತಾಗಿದೆ. ನಗರದಲ್ಲಿ ಯಾರಾದರೂ ಮೃತಪಟ್ಟರೆ ಚಿರಶಾಂತಿ ವಾಹನ ವಸ್ತು ಪ್ರದರ್ಶನಕ್ಕೆ ಇಟ್ಟಂತಾಗಿದೆ. ಲಕ್ಷಾಂತರ ರೂ.ವ್ಯಯಿಸಿ ವಾಹನ ಖರೀದಿಸಿರುವ ನಗರಸಭೆ ಅಧಿ ಖಾರಿಗಳು, ಈ ವಾಹನಕ್ಕೆ ಚಾಲಕನನ್ನೇ ನೇಮಿಸಿಲ್ಲ. ವಾಹನ ಇದ್ದರೇ ಚಾಲಕನಿ ಲ್ಲ, ಇಂಧನವಿಲ್ಲ ಎಂಬ ಸಬೂಬುಗಳನ್ನು ಹೇಳಿ ಸಾರ್ವಜನಿಕರ ಬಳಕೆಗೆ ಕೊಡದೆ ವಾಹನ ತುಕ್ಕು ಹಿಡಿಯುತ್ತಿದೆ ಎಂದು ದೂರಿದರು.

ಪೌರಾಯುಕ್ತರಿಲ್ಲ: ನಗರಸಭೆ ಪೌರಾ ಯುಕ್ತರು ವರ್ಗಾವಣೆಗೊಂಡು ಹಲವು ದಿನಗಳು ಕಳೆಯುತ್ತಾ ಬಂದಿದೆ. ಪ್ರಭಾರ ಪೌರಾಯುಕ್ತರು ಮತ್ತು ಎಇಇ ಧನಂಜಯ ಹಾಗೂ ನಗರಸಭೆ ಸಿಬ್ಬಂದಿ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸಾರ್ವಜನಿಕರು ಕಚೇರಿಗೆ ಅಲೆದಾ ಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಆರಂಭವಾಗುತ್ತಿದೆ. ವಾಹನಗಳ ಓಡಾಟದಿಂದ ನಗರದಲ್ಲಿ ಸಂಪೂರ್ಣವಾಗಿ ಧೂಳು ಆವರಿಸಿ, ಸಾರ್ವಜನಿಕರು ಓಡಾಟಕ್ಕೂ ತೊಂದರೆ ಯಾಗಿದೆ. ಧೂಳಿನಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು ಮಾತ್ರ ರಸ್ತೆಗೆ ನೀರನ್ನು ಸಿಂಪಡಿಸಲು ಮುಂದಾಗಿಲ್ಲ. ಜಿಲ್ಲಾಧಿಕಾರಿಗಳು ಮತ್ತು ಯೋಜನಾಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ಇರುವ ಕಾಯಂ ನೌಕರರನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ನಗರದಲ್ಲಿ ಸ್ವತ್ಛತೆ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ನೀರಿನ ಪೈಪ್‌ನಲ್ಲಿ ಚರಂಡಿ ನೀರು ಮಿಶ್ರಣ : ನಗರದಲ್ಲಿ ನಗರಸಭೆಯಿಂದ ಕೈಗೊಳ್ಳುವ ಚರಂಡಿ ಇತರೆ ಕಾಮಗಾರಿಗಳಿಗೆ ಗುತ್ತಿಗೆದಾರರು ಎಲ್ಲೆಂದರಲ್ಲಿ ಜಲ್ಲಿ ಮರಳು ಸುರಿದು ಜನರ ಓಡಾಟಕ್ಕೆ ತೊಂದರೆ ಮಾಡಿದ್ದಾರೆ. ಚರಂಡಿ ಕಾಮಗಾರಿ ಆರಂಭಿಸಿ ತಿಂಗಳುಗಳೇ ಕಳೆದರೂ ಕಾಮಗಾರಿ ಮುಗಿದಿಲ್ಲ. ಜನ ತಮ್ಮ ಮನೆಗಳಿಗೆ ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಮಗಾರಿ ವಿಳಂಬದಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗದೇ ದುರ್ನಾತ ಬೀರಿದೆ. ನಗರಸಭೆಗೆ ಮಾಹಿತಿ ನೀಡಿದರು ಯಾ ವುದೇ ಪ್ರಯೋಜನವಾಗಿಲ್ಲ. ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್‌ ಗಳು ಒಡೆದು ದಿನಬಳಕೆಗೂ ಯೋಗ್ಯವಲ್ಲದ ಕಲುಷಿತ ನೀರು ಮನೆಗಳಿಗೆ ಪೂರೈಕೆಯಾಗುತ್ತಿದೆ ಅದನ್ನು ದುರಸ್ತಿ ಮಾಡಿಸುವ ಗೋಜಿಗೆ ಹೋಗಿಲ್ಲ .

ನಗರಸಭೆ ಕಸಸಾಗಣೆ ಮಾಡುವ ವಾಹನ ಚಾಲಕರ ಪ್ರತಿಭಟನೆಯಿಂದ ನಗರದ ವಾರ್ಡ್‌ಗಳಲ್ಲಿ ರಸ್ತೆ ಬದಿಗಳಲ್ಲಿ ಕಸದ ರಾಶಿ ಬಿದ್ದಿದೆ. ನಾಲ್ಕು ದಿನಗಳಿಂದ ಕಸ ವಿಲೇವಾರಿ ಆಗಿಲ್ಲ. ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ಕಳೆದ ನಾಲ್ಕು ದಿನಗಳಿಂದ ಸ್ಥಗಿತಗೊಂಡಿದೆ ನಗರಸಭೆ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಕ್ಷೇತ್ರದ ಜನಪ್ರತಿನಿ ಧಿಗಳು ಮಧ್ಯಪ್ರವೇಶ ಮಾಡಿ ಪ್ರತಿಭಟನೆ ಮಾಡುತ್ತಿರುವ ನೌಕರರ ಮನವೊಲಿಸಲಿ. ಸ್ಟುಡಿಯೋ ಚಂದ್ರು, ,ನಗರಸಭಾ ಸದಸ್ಯ

ಟಾಪ್ ನ್ಯೂಸ್

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.