ಅಕ್ರಮ ಒತ್ತುವರಿ ಭೂಮಿ ತೆರವುಗೊಳಿಸಲು ಒತ್ತಾಯ

ಮಾಯಸಂದ್ರ, ವಿರೂಪಾಪುರ, ಲಕ್ಕೇನಹಳ್ಳಿ ಬೆಟ್ಟೇಗೌಡನಪಾಳ್ಯದ ಗ್ರಾಮಸ್ಥರಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ

Team Udayavani, Jul 27, 2019, 12:07 PM IST

RN-TDY-2

ಅಕ್ರಮ ಒತ್ತುವರಿ ತೆರವುಗೊಳಿಸಲು ಗ್ರಾಮಸ್ಥರು ಮಾಗಡಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಟಿ.ಜಯಣ್ಣಗೆ ಮನವಿ ಸಲ್ಲಿಸಿದರು.

ಮಾಗಡಿ: ಮಾಯಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿ ರುವುದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮಾಯಸಂದ್ರ, ವಿರೂಪಾಪುರ, ಲಕ್ಕೇನಹಳ್ಳಿ ಬೆಟ್ಟೇಗೌಡನಪಾಳ್ಯದ ಗ್ರಾಮಸ್ಥರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ತಾಲೂಕಿನ ತಿಪ್ಪಸಂದ್ರ ಹೋಬಳಿ ಮಾಯಸಂದ್ರ ಗ್ರಾಮದ ಸರ್ವೇ 44/ಪಿ1 ನಂಬರ್‌ ನ ಅಮೃತ ಮಹಲ್ ಕಾವಲ್ನಲ್ಲಿ |23 ಎಕರೆ 24 ಗುಂಟೆ ಸರ್ಕಾರಿ ಜಮೀನಿದೆ. ಸದರಿ ನಂಬರ್‌ ಪೈಕಿ 2.10 ಎಕರೆ ಜಮೀನನ್ನು ಸರ್ಕಾರ ಜಯಲಕ್ಷ್ಮಮ್ಮ ಕೋಂ ಕೆಂಪಯ್ಯ ಎಂಬುವರ ಹೆಸರಿಗೆ ಮಂಜೂರು ಮಾಡಿದೆ. ಉಳಿಕೆ ಜಮೀನು ಸರ್ಕಾರಿ ಜಮೀನು ಆಗಿದೆ. ಆದರೂ ಸಹ ಕೆಂಪಯ್ಯ ಎಂಬುವರು ಸದರಿ ಸರ್ವೇ ನಂಬರ್‌ನ ಎಲ್ಲಾ ಭೂಮಿಯೂ ನನ್ನದೇ ಎಂದು ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒತ್ತುವರಿ ಜಾಗಕ್ಕೆ ಬೇಲಿ: ಜಿಪಂ ಮಾಜಿ ಅಧ್ಯಕ್ಷ ಎಂ.ಕೆ. ಧನಂಜಯ ಮಾತನಾಡಿ, ಸರ್ಕಾರಿ ಜಮೀನಿನಲ್ಲಿ ಈ ಭಾಗದ ರೈತರು ತಮ್ಮ ದನಕರುಗಳನ್ನು ಮೇಯಿಸಲು ಹುಲ್ಲುಗಾವಲು ಮಾಡಿಕೊಂಡಿದ್ದರು. ಆದರೀಗ ಕೆಂಪಯ್ಯ ಎಂಬುವರು ಯಾವ ರೈತರಿಗೂ ದನಕರುಗಳನ್ನು ಮೇಯಿಸಲು ಬಿಡದೇ ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾರೆ. ಮುಂದಿನ ಜಮೀನಿನ ರೈತರು ತಮ್ಮ ಹೊಲಬಿತ್ತನೆ ಮಾಡಲು ಹೋಗಲಾಗುತ್ತಿಲ್ಲ. ದನಕರುಗಳಿಗೂ ಮೇವಿಲ್ಲ. ರೆವಿನ್ಯೂ ಅಧಿಕಾರಿಗಳ ಕಮ್ಮಕ್ಕಿನಿಂದ ಕೆಂಪಯ್ಯ ಮೆರೆಯುತ್ತಿದ್ದಾರೆ. ತಹಶೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿ ಜಮೀನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ದನಮೇಯಿಸಲು ಬಿಟ್ಟುಕೊಡಿ: ಹೊನ್ನಪುರ ಶಿವಪ್ರಸಾದ್‌ ಮಾತನಾಡಿ, ಗ್ರಾಮಸ್ಥರೆಲ್ಲರೂ ಒಗ್ಗೂಡಿ ತಾಲೂಕು ಕಚೇರಿ ಮುಂದೆ ಜಮಾಯಿಸಿ, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೆಂಪಯ್ಯ ಅವರನ್ನು ಎತ್ತಂಗಡಿ ಮಾಡಿಸಬೇಕು ತಹಶೀಲ್ದಾರ್‌ಗೆ ಮನವಿ ಮಾಡಿದ್ದೇವೆ. ಕೂಡಲೇ ಸರ್ಕಾರ ಭೂಮಿಯನ್ನು ವಶಪಡಿಸಿಕೊಂಡು ಗ್ರಾಮಸ್ಥರಿಗೆ ದನಮೇಯಿಸಲು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಟಿ. ಜಯಣ್ಣ ಮತ್ತು ಶಿರಸ್ತೇದಾರ್‌ ಜಗದೀಶ್‌ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮುಖಂಡರಾದ ಮರೂರು ಮರಿಗೌಡ, ರಂಗಸ್ವಾಮಿ, ಸುದರ್ಶನ್‌, ವಿಎಸ್‌ಎಸ್‌ಎನ್‌ ನಿರ್ದೇಶಕ ಮೂರ್ತಿ, ರವಿಕುಮಾರ್‌, ಶಿವಣ್ಣ, ಶರ್ಮ ಹಾಜರಿದ್ದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.