ಮೇಕೆದಾಟು ಯೋಜನೆಗೆ ಒತ್ತಾಯ
Team Udayavani, Jun 29, 2019, 4:15 PM IST
ರಾಮನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿದರು.
ರಾಮನಗರ: ಮೇಕೆದಾಟು ಯೋಜನೆಯ ಆರಂಭಕ್ಕೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಮತ್ತು ಸ್ಥಳೀಯ ಕನ್ನಡಪರ ಸಂಘಟನೆಗಳ ಪದಾಧಿಕಾರಿ ಗಳು ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ನಗರದ ಐಜೂರು ವೃತ್ತದಲ್ಲಿ ಹೆದ್ದಾರಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಮೇಕೆದಾಟು ಯೋಜನೆಗೆ ವಿಳಂಬ ಮಾಡುತ್ತಿರವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ, ಯೋಜನೆಗೆ ವಿನಾಃಕಾರಣ ತಕರಾರು ಮಾಡುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಘೋಷ ಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಯೋಜನೆ ಜಾರಿಗೆ ಸ್ಪಷ್ಟ ಅಭಿಪ್ರಾಯವಿಲ್ಲ: ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜು, ಶೀಘ್ರದ ಲ್ಲೇ ಮೇಕದಾಟು ಯೋಜನೆ ಯನ್ನು ಆರಂಭಿಸಬೇಕು. ಪೊಲೀಸ್ ಸಿಬ್ಬಂದಿ ಗಾಗಿ ಔರಾದ್ಕಾರ್ ಸಮಿತಿ ಶಿಫಾರಸ್ಸು ಜಾರಿ ಮಾಡಬೇಕು. ಜಿಂದಾ ಲ್ ಕಂಪನಿ ಗೆ ನೀಡಿರುವ ಭೂಮಿ ಹಿಂಪಡೆಯ ಬೇಕು ಎಂದು ಆಗ್ರಹಿಸಿದರು.
ಮೇಕೆದಾಟು ಯೋಜನೆ ಜಾರಿ ಕುರಿತು ಸರ್ಕಾರ ಮಾತುಕತೆಯಲ್ಲಿಯೇ ಕಾಲಹರಣ ಮಾಡುತ್ತಿದೆ. ಕೇಂದ್ರ ಹಾಗೂ ತಮಿಳುನಾಡು ಸರ್ಕಾರದೊಂ ದಿಗೆ ಮಾತುಕತೆ ಮಾಡಲಾಗುತ್ತದೆ ಎಂದು ರಾಜ್ಯದ ನಾಯಕರು ಹೇಳುತ್ತಿ ದ್ದಾರೆ. ಆದರೆ, ರಾಜ್ಯ ಸರ್ಕಾರಕ್ಕೆ ಯೋಜನೆ ಜಾರಿ ಕುರಿತು ಸ್ಪಷ್ಟ ಅಭಿಪ್ರಾ ಯವಿಲ್ಲ. ಜು.28ರೊಳಗೆ ಯೋಜನೆಗೆ ಶುಂಕು ಸ್ಥಾಪನೆ ಮಾಡದಿದ್ದರೆ ಪ್ರತಿಭಟನೆಯನ್ನು ತೀವ್ರ ಗೊಳಿಸುವುದಾಗಿ ಎಚ್ಚರಿಸಿದರು.
ಬಯಲು ಸೀಮೆ ಜಿಲ್ಲೆಗಳಿಗೆ ಅನುಕೂಲ: ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ರಾಮನಗರ, ಬೆಂಗಳೂರು ಕೋಲಾರ ಹಾಗೂ ತುಮಕೂರು ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ನೀರು ಕೊಡಬ ಹುದು. ಆದರೆ, ಯೋಜನೆಯ ವಿಚಾರ ದಲ್ಲಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂ ತ್ರಿಗಳಿಂದ ಹಿಡಿದು ಎಲ್ಲಾ ಸಚಿವರು ನಾಟಕ ಮಾಡುತ್ತಿದ್ದಾರೆ. ನಾಟಕ ಮಾಡುವುದನ್ನು ಬಿಟ್ಟು ಯೋಜನೆ ಆರಂಭಕ್ಕೆ ಮುಂದಾಗಿ ಎಂದರು.
ಕರ್ನಾಟಕದಿಂದ 25 ಮಂದಿ ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಆದರೆ, ಇವರಿಗೆ ಮೋದಿ ಎಂಬ ಪದ ಬಿಟ್ಟರೇ, ಕಾವೇರಿ, ಮೇಕೆದಾಟು, ಜಿಂದಾಲ್ ಕುರಿತು ಗೊತ್ತಿಲ್ಲ. ರಾಜ್ಯದ ಸಂಸದ್ ಸದಸ್ಯರೆಲ್ಲಾ ಸೇರಿ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಜಲಾಶಯ ಮಾರಿಬಿಟ್ಟಿದ್ದಾರಾ?: ಮಂಡ್ಯದ ರೈತರು ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ, ಸಿಎಂ ಕುಮಾರಸ್ವಾಮಿ ಕಾವೇರಿ ಪ್ರಾಧಿಕಾರದ ಮುಂದೆ ಪ್ರತಿಭಟನೆ ಮಾಡಿ ಎಂದು ಬಾಲಿಷ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಜಲಾಶಯಗಳನ್ನು ಪ್ರಾಧಿಕಾರಕ್ಕೆ ಮಾರಾಟ ಬಿಟ್ಟಿದ್ದಾರ? ಎಂದು ಪ್ರಶ್ನಿಸಿದರು. ರಾಜ್ಯಕ್ಕೆ ತೊಂದರೆಯಾ ಗುವ ಪ್ರಾಧಿಕಾರದ ತೀರ್ಮಾನವನ್ನು ಒಪ್ಪಲೇ ಬಾರದು. ಜಿಲ್ಲೆಯ ರೈತರಿಗೆ ನೀರು ಕೊಡಲೇ ಬೇಕು. ಇಲ್ಲಾವದರೇ ರಾಜಾದ್ಯಾಂತ ಹೋರಾಟ ಮಾಡಲಾ ಗುವುದು ಎಂದು ಎಚ್ಚರಿಕೆ ನೀಡಿದರು.
ಪೊಲೀಸರ ಬಗ್ಗೆ ಸರ್ಕಾರಕ್ಕೆ ಪ್ರಾಮಾಣಿಕತೆ ಇಲ್ಲ: ಪೊಲೀಸರ ನರಕದ ಜೀವನ ಸಾಗಿಸುತ್ತಿದ್ದಾರೆ. ಗೃಹ ರಕ್ಷಕ ದಳ ಚರಂಡಿಯಲ್ಲಿದ್ದಾರೆ. ಇವರ ಬಗ್ಗೆ ಕೇಳುವವರು ಗತಿಯಿಲ್ಲ. ಸರ್ಕಾರಕ್ಕೆ ಇವರ ಬಗ್ಗೆ ಕಾಳಜಿಯೂ ಇಲ್ಲ, ಪ್ರಾಮಾಣಿಕತೆಯೂ ಇಲ್ಲ. ಪೊಲೀಸರ ಪರವಾಗಿರುವ ಔರಾದ್ಕರ್ ವರದಿ ಜಾರಿ ಆಗಬೇಕು. ಇಲ್ಲವಾದರೇ, ರಾಜ್ಯ ಬಂದ್‌ಗೆ ಕರೆ ನೀಡುವುದಾಗಿ ಸರ್ಕಾರಕ್ಕೆ ಮತ್ತೂಂದು ಎಚ್ಚರಿಕೆ ನೀಡಿದರು.
ಜಿಂದಾಲ್ ಕಂಪನಿಗೆ ಸರ್ಕಾರದಿಂದ ಭೂಮಿ ಮಾರಾಟ: ಜಿಂದಾಲ್ ಕಂಪನಿಗೆ 1995ರಿಂದ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಭೂಮಿ ಮಾರಾಟ ಮಾಡಿದ್ದಾರೆ. ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕನ್ನಡ ಪರ ಸಂಘಟನೆ ಮೇಲೆ ನೋಟಿಸ್ ನೀಡಲಾಗಿದೆ. ಇದಕ್ಕೆ ಹೆದರದೇ, ಜುಲೈ 6ರಂದು ರಸ್ತೆ ತಡೆ ನಡೆಸಲಾಗುತ್ತದೆ. ಕಂಪನಿಗೆ 3666 ಎಕರೆ ಭೂಮಿ ನೀಡಬಾರದು ಎಂದು ಒತ್ತಾಯ ಮಾಡುವುದಾಗಿ ತಿಳಿಸಿದರು.ಪ್ರತಿಭಟನೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.